Upcoming rainfall report Karnataka: ನಮಸ್ಕಾರ ಪ್ರಿಯ ರೈತ ಬಾಂಧವರೇ, ಇಂದಿನ ನಾವು ಮಳೆಯ ಮುನ್ಸೂಚನೆ ಬಗ್ಗೆ ತಿಳಿಯೋಣ.

ಈಗಾಗಲೇ ನೀವು ನೋಡಿರಬಹುದು ಈ ವರ್ಷದ ಮಳೆ ಬಹಳ ವಿಕೋಪಗಳಿಗೆ ಕಾರಣವಾಗಿದೆ.

11 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಮಾನ ಇಲಾಖೆ.

ಆ 11 ಜಿಲ್ಲೆಗಳು ಯಾವುವು??

ಶಿವಮೊಗ್ಗ: ಹವಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ 11 ಜಿಲ್ಲೆಯಲ್ಲಿ ಶಿವಮೊಗ್ಗ ಜಿಲ್ಲೆಯೂ ಸೇರ್ಪಡೆಗೊಂಡಿದೆ.

ಬೆಳಗಾವಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಸಂಭವ್ಯವಿದೆ.

ಈ 11 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ!

ಅಪಾಯದ ಮಟ್ಟ ಮೀರಿ ಮಳೆ ಬರುವುದು ಎಂದು ಹವಾಮಾನ ಇಲಾಖೆ ಘೋಷಿಸಿದೆ.

ಹಾವೇರಿ : ನಿರಂತರ ಮಳೆ: ಜುಲೈ 24ರಂದು ಶಾಲೆಗಳಿಗೆ ರಜೆ ಘೋಷಿಸಿದ ಹಾವೇರಿಯ ಡಿಸಿ.

ಹಾವೇರಿ: ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಅತಿಯಾಗಿ ಮಳೆಯಾಗುತ್ತಿರುವುದರಿಂದ ಜುಲೈ 24ರ ಸೋಮವಾರದಂದು ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ಆದೇಶ ಹೊರಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ.

ಇದೇ ರೀತಿ ಮಳೆ ಸುರಿಯುವ ಸಂಭವ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲ ಅಂಗನವಾಡಿ ಕೇಂದ್ರಗಳು, ಖಾಸಗಿ ಹಾಗೂ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.

ಉಳಿದಂತೆ ಪದವಿ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಎಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿರುವುದಿಲ್ಲ ಹಾಗೂ ಎಂದಿನಂತೆ ತರಗತಿಗಳು ಪ್ರಾರಂಭದಲ್ಲಿರುತ್ತವೆ.

ಇನ್ನು ರಾಜ್ಯದಲ್ಲಿ ಗಾಳಿ ವೇಗವು ಗಂಟೆಗೆ 30-40 ಕಿಲೋ ಮೀಟರ್ ಇರಲಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಗಂಟೆಗೆ 40-45 ರಿಂದ 55 ಕಿ.ಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ.

ಹಾಗೆಯೇ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿನ ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಮುನ್ಸೂಚನೆ ಇದೆ.

: ಸರಕಾರಿ ಯೋಜನೆಗಳು :

👉🏻 ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ ಹಾಗೂ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

👉🏻 ಗೃಹಲಕ್ಷ್ಮಿ ಯೋಜನೆಯ ಅಪ್ಲಿಕೇಶನ್ ಸ್ಟೇಟಸ್ ನೋಡಿ

👉🏻 ಅನ್ನಭಾಗ್ಯ ಯೋಜನೆಯ ಹಣ ರೈತರ ಖಾತೆಗೆ ಜಮಾ ಸ್ಟೇಟಸ್ ಚೆಕ್ ಮಾಡಲು ಹೀಗೆ ಮಾಡಿ

👉🏻 ಮೆಕ್ಕೆಜೋಳದಲ್ಲಿ ಮುಳ್ಳು ಸಂಜೆ ಕಸವನ್ನು ತೆಗೆಯಲು ಕಳೆನಾಶಕ

👉🏻 ಮೊಬೈಲ್ ನಲ್ಲಿ ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ನಂಬರ್ ಲಿಂಕ್ ಮಾಡುವುದು ಹೇಗೆ ಎಂದು ತಿಳಿದುಕೊಳ್ಳಿ

ಕೃಷಿವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕ್ ಅನ್ನು ಒತ್ತಿ 👇🏻👇🏻🌱🙏🏻

https://chat.whatsapp.com/K9mNNO3T6FzKJGch4oqd2m

Leave a Reply

Your email address will not be published. Required fields are marked *