Annabhagya money does not come

ಅನ್ನಭಾಗ್ಯ ಹಣ ಬರುವುದಿಲ್ಲ

ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇನ್ನು ಮುಂದೆ ದೊರೆ ಮುಂದಿನ ತಿಂಗಳಿನಿಂದ ಅನ್ನಭಾಗ್ಯ ಹಣ ಬರುವುದಿಲ್ಲ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ.

ಮುಂದಿನ ತಿಂಗಳಿಂದ 10 ಕೆಜಿ `ಅನ್ನಭಾಗ್ಯ’ ಅಕ್ಕಿ ಗ್ಯಾರಂಟಿ: ಕೆಎಚ್‌ ಮುನಿಯಪ್ಪ

ರಾಜ್ಯ ಸರ್ಕಾರ ವಾಗ್ದಾನ ಮಾಡಿದಂತೆ ಮುಂದಿನ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ. ಈ ಬಗ್ಗೆ ಟೆಂಡರ್ ಪ್ರಕ್ರಿಯೆ ನಡೆದಿದ್ದು ಬರ ಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿಯನ್ನೇ ಕೊಡುತ್ತೇವೆ ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಇಲಾಖೆಗೆ ಸಂಬಂಧಿಸಿದ ಕೆಲ ಮಹತ್ವದ ವಿಚಾರಗಳನ್ನು ಚರ್ಚಿಸಿದರು.

ಮುಂದಿನ ತಿಂಗಳಿಂದ ಅನ್ನಭಾಗ್ಯದಡಿ 10 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ತಿಳಿಸಿದ ಸಚಿವ ಮುನಿಯಪ್ಪ

ಟೆಂಡರ್ ಪ್ರಕ್ರಿಯೆ ನಡೆದಿದ್ದು ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿ ವಿತರಣೆ ಎಂದ ಆಹಾರ ಸಚಿವ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಇಲಾಖೆಗೆ ಸಂಬಂಧಿಸಿದ ಮಹತ್ವ ವಿಚಾರಗಳ ಚರ್ಚೆ.

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಮುಂದಿನ ತಿಂಗಳಿಂದ ಹತ್ತು ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆದಿದೆ. ಬರ ಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿಯನ್ನೇ ಕೊಡುತ್ತೇವೆ ಎಂದರು.

ಅಕ್ಕಿ ಪೂರೈಕೆಗೆ ನಿರಾಕರಿಸಿದ್ದ ಕೇಂದ್ರ

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಕಾಂಗ್ರೆಸ್ 10 ಕೆಜೆ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕಾಂಗ್ರೆಸ್ ಈ ಗ್ಯಾರಂಟಿಯನ್ನು ಜಾರಿಗೆ ತರಲು ಅಕ್ಕಿಯ ಕೊರತೆ ಎದುರಾಗಿತ್ತು. ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯ ಅಕ್ಕಿಯನ್ನು ಕೇಂದ್ರ ಆಹಾರ ನಿಗಮದಿಂದ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಕೇಂದ್ರ ಆಹಾರ ನಿಗಮ ರಾಜ್ಯಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿತ್ತು.

ರಾಜ್ಯ ಆಹಾರ ಸಚಿವ ಮುನಿಯಪ್ಪ ದೆಹಲಿಗೆ ತೆರಳಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದ್ದರೂ ಅವರು ಅಕ್ಕಿ ಪೂರೈಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದನ್ನು ಮುಂದಿಟ್ಟುಕೊಂಡು ಅನ್ನಭಾಗ್ಯ ಯೋಜನೆಯ ಯಶಸ್ವನ್ನು ಸಹಿಸಲು ಸಾಧ್ಯವಾಗದೆ ಕೇಂದ್ರ ಸರ್ಕಾರ ಈ ರೀತಿಯಲ್ಲಿ ನಡೆಸುಕೊಳ್ಳುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಆರೋಪ ಮಾಡಿತ್ತು.

ಅನ್ನಭಾಗ್ಯ ಯೋಜನೆಯ ಡಿಬಿಟಿ ಸ್ಟೇಟಸ್:-

(ಜೂಲೈ,ಆಗಸ್ಟ್,ಸೆಪ್ಟೆಂಬರ್ ) ಮೂರು ತಿಂಗಳ ಹಣ ಜಮಾ ಸ್ಟೇಟಸ್ ಮಾಡಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ ನಂತರ ಅಲ್ಲಿ ಕಾಣಿಸುವ ತಿಂಗಳನ್ನು ಆಯ್ಕೆ ಮಾಡಿಕೊಂಡು ಕೆಳಗೆ ತೋರಿಸಿರುವ ಆರ್‌ಸಿ ನಂಬರ್ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಗೋ ಎಂದು ಕ್ಲಿಕ್ ಮಾಡಿದರೆ ನಿಮ್ಮ ಜಮಾ ಹಣವನ್ನು ತೋರಿಸುತ್ತದೆ.

https://ahara.kar.nic.in/status1/status_of_dbt_new.aspx

ಬರಪೀಡಿತ ತಾಲೂಕುಗಳಲ್ಲಿ ಅಕ್ಕಿ ವಿತರಣೆ

ಅಕ್ಕಿ ಕೊರತೆ ಎದುರಾದ ಹಿನ್ನೆಲೆಯಲ್ಲಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿಯೊಬ್ಬರಿಗೆ ಪ್ರತಿತಿಂಗಳು 170 ರೂ ಹಣವನ್ನು ಹಾಕಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿತ್ತು. ಅದರಂತೆ ಅಕೌಂಟಿಗೆ 170 ರೂ ಹಣವನ್ನು ಹಾಕಲಾಗಿತ್ತು.ಇದೀಗ ಮುಂಬರುವ ತಿಂಗಳಿಂದ ಹಣಕ್ಕೆ ಬದಲಾಗಿ ಹತ್ತು ಕೆಜಿ ಅಕ್ಕಿಯನ್ನು ಬರ ಪೀಡಿತ ತಾಲೂಕುಗಳಿಗೆ ಪೂರೈಕೆ ಮಾಡಲು ನಿರ್ಧಾರ ಮಾಡಲಾಗಿದೆ. ಈ ನಿಟ್ಟಿನಲ್ಲಿ ಟೆಂಡರ್ ಪ್ರಕ್ರಿಯೆಯೂ ಇಲಾಖೆ ಮುಂದಾಗಿದೆ.

ಇನ್ನು ಇದೇ ಸಂದರ್ಭದಲ್ಲಿ ಬಿಕೆ ಹರಿಪ್ರಸಾದ್ ಜೊತೆಗೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ವಿಚಾರವಾಗಿ ಮಾತನಾಡಿ, ಹರಿಪ್ರಸಾದ್ ನನಗಿಂತ ಮುಂಚೆ ಬಂದು ಡಿ‌ಕೆ‌ ಶಿವಕುಮಾರ ಅವರನ್ನು ಭೇಟಿ ಮಾಡಿದರು. ಅವರ ಸ್ಥಾನಮಾನ ವಿಚಾರ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಬೋರ್ಡ್ ‌ಮತ್ತು ಕಾರ್ಪೊರೇಷನ್ ನೇಮಕಾತಿ ಪ್ರಕ್ರಿಯೆ ಬೇಗ ಮಾಡಲು ‌ಮನವಿ ಮಾಡಿದ್ದೇವೆ. ಇದರಲ್ಲಿ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂದು‌ ಮನವಿ ಮಾಡಿದ್ದೇವೆ. ಈ ಬಗ್ಗೆ ಪರಿಶೀಲನೆ ಮಾಡುವುದಾಗಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಂಚ ಗ್ಯಾರಂಟಿಗಳ ಪೈಕಿ ಪ್ರತಿಯೊಂದು ಕುಟುಂಬಕ್ಕೂ ಅನ್ನಭಾಗ್ಯ ಯೋಜನೆಯಡಿ ತಿಂಗಳಿಗೆ 10 ಕೆಜಿ ಅಕ್ಕಿ ಉಚಿತವಾಗಿ ವಿತರಿಸುವುದಾಗಿ ವಾಗ್ದಾನ ಮಾಡಿತ್ತು. ಆದರೆ ಚುನಾವಣೆ ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಅದು ಸಾಧ್ಯವಾಗದ್ದರಿಂದ 5 ಕೆಜಿ ಅಕ್ಕಿ ವಿತರಿಸಿ ಉಳಿದ 5 ಕೆಜಿಯ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿತ್ತು. ಇದೀಗ ಭರ್ತಿ 10 ಕೆಜಿ ಅಕ್ಕಿಯನ್ನೇ ನೀಡುವುದಾಗಿ ತಿಳಿಸಿದೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/K9mNNO3T6FzKJGch4oqd2m

➡️ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಬಗ್ಗೆ ಗುಡ್ ನ್ಯೂಸ್ ಕೊಟ್ಟು ಸರ್ಕಾರ https://krushivahini.com/2023/09/28/the-government-has-given-good-news-about-the-application-for-the-new-ration-card/

➡️ಅನ್ನ ಭಾಗ್ಯ ಯೋಜನೆಯ ಮೂರನೇ ಕಂತಿನ ಹಣ ಜಮಾ https://krushivahini.com/2023/09/29/annabhagya-third-installment-money-deposit/

➡️ ಶೇಕಡಾ 25 ಪರ್ಸೆಂಟ್ ಮಧ್ಯಂತರ ಬೆಳೆ ವಿಮೆ ಬಿಡುಗಡೆ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ https://krushivahini.com/2023/10/01/release-of-interim-crop-insurance/

Leave a Reply

Your email address will not be published. Required fields are marked *