ಸಹಾಯಧನ ಸೌಲಭ್ಯ : ತಾಲೂಕು ತೋಟಗಾರಿಕೆ ಇಲಾಖೆ ವತಿಯಿಂದ 2022 – 2023 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ಯಾಕ್ ಹೌಸ್ ಘಟಕ ನಿರ್ಮಾಣ , ನೆರಳು ಪರದೆ ಘಟಕ ನಿರ್ಮಾಣ , ಸಂಸ್ಕರಣಾ ಘಟಕ ನಿರ್ಮಾಣಕ್ಕಾಗಿ ಸಹಾಯಧನ ಸೌಲಭ್ಯವನ್ನು ಪಡೆಯಲು ಅರ್ಹ ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತಮ್ಮ ಹೋಬಳಿ ವ್ಯಾಪ್ತಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಂದ ಪಡೆದು , ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಅ .7 ರೊಳಗೆ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ . ಹೆಚ್ಚಿನ ಮಾಹಿತಿಗೆ ತಾಲೂಕು ತೋಟಗಾರಿಕೆ ಕಚೇರಿಯನ್ನು ಅಥವಾ ದೂ : 08182-295415 ಇಲ್ಲಿಗೆ ಸಂಪರ್ಕಿಸುವುದು.
ಅರ್ಜಿಯನ್ನು ನಿಗದಿತ ಸಮಯದ ಒಳಗಡೆ ಸಲ್ಲಿಸಿದರೆ ಮಾತ್ರ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ, ಸಹಾಯಧನ ಸೌಲಭ್ಯಗಳು ಕಡಿಮೆ ಆಗಿರುವುದರಿಂದ ಬೇಗನೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಹೆಚ್ಚಿನ ಆದ್ಯತೆ ನೀಡಲಾಗುವುದು.
ತರಬೇತಿ : ರೈತರಿಂದ ಅರ್ಜಿ :
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕ್ರಿಯಾ ಯೋಜನೆಯ ನ್ವಯ ಕಲ್ಯಾಣ ಕರ್ನಾಟಕ ವಿಭಾಗದ ವ್ಯಾಪ್ತಿಯ ಏಳು ಜಿಲ್ಲೆಗಳ ರೈತರಿಗೆ ಬೆಂಗಳೂರಿನ ನ್ಯಾಶನಲ್ ಸೀಡ್ಸ್ ಕಾರ್ಪೊರೇಷನ್ ಲಿಮಿಟೆಡ್ ಇವರ ಸಹಯೋಗದೊಂದಿಗೆ ವಿವಿಧ ತರಕಾರಿ ಬೀಜಗಳ ಕಿಟ್‌ಗಳನ್ನು ಪೂರೈಸಲು ಹಾಗೂ ಗೋಕೃಪಾಮೃತ ತಯ್ಯಾರಿಕಾ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ , ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಆಸಕ್ತಿಯುಳ್ಳ ರೈತರು ಸಂಘದ www.kkhracs.com ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ ಅ .1 ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ
ಕೃಷಿ ವಾಹಿನಿ🌱
ವೆಬ್ಸೈಟ್ನ ಸಂಪರ್ಕದಲ್ಲಿರಿ..