ಪ್ರಿಯರೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಂದು ಸಂತಸದ ಸುದ್ದಿ ಬಂದಿದೆ. ಪರಿಶಿಷ್ಟ ಜಾತಿ ವರ್ಗದವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಯಿಂದ ದ್ವಿಚಕ್ರ ವಾಹನ ಖರೀದಿಸಲು 70,000 ರೂಪಾಯಿಗಳಷ್ಟು ಹಣವನ್ನು ನೀಡಲಾಗುತ್ತಿದೆ. ಇದರಲ್ಲಿ ನಿಮಗೆ 50,000 ರೂಪಾಯಿಗಳಷ್ಟು ಹಣವನ್ನು ಉಚಿತವಾಗಿ ಅಂದರೆ ಸಬ್ಸಿಡಿಯಲ್ಲಿ ನೀಡಲಾಗುವುದು. ಇನ್ನುಳಿದ 20,000 ರೂಪಾಯಿಗಳನ್ನು ಮಾತ್ರ ನೀವು ಮರುಪಾವತಿ ಮಾಡಬೇಕಾಗುತ್ತದೆ.
ಈ ಯೋಜನೆಯಲ್ಲಿ ದ್ವಿಚಕ್ರ ವಾಹನ ಖರೀದಿಸಲು ಸಬ್ಸಿಡಿಯನ್ನು ಪಡೆಯುವುದು ಹೇಗೆ ಮತ್ತು ಅರ್ಜಿಗಳನ್ನು ಎಲ್ಲಿ ಸಲ್ಲಿಸಬೇಕು ಎಂಬುದರ ಬಗ್ಗೆ ಇರುವ ಸಂಪೂರ್ಣ ಮಾಹಿತಿಯನ್ನು ಇವತ್ತಿನ ದಿನ ತಿಳಿದುಕೊಳ್ಳೋಣ.
ಇಡೀ ಕರ್ನಾಟಕ ರಾಜ್ಯದಾದ್ಯಂತ ಸುಮಾರು 28,000 ದ್ವಿಚಕ್ರ ವಾಹನಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಹಾಗೂ ನಿರುದ್ಯೋಗಸ್ಥ ಯುವಕ ಮತ್ತು ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುತ್ತಿದೆ. ಸ್ವಯಂ ಉದ್ಯೋಗ ಕೈಗೊಳ್ಳುವ ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಪ್ರತಿ ದ್ವಿಚಕ್ರ ವಾಹನಕ್ಕೆ 70,000 ರೂಪಾಯಿ ನಿಗದಿಗೊಳಿಸಲಾಗಿದ್ದು, ಅದರಲ್ಲಿ 50,000 ರೂಪಾಯಿ ಸಬ್ಸಿಡಿ ಮತ್ತು ಉಳಿದ 20,000 ರೂಪಾಯಿಗಳನ್ನು ಬ್ಯಾಂಕ್ನಿಂದ ಸಾಲದ ರೂಪದಲ್ಲಿ ನೀಡಲಾಗುವುದು.
ನೀವು ಈ ಯೋಜನೆ ಲಾಭವನ್ನು ಪಡೆಯಲು ಸೇವಾ ಸಿಂದು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅಥವಾ ಇಲ್ಲದಿದ್ದರೆ ನಿಮಗೆ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಭೇಟಿ ನೀಡಿ ಈ ಯೋಜನೆ ಬಗ್ಗೆ ತಿಳಿಸಬಹುದು.
ಈ ರೀತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿರುವಂತಹ ನಿರುದ್ಯೋಗಿ ಯುವಕ ಮತ್ತು ಯುವತಿಯರು ಸ್ವಯಂ ಉದ್ಯೋಗಕ್ಕಾಗಿ ದ್ವಿಚಕ್ರ ವಾಹನ ಕೊಂಡುಕೊಳ್ಳಲು ಎಪ್ಪತ್ತು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದು.
ಸಾರ್ವಜನಿಕರು ಈ ಉಪಯುಕ್ತ ಮಾಹಿತಿಯ ಸದುಪಯೋಗವನ್ನು ಪಡೆದುಕೊಂಡು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು.
ಕೃಷಿ ಸಂಬಂಧಿತ ಅಧಿಕೃತ ಮಾಹಿತಿ ಪಡೆಯಲು 👇