ಓದುಗರೇ ಸರ್ಕಾರವು ಸಮಾಜದಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ರಾಜ್ಯದ ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಅದೇ ರೀತಿ ಈಗ ಸರ್ಕಾರವು ಸಾಮರ್ಥ್ಯ ಯೋಜನೆ ಪ್ರಸಕ್ತ ವರ್ಷದಿಂದಲೇ ಜಾರಿಮಾಡಲು ಮುಂದಾಗಿದೆ. ಮಹಿಳೆಯರ ಸ್ವಯಂ ಉದ್ಯೋಗಕ್ಕೆ ನೆರವಾಗುವ ಸ್ತ್ರೀ ಸಾಮರ್ಥ್ಯಯೋಜನೆಯನ್ನು ಪ್ರಸಕ್ತ ವರ್ಷದಿಂದಲೇ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ನಡೆದ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಈ ಯೋಜನೆಯ ಲಾಭ ಬಗ್ಗೆ ಹೇಳಿದರು.

ಈ ಯೋಜನೆಯ ಉದ್ದೇಶ ಹಾಗೂ ಯೋಜನೆ ಬಗ್ಗೆ ಹೇಳಬೇಕೆಂದರೆ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮದಲ್ಲೂ ಎರಡು ಮಹಿಳಾ ಸಂಘಗಳಿಗೆ 5 ಲಕ್ಷ ರೂ.ಆರ್ಥಿಕ ನೆರವು ನೀಡಲು ಮುಂದಾಗಿದೆ. ಮಹಿಳೆಯರ ಪೌಷ್ಟಿಕತೆ ಹೆಚ್ಚಿಸಲು, ಯುವತಿಯರಿಗೆ ಸ್ವಯಂ ರಕ್ಷಣೆ ತರಬೇತಿಗಾಗಿ ಸ್ತ್ರೀ ಶಕ್ತಿ ಸಂಘಗಳಿಗೆ ಸ್ತ್ರೀ ಸಾಮಾಥ್ಯ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಸರ್ಕಾರ ತಿಳಿಸಿದೆ. ಮಹಿಳೆಯರಿಗೆ ವಿಶೇಷ ತರಗತಿ ಕೊಠಡಿ , ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡಿರುವುದನ್ನು ಉಲ್ಲೇಖಿಸಿದರು. ಈ ರೀತಿ ಹೊಸ‌‌ ಹೊಸ ಕಾರ್ಯಕ್ರಮಗಳನ್ನು ಮಹಿಳೆಯರಿಗೆ ಹಮ್ಮಿಕೊಂಡಿದ್ದು ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದೆ.

ಅದೇ ರೀತಿ ಇನ್ನೋಂದು ವಿಷಯ ಏನೆಂದರೆ ನಿರ್ಭಯ ಯೋಜನೆಯಡಿ ಬೆಂಗಳೂರಿನಲ್ಲಿ 7000 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ರಾಜ್ಯದಲ್ಲಿ ಸರ್ಕಾರವು ಹೆಚ್ಚಿನ ಆದ್ಯತೆ ಮಹಿಳೆಯರ ರಕ್ಷಣೆಗೆ ಹೆಚ್ಚಿನ ಒತ್ತು ನೀಡಿ ಮಹಿಳೆಯರ ರಕ್ಷಣೆಗೆ ಪಿಂಕ್ ಸ್ಟಾಡ್ ಮಾಡಲಾಗಿದೆ. ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ , ಮಹಿಳಾ ಆಯೋಗದಿಂದ ಬರುವ ಪ್ರಕರಣಗಳನ್ನು ಏಳೆಂಟು ಗಂಟೆಯಲ್ಲಿ ದಾಖಲಿಸಿ ತನಿಖೆ ಆರಂಭಿಸಲು ಸೂಚನೆ ನೀಡಲಾಗುವುದು ಎಂದರಲ್ಲದೆ , ರಾಜ್ಯದಲ್ಲಿ ನಿರ್ಭಯ ಕಾನೂನು ಜಾರಿಗೊಳಿಸಲು ಸಿದ್ಧತೆ ನಡೆದಿದ್ದು ಈ ಕಾನೂನಿನ ಬಗ್ಗೆ ಪುರುಷರಿಗೆ ಮಾಹಿತಿ ನೀಡುವ ಕೆಲಸವನ್ನೂ ಎಂದರು.

ಬಹಳಷ್ಟು ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

ಅಧಿಕೃತ ಕೃಷಿಯ ಮಾಹಿತಿಗಾಗಿ ಕೃಷಿ ವಾಹಿನಿ ವೆಬ್ಸೈಟ್ನ ಸಂಪರ್ಕದಲ್ಲಿರಿ..

Leave a Reply

Your email address will not be published. Required fields are marked *