ಪ್ರಿಯರೇ, ಇಂಧನ ಇಲಾಖೆ ಕಡೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆ ತಂದಿದ್ದು, ತಿಂಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಪಡೆಯುವುದು ಹೇಗೆ? ಇದಕ್ಕೆ ಬೇಕಾಗುವ ದಾಖಲೆಗಳೇನು? ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ? ಎಂಬುದರ ಬಗ್ಗೆ ಇರುವ ಸಂಪೂರ್ಣವಾದ ಮಾಹಿತಿಯನ್ನು ಇವತ್ತಿನ ದಿನ ತಿಳಿದುಕೊಳ್ಳೋಣ.
ರಾಜ್ಯದ ಜನತೆಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇಂಧನ ಇಲಾಖೆಯ ಕಡೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ತಿಂಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿಗೆ ತಂದಿದ್ದು, ಅರ್ಹ ಗ್ರಾಹಕರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಅಂತಹ ಅರ್ಹ ಗ್ರಾಹಕರು ಸೂಕ್ತ ದಾಖಲಾತಿಗಳನ್ನು ಅರ್ಜಿ ಜೊತೆಗೆ ಲಗತ್ತಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಇದಾದ ನಂತರ ವಿದ್ಯುತ್ ಸರಬರಾಜು ನಿಗಮ ಅಥವಾ ಕೆಇಬಿಗೆ ಭೇಟಿ ನೀಡಿ ನಿಮ್ಮ ಅರ್ಜಿಯನ್ನು ಸಲ್ಲಿಸಿ ತಿಂಗಳಿಗೆ 75 ಯೂನಿಟ್ ಉಚಿತವಾಗಿ ಪಡೆದುಕೊಳ್ಳಬಹುದು.
ಈ ಯೋಜನೆಯ ಲಾಭ ಪಡೆದುಕೊಳ್ಳಲು ಬೇಕಾಗುವ ದಾಖಲಾತಿಗಳನ್ನು ನೋಡುವುದಾದರೆ,
* ಅಪ್ಲಿಕೇಶನ್ ಫಾರ್
* ಆಕ್ನಾಲೈಜ್ಮೆಂಟ್ ಕಾಪಿ
* ಬಿಪಿಎಲ್ ಕಾರ್ಡ್ ಜೆರಾಕ್ಸ್
* ಆಧಾರ್ ಕಾರ್ಡ್ ಜೆರಾಕ್ಸ್
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
* ನೀವು ಬಾಡಿಗೆ ಮನೆಯಲ್ಲಿದ್ದರೆ ಅದರ ಬಾಂಡ್ ನೀಡಬೇಕು.
ಈ ಮೇಲೆ ಹೇಳಿದ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ನೀವು ಸೇವಾ ಸಿಂಧುವಿನಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ನಂತರ ಒಂದು ದೃಢೀಕರಣ ಪತ್ರ ಬರುತ್ತದೆ. ಆ ದೃಢೀಕರಣ ಪತ್ರದ ಜೊತೆಗೆ ಅಪ್ಲಿಕೇಶನ್ ಫಾರ್ ಮತ್ತು ಮೇಲೆ ಹೇಳಿದ ಎಲ್ಲ ದಾಖಲಾತಿಗಳನ್ನು ಲಗತ್ತಿಸಿ ನಿಮಗೆ ಸಂಬಂಧಪಟ್ಟ ವಿದ್ಯುತ್ ಸರಬರಾಜು ನಿಗಮ ಅಥವಾ ಕೆಇಬಿಗೆ ಭೇಟಿ ನೀಡಿ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕು.
ಈ ರೀತಿಯಾಗಿ ನೀವು ತಿಂಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಪಡೆಯುವ ಯೋಜನೆಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಸಾರ್ವಜನಿಕರು ಅಥವಾ ಅರ್ಹ ಗ್ರಾಹಕರು ಈ ಉಪಯುಕ್ತ ಮಾಹಿತಿಯ ಸದುಪಯೋಗವನ್ನು ಪಡೆದುಕೊಂಡು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು