ಪ್ರಿಯ ರೈತರೇ, ಕೇಂದ್ರ ಸರ್ಕಾರವು ರೈತರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಇಲ್ಲಿಯವರೆಗೆ ಈ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ ಮೂರು ಸಮಾನ ಕಂತುಗಳಲ್ಲಿ ತಲಾ 2ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಆದರೆ ಈಗ 13ನೇ ಕಂತಿನ ಹಣ 2,000 ರೂಪಾಯಿ ಬರುತ್ತೋ ಇಲ್ಲ 3,000 ಸಾವಿರ ಬರುತ್ತೋ ಎಂದು ರೈತರು ಗೊಂದಲದಲ್ಲಿದ್ದಾರೆ. ಇತ್ತೀಚಿಗೆ ಇದರ ಬಗ್ಗೆ ಕುರಿತು ಸಾಕಷ್ಟು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರಿಂದ ರೈತರಿಗೆ ಪಿಎಂ ಕಿಸಾನ್ ಯೋಜನೆ ಬಗ್ಗೆ ಗೊಂದಲ ಉಂಟಾಗಿದೆ. ಇದರ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು ರೈತರಿಗೆ ಸ್ಪಷ್ಟನೆಯನ್ನು ನೀಡಿದ್ದಾರೆ.

ರೈತರು ಯಾವುದೇ ಸುಳ್ಳು ಸುದ್ದಿಗಳಿಗೆ ತಲೆ ಕೆಡಿಸಿಕೊಳ್ಳಬಾರದು. ಎಂದಿನಂತೆ ರೈತರಿಗೆ ಮುಂದಿನ ಕಂತಿನ ಹಣ 2,000 ರೂಪಾಯಿ ಜಮಾ ಆಗುತ್ತದೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಈಗ ಜಮಾ ಆಗಬೇಕಾಗಿರುವ 13ನೇ ಕಂತಿನ ಹಣವು ಸದ್ಯದಲ್ಲೇ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಿಎಂ ಕಿಸಾನ್ ಯೋಜನೆಯ ಉದ್ದೇಶಗಳೇನು?

ಕೇಂದ್ರ ಸರ್ಕಾರ ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಹಾಗೂ ರೈತರನ್ನು ಆತ್ಮಹತ್ಯೆ ಅಂತಹ ಕಠಿಣ ನಿರ್ಧಾರದಿಂದ ದೂರ ಮಾಡಲು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರವು ಸಹ ಈ ಯೋಜನೆ ಅಡಿ ಅರ್ಹ ಪಲಾನುಭವಿಗಳಿಗೆ ವರ್ಷಕ್ಕೆ 2 ಸಾವಿರ ರೂಪಾಯಿಗಳನ್ನು ಎರಡು ಕಂತುಗಳಂತೆ ಒಟ್ಟು ನಾಲ್ಕು ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ರಾಜ್ಯದಲ್ಲಿ 50 ಲಕ್ಷಕ್ಕಿಂತಲೂ ಹೆಚ್ಚು ಫಲಾನುಭವಿಗಳು ಈ ಯೋಜನೆ ಅಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಾರ್ಷಿಕವಾಗಿ ಹತ್ತು ಸಾವಿರ ರೂಪಾಯಿಗಳ ಸಹಾಯಧನವನ್ನು ಪಡೆದುಕೊಳ್ಳುತ್ತಿದ್ದಾರೆ.

13ನೇ ಕಂತಿನ ಹಣ ನಿಮಗೆ ಬರುತ್ತದೆಯೋ ಇಲ್ಲವೋ? ಲಿಸ್ಟ್ ನಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡುವುದು ಹೇಗೆ?

ಇದೀಗ ರಾಜ್ಯ ಸರ್ಕಾರ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತಿನ ಹಣವು ನಿಮ್ಮ ಖಾತೆಗೆ ಜಮಾ ಆಗಲಿದೆ. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಕಂತಿನ ಹಣ ಜಮಾ ಆಗುವುದಿಲ್ಲ. ಅರ್ಹ ರೈತರ ಫಲಾನುಭವಿಗಳ ಪಟ್ಟಿಯನ್ನು ನೀವು ಅಧಿಕೃತ ವೆಬ್ ಸೈಟ್ ನಲ್ಲಿ ಪರಿಶೀಲಿಸಬಹುದಾಗಿದೆ.

» ಇದಕ್ಕಾಗಿ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು.

» ಅಲ್ಲಿ ಮುಖಪುಟದಲ್ಲಿ ಕಾಣುವ “ಫಾರ್ಮರ್ಸ್ ಕಾರ್ನರ್” ಎಂಬ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಬೇಕು.

» ಇದಾದ ನಂತರ ಆ ಮುಖಪುಟದಲ್ಲಿ ಕಾಣುವ “ಬೆನಿಫಿಶರ್ಟ್ ಲಿಸ್ಟ್” ಎಂಬ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಬೇಕು.

» ಅಲ್ಲಿ ನಿಮಗೆ ಕೇಳಲಾಗುವ ಮಾಹಿತಿ ವಿವರಗಳನ್ನು ನೀಡಿದ ನಂತರ ನಿಮ್ಮ ಗ್ರಾಮದ ಅರ್ಹ ಫಲಾನುಭವಿಗಳ ಪಟ್ಟಿ ತೆರೆದುಕೊಳ್ಳುತ್ತದೆ.

» ಆ ಪಟ್ಟಿಯಲ್ಲಿ ನಿಮ್ಮ ಗ್ರಾಮದ ಅರ್ಹ ರೈತರ ಫಲಾನುಭವಿಗಳ ಪಟ್ಟಿಯಿದ್ದು ಆ ಪಟ್ಟಿಯಲ್ಲಿ ನೀವು ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಬಹುದು.

ಹೀಗೆ ರೈತರು ಬಿಡುಗಡೆಯಾಗಿರುವ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೂ ಇಲ್ಲವೂ ಎಂಬುದನ್ನು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಯ ಹಣ ಯಾರ್ಯಾರಿಗೆ ಬರುತ್ತದೆ?

ಈ ಪಿಎಂ ಕಿಸಾನ್ ಯೋಜನೆಯಲ್ಲಿ ಜಾರಿಗೆ ತಂದಿರುವ ಹೊಸ ನಿಮಗಳ ಪ್ರಕಾರ ಒಂದೇ ಮನೆಯಲ್ಲಿ ಇಬ್ಬರು ಈ ಯೋಜನೆ ಲಾಭ ಪಡೆಯಲು ಬರುವುದ್ದಿಲ್ಲ. ಒಂದೇ ಮನೆಯಲ್ಲಿ ಗಂಡ ಹೆಂಡತಿ ಇಬ್ಬರು ಈ ಯೋಜನೆ ಫಲನುಭವಿ ಆಗಲು ಸಾಧ್ಯವಿಲ್ಲ. ಒಂದು ವೇಳೆ ಆಸ್ತಿ ಭಾಗವಗಿದ್ದಲ್ಲಿ ಅಂತಹ ರೈತರು ತಮಗೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಹೊಸ ಅರ್ಜಿಗಳನ್ನು ಸಲ್ಲಿಸಿದರೆ ಮಾತ್ರ ಪ್ರತ್ಯೇಕ ಹಣ ಬರಲು ಪ್ರಾರಂಭವಾಗುತ್ತದೆ.

ಇದನ್ನು ಓದಿರಿ :

ರೈತರಿಗೆ ಹೆಚ್ಚು ಲಾಭ ನೀಡುವ ಕೃಷಿ ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಸಾಲ ಲಭ್ಯ..!!

2023ರ ಇದೇ ತಿಂಗಳಲ್ಲಿ ರೈತರ ಖಾತೆಗೆ 13ನೇ ಕಂತನ ಹಣ ಜಮಾ ಆಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಇದಿಷ್ಟು ಈ ಯೋಜನೆ ಬಗ್ಗೆ ಇರುವ ಸಂಪೂರ್ಣ ಮಾಹಿತಿಯಾಗಿದ್ದು, ಎಲ್ಲಾ ರೈತರು ಈ ಬಹುಮುಖ್ಯ ಮಾಹಿತಿಯ ಸದುಪಯೋಗವನ್ನು ಪಡೆದುಕೊಂಡು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು.

Leave a Reply

Your email address will not be published. Required fields are marked *