ಪ್ರಿಯ ರೈತರೇ, ನೀವೇನಾದರೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿದ್ದರೆ ಪ್ರತಿಯೊಬ್ಬರಿಗೂ ಸಹ 2,000 ರೂಪಾಯಿಗಳನ್ನು ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವದು. ಇದನ್ನು ಪಡೆದುಕೊಳ್ಳುವುದು ಹೇಗೆ? ಈ ಯೋಜನೆ ಲಾಭ ಪಡೆಯಲು ಇರಬೇಕಾದ ಅರ್ಹತೆಗಳೇನು? ಇವೆಲ್ಲವುಗಳ ಬಗ್ಗೆ ಇರುವ ಸಂಪೂರ್ಣವಾದ ಮಾಹಿತಿಯನ್ನು ಇವತ್ತಿನ ದಿನ ತಿಳಿದುಕೊಳ್ಳೋಣ.

. ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವಂತಹ ಪ್ರತಿಯೊಬ್ಬ ರೈತ ಕುಟುಂಬಕ್ಕೂ 2,000 ರೂಪಾಯಿಗಳನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡುವ ಯೋಜನೆ ಜಾರಿಗೆ ತರಲಾಗುತ್ತಿದೆ.

ಈ ಯೋಜನೆ ಲಾಭ ಪಡೆಯಲು ಇರಬೇಕಾದ ಅರ್ಹತೆಗಳನ್ನು ನೋಡುವುದಾದರೆ,

» ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

» ಬಿಪಿಲ್ ಪಡಿತರ ಚೀಟಿಯನ್ನು ಹೊಂದಿರಬೇಕು.

» ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.

ಬಿಪಿಎಲ್ ಕಾರ್ಡ್ ಹೊಂದಿರುವಂತಹ ರೈತ ಕುಟುಂಬಗಳಿಗೆ ಪ್ರತಿ ತಿಂಗಳು 2,000 ರೂಪಾಯಿಗಳ ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ. ಯೋಜನೆ ಬಗ್ಗೆ ಇರುವ ಸಂಪೂರ್ಣ ಮಾಹಿತಿಯನ್ನು ಮುಂದೆ ಬರುವ ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದೆಂದು ಕಂದಾಯ ಸಚಿವರಾದಂತಹ ಆರ್. ಅಶೋಕ್ ಅವರು ತಿಳಿಸಿದ್ದಾರೆ. ಈ ಯೋಜನೆ ಬಗ್ಗೆ ಇನ್ನು ಕೆಲವೇ ದಿನಗಳಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇದಿಷ್ಟು ಈ ಯೋಜನೆ ಬಗ್ಗೆ ಇರುವ ಸಂಪೂರ್ಣ ಮಾಹಿತಿಯಾಗಿದ್ದು, ಇದರ ಬಗ್ಗೆ ಇರುವ ಇನ್ನೂ ಹೆಚ್ಚಿನ ಮಾಹಿತಿಯನ್ನು ಮುಂದಿನ ತಿಂಗಳು ಮಂಡಿಸುವ ಬಜೆಟ್ ನಲ್ಲಿ ಘೋಷಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಅಧಿಕೃತ ಮಾಹಿತಿ ಸುದ್ದಿಗಳು ಹಾಗೂ ಎಲ್ಲಾ ರೀತಿಯ ಕೃಷಿ ಆಧಾರಿತ ಸುದ್ದಿ ತಿಳಿಯಲು ಕೃಷಿ ವಾಹಿನಿ (Krushivahini)ಜಾಲತಾಣದ ಸಂಪರ್ಕದಲ್ಲಿರಿ..

ಎಲ್ಲಾ ರೈತರು ಈ ಬಹುಮುಖ್ಯ ಮಾಹಿತಿಯ ಸದುಪಯೋಗವನ್ನು ಪಡೆದುಕೊಂಡು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು.

Leave a Reply

Your email address will not be published. Required fields are marked *