ನಮಸ್ಕಾರ ಪ್ರಿಯ ರೈತ ಬಾಂಧವರೇ, ಇಂದು ನಾವು ಬೋರ್ವೆಲ್ ಅಥವಾ ಕೊಳವೆ ಬಾವಿ ಅಳವಡಿಸಲು ರಾಜ್ಯ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಅದರ ಬಗ್ಗೆ ನೋಡುವುದಾದರೆ,
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ವಿವಿಧ ನಿಗಮಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನಿನಲ್ಲಿ 3.5 ಲಕ್ಷ ರೂಪಾಯಿಯಲ್ಲಿ ಕೊಳವೆಬಾವಿ ಕೊರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯ ಅಭಿವೃದ್ಧಿ ಕೋಶದಿಂದ, ಕರ್ನಾಟಕ ರಾಜ್ಯ ಸರ್ಕಾರಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬರುವ ಜಿಲ್ಲೆಗಳು ಯಾವುವು?? ಎಷ್ಟು ಸಹಾಯಧನ??
ಮೊದಲಿಗೆ ನೋಡುವುದಾದರೆ ಅಂತರ್ಜಲ ಕಡಿಮೆ ಯಾಗಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು,ಬೆಂಗಳೂರು ನಗರ, ರಾಮನಗರ ಜಿಲ್ಲೆಗಳಿಗೆ ಈ ಯೋಜನೆ ಅನ್ವಯವಾಗುತ್ತದೆ. ಈ ಯೋಜನೆಯ ಅಡಿಯಲ್ಲಿ ಘಟಕದ ವೆಚ್ಚವನ್ನು 4 ಲಕ್ಷ ರೂಗಳಿಗೆ ನಿಗದಿಪಡಿಸಲಾಗಿದೆ. ಹಾಗೂ 3.5 ಲಕ್ಷ ಸಹಾಯಧನ ದೊರೆಯಲಿದೆ. ಉಳಿದ 50 ಸಾವಿರ ರೂಗಳನ್ನು ಶೇಕಡ 4% ಬಡ್ಡಿಯಂತೆ ತೀರಿಸಬೇಕಾಗುತ್ತದೆ. ಹಾಗೂ ಇತರ ಜಿಲ್ಲೆಗಳ ರೈತರಿಗೆ 2ಲಕ್ಷ ಸಹಾಯಧನ ದೊರೆಯುತ್ತದೆ. ಮತ್ತು 50 ಸಾವಿರ ರೂಗಳನ್ನು ವಾರ್ಷಿಕ ಶೇಕಡ 4% ಬಡ್ಡಿಯಂತೆ ಸಾಲವನ್ನು ತೀರಿಸಬೇಕಾಗುತ್ತದೆ.
ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು??
ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್ ಸೇವಾ ಕೇಂದ್ರ, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಗತ್ಯ ದಾಖಲೆಯೊಂದಿಗೆ ಮಾರ್ಚ್ 3 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನಿಗಮದ ವೆಬ್ಸೈಟ್-
ಮತ್ತು ನಿಗಮದ ದೂರವಾಣಿ ಸಂಖ್ಯೆ:8050773004/5, 8050370006, 7090400100, 080-22374832, ಈ ಮೇಲೆ ಕಾಣಿಸಿರುವ ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಕರ್ನಾಟಕ ಮಡಿವಾಳ ಮಾಚಿದೇವರು ಅಭಿವೃದ್ಧಿ ವ್ಯವಸ್ಥಾಪಕರು ತಿಳಿಸಿದ್ದಾರೆ.
ಈ ಯೋಜನೆಗೆ ಬೇಕಾಗುವ ಅರ್ಹತೆಗಳು??
* ರಾಜ್ಯ ಸರ್ಕಾರದ ಈ ಯೋಜನೆ ಅಡಿ ಅಭ್ಯರ್ಥಿಯು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
* ಫಲಾನುಭವಿ ರೈತರು ನಗರ ಪ್ರದೇಶಗಳಲ್ಲಿ ವಾಸವಿದ್ದರೆ ಅವರ ವಾರ್ಷಿಕ ಆದಾಯವು 1.03 ಲಕ್ಷ ಕಿಂತ ಒಳಗೆ ಇರಬೇಕು.
* ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಕುಟುಂಬದವರು 96,000 ವಾರ್ಷಿಕ ಆದಾಯವನ್ನು ಮೀರಿರಬಾರದು.
* ಈ ಯೋಜನೆಯ ಅಡಿಯಲ್ಲಿ ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
* ಕರ್ನಾಟಕದ ಯಾವುದೇ ಭಾಗದಲ್ಲಿ ವಾಸಿಸುವವರು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು ಯಾವುವು??
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಆಧಾರ್ ಕಾರ್ಡ್
• ಭೂ ಕಂದಾಯ ಪಾವತಿಸಿದ ರಶೀದಿ ಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಪಹಣಿ
• ಸ್ವಯಂ ಘೋಷಣೆ ಪತ್ರ
• ಪಾಸ್ಪೋರ್ಟ್ ಅಳತೆಯ ಭಾವಚಿತ್ರ
• ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ.
• ಯೋಜನೆಯ ಪ್ರಯೋಜನಗಳು:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯನ್ನು ಕರ್ನಾಟಕದಲ್ಲಿ ಪ್ರಾರಂಭಿಸಲಾಗಿದೆ.
ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ತಮ್ಮ ಕೃಷಿ ಭೂಮಿಯಲ್ಲಿ ಬೋರ್ವೆಲ್ ಅಥವಾ ಕೊಳವೆಬಾವಿ ಕೊರೆದ ನಂತರ ಅಥವಾ ತೆರೆದ ಬಾವಿಗಳನ್ನು ಹೊಡೆದ ನಂತರ ಪಂಪ್ ಸೆಟ್ ಗಳನ್ನು ಮತ್ತು ಪರಿಕರಗಳನ್ನು ಅಳವಡಿಸಿ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ.
ಕರ್ನಾಟಕ ರಾಜ್ಯ ಸರ್ಕಾರವು ಈ ಯೋಜನೆಯ ಅಡಿಯಲ್ಲಿ ವಯಕ್ತಿಕ ಬೋರ್ವೆಲ್ ಯೋಜನೆಗೆ 2.5 ಲಕ್ಷ ಮತ್ತು 3 ಲಕ್ಷ ರೂ ಹಣವನ್ನು ನೀಡಲಾಗುತ್ತದೆ..