ಪ್ರೀಯ ರೈತರೇ ಸರ್ಕಾರವು ರೈತರಿಗೆ ಮಳೆಹಾನಿ ಪರಿಹಾರಕ್ಕೆ ಮುಂದಾಗಿದ್ದು ಈಗಾಗಲೇ ಸ್ವಲ್ಪ ಪ್ರಮಾಣದಲ್ಲಿ ಪರಿಹಾರ ಹಣವನ್ನು ನೀಡಿದ್ದು 2021&22ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಿದ ರೈತರಿಗೆ ವಿಮೆ ಹಣ ಜಮಾ ಆಗಿದೆ. ಬೆಳೆ ವಿಮೆಗಾಗಿ ಕಾಯುತ್ತಿರುವ ರೈತರಿಗೆ ಸಂತಸದ ಸುದ್ದಿ. ಮುಖ್ಯವಾಗಿ ಸರ್ಕಾರವು ಈಗಾಗಲೇ ಹಲವು ಜಿಲ್ಲೆಗಳಲ್ಲಿ ಸರ್ವೆ ಮಾಡಿ ರೈತರಿಗೆ ಸಹಾಯ ಆಗುವಂತೆ ಮಾಡಲಾಗುತ್ತದೆ. ಅದೇ ರೀತಿ ಈಗ 2021&22ನೇ ಸಾಲಿನ ಬೆಳೆ ವಿಮೆ ಮಾಡಿಸಿದ ಕಲ್ಬುರ್ಗಿ, ಗದಗ, ಚಿತ್ರದುರ್ಗ,ಹಾವೇರಿ ಜಿಲ್ಲೆ ಸೇರಿದಂತೆ ವಿಮೆ ಹಣವು ಜಮಾವಣೆ ಆಗಿದೆ. ಕಲ್ಬುರ್ಗಿ ಜಿಲ್ಲೆಯಲ್ಲಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ಬೆಳೆ ವಿಮೆ ನೋಂದಣಿ ಮಾಡಿಸಿದ 79,277 ರೈತರಿಗೆ ಬೆಳೆ ವಿಮೆ ಪರಿಹಾರ ಹಣ ಜಮಾವಣೆ ಆಗಿದೆ.
ಫಸಲ್ ಬೀಮಾ ಯೋಜನೆ ನೋಂದಣಿಗೆ ಮನವಿ:
ಕೃಷಿ ಇಲಾಖೆಯು ಜಿಲ್ಲೆಯಲ್ಲಿ 2022 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಮನವಿ ಮಾಡಿದೆ.
ಈ ಯೋಜನೆಯಡಿ ಪ್ರಸಕ್ತ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಶೇ .75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇಕಡಾ 25 ರಷ್ಟು ಬೆಳೆ ವಿಮಾ ಪರಿಹಾರವನ್ನು , ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ . 50 ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇಕಡಾ 25 ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು .
ಹಿಂಗಾರು ಹಂಗಾಮಿನಲ್ಲಿ ಹುರುಳಿ (ಮಳೆಯಾಶ್ರಿತ), ಜೋಳ (ಮ.ಆ.) , ಕಡಲೆ ( ಮ.ಆ.) , ಮುಸುಕಿನ ಜೋಳ ( ನೀರಾವರಿ ) ಹಾಗೂ ಬೇಸಿಗೆ ಹಂಗಾಮಿನಲ್ಲಿ ಭತ್ತ ( ನೀ ) , ನೆಲಗಡಲೆ ( ನೀ ) ಬೆಳೆಗಳನ್ನು ವಿಮಾ ಯೋಜನೆಗೆ ಒಳಪಡಿಸಲಾಗಿದೆ ಎಂದು ಕೃಷಿ ಇಲಾಖೆಯು ಮಾಹಿತಿ ನೀಡಿದೆ.
ಹೆಚ್ಚಿನ ಮಾಹಿತಿಗಾಗಿ
ಕೃಷಿ ವಾಹಿನಿ🌱
ವೆಬ್ಸೈಟ್ ಸಂಪರ್ಕದಲ್ಲಿರಿ…