Register monsoon crop survey records here:-

ಈ ಬೆಳೆ ಸಮೀಕ್ಷೆ ಆಪ್ ಅನ್ನು ಡೌನ್ಲೋಡ್ ಮಾಡುವುದು ಹೇಗೆ?

2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್ ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2023″ ಹಾಗೂ ಆಯಾ ಗ್ರಾಮದ ಖಾಸಗಿ ನಿವಾಸಿಗಳ “ಮುಂಗಾರು ಬೆಳೆ ಸಮೀಕ್ಷೆ 2023-24″ ನ್ನು Download ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ. ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅದು ನಿಮ್ಮನ್ನು ಪ್ಲೇ ಸ್ಟೋರ್ ಗೆ ಕರೆದುಕೊಂಡು ಹೋಗುತ್ತದೆ ಅಲ್ಲಿ ಡೌನ್ಲೋಡ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

https://play.google.com/store/apps/details?id=com.csk.PR_Kharif_2023.cropsurvey

ಬೆಳೆ ಸಮೀಕ್ಷೆ ಮಾಡಿದರೆ ಯಾವೆಲ್ಲ ಲಾಭ ದೊರೆಯುತ್ತವೆ?

ಹೀಗೆ ವಿವರಗಳನ್ನು ದಾಖಲಿಸುವದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವದರಿಂದ ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.

ರೈತರು ಬೆಳೆ ವಿವರಗಳನ್ನು ಅಪ್‌ಲೋಡ್ ಮಾಡದಿದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ದಿನಾಂಕ 25-09-2023 ರೊಳಗೆ ತುರ್ತಾಗಿ ವಿವರಗಳನ್ನು ದಾಖಲಿಸಬೇಕು. ಈಗಾಗಲೇ ಜಿಲ್ಲೆಯ 6 ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದು ಪರಿಹಾರ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯವಾಗಿರುತ್ತದೆ ಎಂದು ಶ್ರೀಮತಿ ತಾರಾಮಣಿ ಜಿ.ಹೆಚ್, ಜಂಟಿ ಕೃಷಿ ನಿರ್ದೇಶಕರು, ಗದಗ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ 18004253553 ಗೆ ಕರೆ ಮಾಡಲು ಕೋರಿದೆ.

ಅನ್ನಭಾಗ್ಯ ಯೋಜನೆಯ ಡಿಬಿಟಿ ಸ್ಟೇಟಸ್:-

(ಜೂಲೈ,ಆಗಸ್ಟ್,ಸೆಪ್ಟೆಂಬರ್ ) ಮೂರು ತಿಂಗಳ ಹಣ ಜಮಾ ಸ್ಟೇಟಸ್ ಮಾಡಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ ನಂತರ ಅಲ್ಲಿ ಕಾಣಿಸುವ ತಿಂಗಳನ್ನು ಆಯ್ಕೆ ಮಾಡಿಕೊಂಡು ಕೆಳಗೆ ತೋರಿಸಿರುವ ಆರ್‌ಸಿ ನಂಬರ್ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಗೋ ಎಂದು ಕ್ಲಿಕ್ ಮಾಡಿದರೆ ನಿಮ್ಮ ಜಮಾ ಹಣವನ್ನು ತೋರಿಸುತ್ತದೆ.

https://ahara.kar.nic.in/status1/status_of_dbt_new.aspx

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ👇🏻

https://chat.whatsapp.com/K9mNNO3T6FzKJGch4oqd2m

➡️ ಈ ಜಿಲ್ಲೆಗೆ ಶೇಕಡ 25% ಮಧ್ಯಂತರ ಬೆಳೆ ವಿಮೆ ಬಿಡುಗಡೆ ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ https://krushivahini.com/2023/10/01/release-of-interim-crop-insurance/

➡️ ಅನ್ನಭಾಗ್ಯ ಯೋಜನೆಯ ಮೂರು ಕಂತಿನ ಹಣವನ್ನು ಹೇಗೆ ಚೆಕ್ ಮಾಡಿಕೊಳ್ಳಿ https://krushivahini.com/2023/09/29/annabhagya-third-installment-money-deposit/

➡️ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಬಗ್ಗೆ ಗುಡ್ ನ್ಯೂಸ್ ನೀಡಿದ ಸರ್ಕಾರ https://krushivahini.com/2023/09/28/the-government-has-given-good-news-about-the-application-for-the-new-ration-card/

➡️ ಪಿ ಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಇಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ https://krushivahini.com/2023/09/14/pm-kisan-15th-installment-list-of-ineligible-farmers-released/

➡️ ಈ ಲಿಸ್ಟ್ ನಲ್ಲಿ ಇರುವವರಿಗೆ ಮಾತ್ರ ಬೆಳೆ ಸಾಲ ಮನ್ನಾ ಆಗುತ್ತದೆ https://krushivahini.com/2023/09/13/implementation-of-new-loan-waiver-rules/

➡️ ನಿಮ್ಮ ಮೊಬೈಲ್ ಕಳೆದರೆ ತಕ್ಷಣ ಲಾಕ್ ಮಾಡುವ ಸಿಸ್ಟಮ್ ಇಲ್ಲಿದೆ ಸಂಪೂರ್ಣ ಮಾಹಿತಿ https://krushivahini.com/2023/09/29/if-we-lose-our-mobile-we-immediately-lock-it/

Leave a Reply

Your email address will not be published. Required fields are marked *