ಪ್ರಿಯ ರೈತರೇ, ರಾಜ್ಯ ಸರ್ಕಾರದ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು 2022-23 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯ ಅಡಿಯಲ್ಲಿ ಒಂದು ಮಿಶ್ರತಳಿ ಹಸು ಅಥವಾ ಎಮ್ಮೆಯನ್ನು ಸಹಾಯಧನದೊಂದಿಗೆ ವಿತರಿಸಲು ನಿರ್ಧರಿಸಲಾಗಿದೆ.

ಒಟ್ಟಾರೆ 62 ಸಾವಿರ ರೂಪಾಯಿ ವೆಚ್ಚದ ಘಟಕಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ33.33 ಅಂದರೆ 20,665 ರೂಪಾಯಿ ಹಾಗೂ ಸಾಮಾನ್ಯ ವರ್ಗದ ಅಥವಾ ಜನರಲ್ ಕೆಟಗರಿ ಫಲಾನುಭವಿಗಳಿಗೆ ಶೇ.25 ಅಂದರೆ 15,500 ರೂಪಾಯಿ ಸಹಾಯಧನವನ್ನು ಒದಗಿಸಲಾಗುವುದು. ಉಳಿದ ಮೊತ್ತವನ್ನು ಅಂದರೆ ಸಹಾಯಧನ ಹೊರತುಪಡಿಸಿ ಉಳಿದ ಮೊತ್ತವನ್ನು ಫಲಾನುಭವಿಗಳಿಂದ ವಂತಿಗೆ ರೂಪದಲ್ಲಿ ಪಡೆಯಲಾಗುವುದು.

ಪ್ರತಿಯೊಂದು ಜಿಲ್ಲೆಯಲ್ಲಿ ಸಾಮಾನ್ಯ ವರ್ಗದ – 46, ಪರಿಶಿಷ್ಟ ಜಾತಿ-10 ಹಾಗೂ ಪರಿಶಿಷ್ಟ ಪಂಗಡದ -02 ಫಲಾನುಭವಿಗಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಈ ಯೋಜನೆಯ ಅರ್ಹತೆಗಳ ಪ್ರಕಾರ ಸರ್ಕಾರದ ನಿಯಮಗಳಂತೆ ಮಹಿಳೆಯರು, ವಿಶೇಷ ಚೇತನರಿಗೆ ಅನುಗುಣಕ್ಕೆ ತಕ್ಕಂತೆ ಆದ್ಯತೆ ನೀಡಲಾಗುವುದು.

ಈ ಯೋಜನೆ ಲಾಭವನ್ನು ಪಡೆಯಲು ಇರಬೇಕಾದ ಅರ್ಹತೆಗಳನ್ನು ನೋಡುವುದಾದರೆ,

» ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.

» ಕಡ್ಡಾಯವಾಗಿ ಪ್ರೂಟ್ಸ್ (FRUITS) ತಂತ್ರಾಂಶದಲ್ಲಿ ತಮ್ಮ ಹೆಸರನ್ನು ನೊಂದಾಯಿಸಿರಬೇಕು.

» ನಿಮಗೆ ಸಂಬಂಧಿಸಿದ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಯಿಂದ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಅಥವಾ ಆಸಕ್ತರು ಆಯಾ ತಾಲ್ಲೂಕುಗಳ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳಿಂದ ನಿಗದಿ ಪಡಿಸಿದ ನಮೂನೆಯ ಅರ್ಜಿ ಫಾರ್ಮ್ ತೆಗೆದುಕೊಂಡು , ಅದನ್ನು ಭರ್ತಿ ಮಾಡಿ.

ದಾಖಲೆಗಳನ್ನು ಸಲ್ಲಿಸುವ ಕೊನೆಯ ದಿನಾಂಕ 05/01/2023 ಆಗಿರುತ್ತದೆ.

ಈ ಯೋಜನೆ ಬಗೆಗಿನ ಇನ್ನೂ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ), ಪಶು ಆಸ್ಪತ್ರೆ,

ದೇವನಹಳ್ಳಿ-9480910509

ದೊಡ್ಡಬಳ್ಳಾಪುರ-9632047920

ಹೊಸಕೋಟೆ-9448988649

ನೆಲಮಂಗಲ-9845637387 ಅವರನ್ನು ಸಂಪರ್ಕಿಸಬಹುದು ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ತಿಳಿಸಿದ್ದಾರೆ.

ಎಲ್ಲಾ ಫಲನುಭವಿಗಳು ಹಾಗೂ ಅಭ್ಯರ್ಥಿಗಳು ಈ ಬಹುಮುಖ್ಯ ಮಾಹಿತಿಯ ಸದುಪಯೋಗವಂನು ಪಡೆದುಕೊಂಡು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು.

Leave a Reply

Your email address will not be published. Required fields are marked *