ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಈಗ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಡೆಯಿರಿ:-

ನಮಸ್ಕಾರ ಪ್ರಿಯ ರೈತ ಬಾಂಧವರೇ, ಇಂದಿನ ನಾವು ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೊಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿ ನಿರ್ಧರಿಸಿದೆ.

ಹೌದು ನಿಮಗೆ ತಿಳಿದ ಹಾಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀವು ತಾಲೂಕು ಕಚೇರಿಯಲ್ಲಿ ಹೋಗಿ ನೆಮ್ಮದಿ ಕೇಂದ್ರಕ್ಕೆ ಅಪ್ಲಿಕೇಶನ್ ಹಾಕುವುದರ ಮುಖಾಂತರ ಪಡೆಯುತ್ತಿದ್ದೀರಿ. ಆದರೆ ಇದೀಗ ಬಂದ ಸುದ್ದಿಯಿಂದ ನೀವು ಸರಳವಾಗಿ ನಿಮ್ಮ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಬಾಪೂಜಿ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಪಡೆದುಕೊಳ್ಳಬಹುದೆಂದು ತಿಳಿಸಿದ್ದಾರೆ.

ಬೆಂಗಳೂರು: ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಇನ್ನು ಗ್ರಾಮ ಪಂಚಾಯತ್ ಗಳ ಬಾಪೂಜಿ ಸೇವಾ ಕೇಂದ್ರದಲ್ಲಿಯೇ ನೀಡಲು ತೀರ್ಮಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, “ರಾಜ್ಯದ ಗ್ರಾಮೀಣ ಭಾಗಗಳ ಜನತೆಗೆ ಹೆಚ್ಚಿನ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಾಡಕಚೇರಿಗಳಲ್ಲಿ, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸರ್ಕಾರಿ ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ” ಎಂದು ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳ ಜೊತೆಗೆ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ ಆಧಾರ್ ಸೇವೆಗಳ ಸೌಲಭ್ಯವನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿ ರಾಜ್ಯದ ಜನ ಪಡೆಯಬಹುದಾಗಿದೆ.

ಬಹುತೇಕ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವುದರಿಂದ ಬೇರೆ ಬೇರೆ ಇಲಾಖೆಗಳ ಸರ್ಕಾರಿ ಕಚೇರಿಗಳಿಗೆ ಹೋಗುವ ಅವಶ್ಯಕತೆ ಕಡಿಮೆಯಾಗಲಿದೆ. ಜನಪರವಾಗಿ ಜನರಿಗೆ ಸುಲಲಿತವಾಗಿ ಸೇವೆಗಳನ್ನು ಒದಗಿಸಲು ನಮ್ಮ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ಬರೆದಿದ್ದಾರೆ.

ಅನ್ನಭಾಗ್ಯ ಯೋಜನೆಯ ಡಿಬಿಟಿ ಸ್ಟೇಟಸ್:-

(ಜೂಲೈ,ಆಗಸ್ಟ್,ಸೆಪ್ಟೆಂಬರ್ ) ಮೂರು ತಿಂಗಳ ಹಣ ಜಮಾ ಸ್ಟೇಟಸ್ ಮಾಡಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ ನಂತರ ಅಲ್ಲಿ ಕಾಣಿಸುವ ತಿಂಗಳನ್ನು ಆಯ್ಕೆ ಮಾಡಿಕೊಂಡು ಕೆಳಗೆ ತೋರಿಸಿರುವ ಆರ್‌ಸಿ ನಂಬರ್ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಗೋ ಎಂದು ಕ್ಲಿಕ್ ಮಾಡಿದರೆ ನಿಮ್ಮ ಜಮಾ ಹಣವನ್ನು ತೋರಿಸುತ್ತದೆ.

https://ahara.kar.nic.in/status1/status_of_dbt_new.aspx

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ https://chat.whatsapp.com/K9mNNO3T6FzKJGch4oqd2m

➡️ ಪಿ ಎಮ್ ಕಿಸಾನ್ 15ನೇ ಕಂತಿನ ಅಂತಿಮ ಪಟೇ ಬಿಡುಗಡೆ ನಿಮ್ಮ ಹೆಸರನ್ನು ಪರೀಕ್ಷಿಸಿ https://krushivahini.com/2023/10/04/pm-kisan-final-list-released/

➡️ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂದು ತಿಳಿದುಕೊಳ್ಳಿ https://krushivahini.com/2023/10/04/find-out-which-is-the-insurance-company-in-your-district/

➡️ ಬರಗಾಲ ಘೋಷಿತ ತಾಲೂಕುಗಳಿಗೆ ಎಷ್ಟು ಪರಿಹಾರ ಕೊಡುತ್ತಾರೆ ಇಲ್ಲಿ ನೋಡಿ https://krushivahini.com/2023/10/04/how-much-relief-will-be-given-to-drought-declared-taluks/

Leave a Reply

Your email address will not be published. Required fields are marked *