ಪ್ರಿಯರೇ, ತಮ್ಮೆಲ್ಲರಿಗೂ ವಿವಿಧ ಕಾರ್ಯಗಳಿಗೆ ಅಂದರೆ ಕೆಲಸಗಳಿಗೆ ವಾಹನಗಳ ಅವಶ್ಯಕತೆ ಇದೆ. ಅದರಲ್ಲಿ ಪ್ರಮುಖವಾಗಿ ದ್ವಿಚಕ್ರ ವಾಹನಗಳ ಅವಶ್ಯಕತೆ ತುಂಬಾನೇ ಇದೆ. ಅದಕ್ಕಾಗಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ದ್ವಿಚಕ್ರ ವಾಹನಗಳು ಪಡೆಯಲು ನಿಗಮಕ್ಕೆ ಅರ್ಜಿ ಸಲ್ಲಿಸಲು ಕೋರಿದೆ.

2022-23ನೇ ಸಾಲಿನ ಗುರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಈ ಕೆಳಕಂಡ ಯೋಜನೆಗೆ ಈ ನಿಗಮದ ವ್ಯಾಪ್ತಿಗೆ ಒಳಪಡುವ ಉಪಜಾತಿಗಳ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ :

ಎಲೆಕ್ಟ್ರಿಕ್ ಮತ್ತು ಇತರೆ ದ್ವಿಚಕ್ರ / ತ್ರಿಚಕ್ರ ವಾಹನ ಖರೀದಿ (ಇ-ಕಾಮರ್ಸ್‌ ಅಡಿಯಲ್ಲಿ ಕಂಪನಿಗಳಿಂದ ಗ್ರಾಹಕರಿಗೆ ಸರಕು / ಸಾಮಗ್ರಿಗಳು ತಲುಪಿಸಲು) ವಾಹನದ ಘಟಕ ವೆಚ್ಚದಲ್ಲಿ ನಿಗಮದಿಂದ ರೂ. 50,000/- ಗಳು ಸಹಾಯಧನ ಹಾಗೂ ರೂ. 20,000/- ಗಳು ಸಾಲ ಮಂಜೂರು ಮಾಡಲಾಗುವುದು.

ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್‌ಲೈನ್‌ ಮುಖಾಂತರ ಆಸಕ್ತರು ಮೇಲಿನ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿ ಸದುಪಯೋಗಪಡಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ.

ಈ ಯೋಜನೆಯ ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳನ್ನು ನೋಡುವುದಾದರೆ,

» ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.

» ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

» ಈ ನಿಗಮದ ವ್ಯಾಪ್ತಿಗೆ ಒಳಪಟ್ಟಿರುವ ಉಪಜಾತಿಯ ಅರ್ಜಿದಾರರು ಮಾತ್ರ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

» ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ. 1.50,000/- ಮತ್ತು ನಗರ ಪ್ರದೇಶದಲ್ಲಿ ರೂ. 2,00,000/-ಗಳ ಮಿತಿಯಲ್ಲಿರಬೇಕು.

» ಅರ್ಜಿದಾರರು ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ಕನಿಷ್ಠ 21 ವರ್ಷಗಳಿಂದ ಗರಿಷ್ಠ 50 ವರ್ಷದೊಳಗಿರಬೇಕು.

» ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು ಮತ್ತು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.

» ಅರ್ಜಿದಾರರು ಕಡ್ಡಾಯವಾಗಿ ಸಂಬಂಧಿಸಿದ ವಾಹನ ಚಾಲನಾ ಪರವಾನಗಿ ಪತ್ರ ಹೊಂದಿರಬೇಕು.

» ಸರ್ಕಾರದ ಆದೇಶ ಸಂಖ್ಯೆ: ಸಕಇ 4 ಎಸ್‌ಡಿಸಿ 2022 ದಿನಾಂಕ : 05.01.2023 ರನ್ವಯ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕದ ನಿರ್ಬಂಧವನ್ನು ಸಡಿಲಿಸಲಾಗಿದೆ.

ಯೋಜನೆಯ ಲಾಭ ಪಡೆದುಕೊಳ್ಳಲು ಇರಬೇಕಾದ ಅಗತ್ಯ ದಾಖಲೆಗಳನ್ನು ನೋಡುವುದಾದರೆ,

* ಡ್ರೈವಿಂಗ್ ಲೈಸೆನ್ಸ್.

* ಶೈಕ್ಷಣಿಕ ಪ್ರಮಾಣ ಪತ್ರ.

* ಅರ್ಜಿದಾರರ ಭಾವಚಿತ್ರ ಪಾಸ್ ಪೋರ್ಟ್ ಸೈಜ್.

* ಆದಾಯ ಪ್ರಮಾಣ ಪತ್ರ.

* ಜಾತಿ ಪ್ರಮಾಣ ಪತ್ರ.

* ವೋಟರ್ ಐಡಿ ಮತ್ತು ಪಡಿತರ ಚೀಟಿ.

ಆಸಕ್ತರು ಅರ್ಜಿಗಳನ್ನು ಎಲ್ಲಿ ಸಲ್ಲಿಸಬೇಕು? ಎಂಬುದನ್ನು ನೋಡುವುದಾದರೆ,

1. ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/

2. ಗ್ರಾಮ ಒನ್ ಕೇಂದ್ರಗಳಲ್ಲಿ.

3. ಕರ್ನಾಟಕ ಒನ್ ಕೇಂದ್ರಗಳಲ್ಲಿ.

4. ಬೆಂಗಳೂರು ಒನ್ ಕೇಂದ್ರಗಳಲ್ಲಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16/01/2023 ನಿಗದಿಪಡಿಸಿದೆ.

ಕೃಷಿ ಸಂಬಂಧಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ..

Leave a Reply

Your email address will not be published. Required fields are marked *