10 kg ‘Annabhagya’ rice guaranteed
ಮುಂದಿನ ತಿಂಗಳಿಂದ 10 ಕೆಜಿ `ಅನ್ನಭಾಗ್ಯ’ ಅಕ್ಕಿ ಗ್ಯಾರಂಟಿ: ಕೆಎಚ್ ಮುನಿಯಪ್ಪ
ರಾಜ್ಯ ಸರ್ಕಾರ ವಾಗ್ದಾನ ಮಾಡಿದಂತೆ ಮುಂದಿನ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ. ಈ ಬಗ್ಗೆ ಟೆಂಡರ್ ಪ್ರಕ್ರಿಯೆ ನಡೆದಿದ್ದು ಬರ ಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿಯನ್ನೇ ಕೊಡುತ್ತೇವೆ ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಇಲಾಖೆಗೆ ಸಂಬಂಧಿಸಿದ ಕೆಲ ಮಹತ್ವದ ವಿಚಾರಗಳನ್ನು ಚರ್ಚಿಸಿದರು.
ಮುಂದಿನ ತಿಂಗಳಿಂದ ಅನ್ನಭಾಗ್ಯದಡಿ 10 ಕೆಜಿ ಅಕ್ಕಿ
ವಿತರಿಸಲಾಗುವುದು ಎಂದು ತಿಳಿಸಿದ ಸಚಿವ ಮುನಿಯಪ್ಪ
ಟೆಂಡರ್ ಪ್ರಕ್ರಿಯೆ ನಡೆದಿದ್ದು ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿ ವಿತರಣೆ ಎಂದ ಆಹಾರ ಸಚಿವ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಇಲಾಖೆಗೆ ಸಂಬಂಧಿಸಿದ ಮಹತ್ವ ವಿಚಾರಗಳ ಚರ್ಚೆ.
ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಮುಂದಿನ ತಿಂಗಳಿಂದ ಹತ್ತು ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆದಿದೆ. ಬರ ಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿಯನ್ನೇ ಕೊಡುತ್ತೇವೆ ಎಂದರು.
ಅಕ್ಕಿ ಪೂರೈಕೆಗೆ ನಿರಾಕರಿಸಿದ್ದ ಕೇಂದ್ರ
ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಕಾಂಗ್ರೆಸ್ 10 ಕೆಜೆ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕಾಂಗ್ರೆಸ್ ಈ ಗ್ಯಾರಂಟಿಯನ್ನು ಜಾರಿಗೆ ತರಲು ಅಕ್ಕಿಯ ಕೊರತೆ ಎದುರಾಗಿತ್ತು. ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯ ಅಕ್ಕಿಯನ್ನು ಕೇಂದ್ರ ಆಹಾರ ನಿಗಮದಿಂದ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಕೇಂದ್ರ ಆಹಾರ ನಿಗಮ ರಾಜ್ಯಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿತ್ತು.
ರಾಜ್ಯ ಆಹಾರ ಸಚಿವ ಮುನಿಯಪ್ಪ ದೆಹಲಿಗೆ ತೆರಳಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದ್ದರೂ ಅವರು ಅಕ್ಕಿ ಪೂರೈಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದನ್ನು ಮುಂದಿಟ್ಟುಕೊಂಡು ಅನ್ನಭಾಗ್ಯ ಯೋಜನೆಯ ಯಶಸ್ವನ್ನು ಸಹಿಸಲು ಸಾಧ್ಯವಾಗದೆ ಕೇಂದ್ರ ಸರ್ಕಾರ ಈ ರೀತಿಯಲ್ಲಿ ನಡೆಸುಕೊಳ್ಳುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಆರೋಪ ಮಾಡಿತ್ತು.
ಬರಪೀಡಿತ ತಾಲೂಕುಗಳಲ್ಲಿ ಅಕ್ಕಿ ವಿತರಣೆ:-
ಅಕ್ಕಿ ಕೊರತೆ ಎದುರಾದ ಹಿನ್ನೆಲೆಯಲ್ಲಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿಯೊಬ್ಬರಿಗೆ ಪ್ರತಿತಿಂಗಳು 170 ರೂ ಹಣವನ್ನು ಹಾಕಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿತ್ತು. ಅದರಂತೆ ಅಕೌಂಟಿಗೆ 170 ರೂ ಹಣವನ್ನು ಹಾಕಲಾಗಿತ್ತು.ಇದೀಗ ಮುಂಬರುವ ತಿಂಗಳಿಂದ ಹಣಕ್ಕೆ ಬದಲಾಗಿ ಹತ್ತು ಕೆಜಿ ಅಕ್ಕಿಯನ್ನು ಬರ ಪೀಡಿತ ತಾಲೂಕುಗಳಿಗೆ ಪೂರೈಕೆ ಮಾಡಲು ನಿರ್ಧಾರ ಮಾಡಲಾಗಿದೆ. ಈ ನಿಟ್ಟಿನಲ್ಲಿ ಟೆಂಡರ್ ಪ್ರಕ್ರಿಯೆಯೂ ಇಲಾಖೆ ಮುಂದಾಗಿದೆ.
ಇನ್ನು ಇದೇ ಸಂದರ್ಭದಲ್ಲಿ ಬಿಕೆ ಹರಿಪ್ರಸಾದ್ ಜೊತೆಗೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ವಿಚಾರವಾಗಿ ಮಾತನಾಡಿ, ಹರಿಪ್ರಸಾದ್ ನನಗಿಂತ ಮುಂಚೆ ಬಂದು ಡಿಕೆ ಶಿವಕುಮಾರ ಅವರನ್ನು ಭೇಟಿ ಮಾಡಿದರು. ಅವರ ಸ್ಥಾನಮಾನ ವಿಚಾರ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಬೋರ್ಡ್ ಮತ್ತು ಕಾರ್ಪೊರೇಷನ್ ನೇಮಕಾತಿ ಪ್ರಕ್ರಿಯೆ ಬೇಗ ಮಾಡಲು ಮನವಿ ಮಾಡಿದ್ದೇವೆ. ಇದರಲ್ಲಿ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದೇವೆ. ಈ ಬಗ್ಗೆ ಪರಿಶೀಲನೆ ಮಾಡುವುದಾಗಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಂಚ ಗ್ಯಾರಂಟಿಗಳ ಪೈಕಿ ಪ್ರತಿಯೊಂದು ಕುಟುಂಬಕ್ಕೂ ಅನ್ನಭಾಗ್ಯ ಯೋಜನೆಯಡಿ ತಿಂಗಳಿಗೆ 10 ಕೆಜಿ ಅಕ್ಕಿ ಉಚಿತವಾಗಿ ವಿತರಿಸುವುದಾಗಿ ವಾಗ್ದಾನ ಮಾಡಿತ್ತು. ಆದರೆ ಚುನಾವಣೆ ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಅದು ಸಾಧ್ಯವಾಗದ್ದರಿಂದ 5 ಕೆಜಿ ಅಕ್ಕಿ ವಿತರಿಸಿ ಉಳಿದ 5 ಕೆಜಿಯ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿತ್ತು. ಇದೀಗ ಭರ್ತಿ 10 ಕೆಜಿ ಅಕ್ಕಿಯನ್ನೇ ನೀಡುವುದಾಗಿ ತಿಳಿಸಿದೆ.
➡️ ಮುಂಗಾರು ಬೆಳೆ ಸಮೀಕ್ಷೆ 2023 ಇಲ್ಲಿ ಅಪ್ರೋಲ್ ಆದರೆ ಮಾತ್ರ ಬೆಳೆ ಸಮೀಕ್ಷೆ ಹಣ ಬರುತ್ತದೆ https://krushivahini.com/2023/09/15/check-crop-survey-status-in-mobile/
➡️ ಈ 10 ಜಿಲ್ಲೆಗಳಿಗೆ ಗ್ರಹಲಕ್ಷ್ಮಿ ಯೋಜನೆಯ ಹಣ ಜಮಯಾಗುವುದು ನಿಮ್ಮ ಜಿಲ್ಲೆ ಇರುವುದನ್ನು ನೋಡಿ https://krushivahini.com/2023/09/28/grulahakshmi-yojana-funds-will-arrive-on-september-30-for-these-ten-districts
➡️ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ https://krushivahini.com/2023/09/28/the-government-has-given-good-news-about-the-application-for-the-new-ration-card/
➡️ ನಿಮ್ಮ ಆಧಾರ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದೆ ಇದ್ದರೆ ಯಾವ ಪಿಂಚಣಿ ಸೌಲಭ್ಯವು ಬರುವುದಿಲ್ಲ https://krushivahini.com/2023/09/29/if-aadhaar-is-not-linked-to-the-bank-by-september-30-the-pension-facility-will-stop/
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಎಲ್ಲ ಸರ್ಕಾರಿ ಯೋಜನೆಗಳ ಬಗ್ಗೆ ತಿಳಿಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ಕೃಷಿ ವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻https://chat.whatsapp.com/K9mNNO3T6FzKJGch4oqd2m