ಪ್ರಿಯ ರೈತರೇ, ಫಸಲ್ ಬಿಮಾ ಯೋಜನೆಯಡಿ ಬೆಳೆಗೆ ವಿಮಾ ನಷ್ಟ ಪರಿಹಾರದ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪ್ರಸಕ್ತ ಸಾಲು ಮತ್ತು ಹಂಗಾಮಿನ ಬೆಳೆಗೆ ವಿಮಾ ನಷ್ಟ ಪರಿಹಾರದ ನೋಂದಣಿಗೆ ಅವಕಾಶವಿದೆ.
2022ರ ಹಿಂಗಾರಿಗೆ ಮುಸುಕಿನ ಜೋಳ(ನೀರಾವರಿ) ಬೆಳೆಗೆ ಡಿಸೆಂಬರ್ 16 ಮತ್ತು ಕಡಲೆ(ಮಳೆ ಆಶ್ರಿತ) ಬೆಳೆಯಡಿ ನ.30ರೊಳಗಾಗಿ ನೋಂದಾಯಿಸಿಕೊಳ್ಳಲು ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ. 2022-23ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಸಂಭವಿಸುವ ಹವಾಮಾನ ವೈಪರಿತ್ಯಗಳಾದ ಹೆಚ್ಚಿನ ಮಳೆ ನೆರೆ, ಪ್ರವಾಹಗಳಿಂದ ಬೆಳೆ ಮುಳುಗಡೆ, ದೀರ್ಘಕಾಲದ ತೇವಾಂಶ ಕೊರತೆ ತೀವ್ರ ಬರಗಾಲ ಮುಂತಾದವುಗಳಿಂದ ಯಾವುದೇ ಅಧಿಸೂಚಿತ ವಿಮಾ ಘಟಕದಲ್ಲಿ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ನಿರೀತ ಇಳುವರಿಯ ಪ್ರಾರಂಭಿಕ ಇಳುವರಿಯೂ ಶೇ.50ಕ್ಕಿಂತ ಕಡಿಮೆ ಇದ್ದರೆ, ವಿಮೆ ಮಾಡಿಸಿದ ರೈತರಿಗೆ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ.25 ಹಣ ನೀಡಲಾಗುವುದು.
ಈ ಯೋಜನೆಯಡಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (14 ದಿನ) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಆಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಠ ನಿರ್ಧಾರ ಮಾಡಿ ಬೆಳೆನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲ ಬೆಳೆಗಳನ್ನು ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರೈತರು ಈ ಬಹುಮುಖ್ಯ ಮಾಹಿತಿಯ ಸದುಪಯೋಗವನ್ನು ಪಡೆದುಕೊಂಡು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು.
ಕೃಷಿ ಬಗ್ಗೆ ಮಾಹಿತಿಗಾಗಿ ಕೃಷಿ ವಾಹಿನಿ ಗ್ರೂಪ್ಸನ್ನು ಸೇರಲು ಕೆಳಕಂಡ ಲಿಂಕ್ ಒತ್ತಿ 👇
https://chat.whatsapp.com/CatKjFMzi1f5uiEQn86AW0