ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್ ಚೆಕ್:- (Ration card correction)ನಮಸ್ಕಾರ ಆತ್ಮೀಯ ರೈತ ಬಾಂಧವರೇ,ಈಗಾಗಲೇ ನಿಮಗೆ ತಿಳಿದಿರುವಂತೆ ನಿಮ್ಮ ಹತ್ತಿರ ಬಿಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಇರಬಹುದು ಆದರೆ ಕಾರ್ಡ್ ನಲ್ಲಿ ನಿಮ್ಮ ಕುಟುಂಬದವರ ಹೆಸರು ಬಹುತೇಕವಾಗಿರಬಹುದು ಆದರೆ ಹಲವಾರು ಬಾರಿ ನಿಮ್ಮ ಕುಟುಂಬದವರ ಹೆಸರು ಇರುವುದಿಲ್ಲ ಹಾಗೆ ಹೆಸರಿನಲ್ಲಿ ಸ್ವಲ್ಪ ತಿದ್ದುಪಡಿ ಮಾಡಿಸಬೇಕೆಂದರೆ ಈಗಲೇ ಸುವರ್ಣ ಅವಕಾಶವನ್ನು ನೀಡಿದ್ದು ಈಗಲೇ ತಿದ್ದುಪಡಿ ಮಾಡಲು ಅವಕಾಶವನ್ನು ನೀಡಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ..!

BPL Card)ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಹೌದು, ಬಿಪಿಎಲ್ ಕಾರ್ಡ್ಗೆ ಫಲಾನುಭವಿ ಹೆಸರು ಸೇರ್ಪಡೆ ಮಾಡಿ, ತಿದ್ದುಪಡಿಗೆ ಅವಕಾಶ ಕೊಟ್ಟಿದ್ದು, ಅದನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸರಿಪಡಿಸಿಕೊಳ್ಳಬಹುದಾಗಿದೆ. ಅದನ್ನು ಕೂಡ ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗಧಿತ ದಿನಾಂಕವನ್ನು ಕೊಡಲಾಗಿದೆ ಇಲ್ಲಿದೆ.

ಮೂರು ಹಂತಗಳಲ್ಲಿ ವಿವಿಧ ದಿನಾಂಕದಂದು ತಿದ್ದುಪಡಿಗೆ ಅವಕಾಶ

ಹೌದು, ಅಕ್ಟೋಬರ್ 5 ರಿಂದ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ. ಇನ್ನು 2ನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಿಗೆ ಅ.8 ರಿಂದ ಅ.10ರವರೆಗೆ BPL ಕಾರ್ಡ್ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ.

ಇನ್ನು 3ನೇ ಹಂತದಲ್ಲಿ ಕಲಬುರಗಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅ.11 ರಿಂದ ಅ.13ರವರೆಗೆ ಅವಕಾಶ ನೀಡಲಾಗಿದೆ. ಇದನ್ನು ಬೆಳಿಗ್ಗೆ 10 ಗಂಟೆಯಿಂದ ಸಂಜೆ 07 ಗಂಟೆಯವರೆಗೆ ತಿದ್ದುಪಡಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕಳೆದ ತಿಂಗಳು ಒಂದೊಂದು ಜಿಲ್ಲೆಗಳಗೂ ಸಮಯ ನಿಗದಿ ಪಡಿಸಲಾಗಿತ್ತು.

ಈ ತಿಂಗಳು ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಈ ಕುರಿತು ಆಹಾರ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ನಿಮ್ಮ ರೇಷನ್ ಕಾರ್ಡ್ ಸ್ಥಿತಿಯನ್ನು ಹೀಗೆ ಚೆಕ್ ಮಾಡಿಕೊಳ್ಳಿ. ಮೊದಲನೆಯದಾಗಿ ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

https://ahara.kar.nic.in/Home/EServices

ಈ ಮೇಲೆ ತೋರಿಸಿದ ಮುಖಪುಟದಲ್ಲಿ ಕಾಣುವ ಈ (ಇ-ಸ್ಥಿತಿ) ಮೇಲೆ ಕ್ಲಿಕ್ ಮಾಡಿದರೆ ನಿಮಗೆ (ಹೊಸ/ಹಾಲಿ ಪಡಿತರ ಚೀಟಿಯ ಸ್ಥಿತಿ) ಇದರ ಮೇಲೆ ಕ್ಲಿಕ್ ಮಾಡಬೇಕು.

ಈ ಮೇಲೆ ತೋರಿಸಿದ ಮುಖಪುಟದಲ್ಲಿ ನಿಮ್ಮ ಜಿಲ್ಲೆಗೆ ಅನುಗುಣವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಂತರ ಮೇಲೆ ಕಾಣಿಸುವ ಮುಖಪುಟದಲ್ಲಿ Status of ration card( ಪಡೀತರ ಚಿಟಿ ವಿವರ) ಇದರ ಮೇಲೆ ಕ್ಲಿಕ್ ಮಾಡಿದ ನಂತರ.

ವಿಥೌಟ್ ಓಟಿಪಿ(With out otp)ಎಂದು ಕ್ಲಿಕ್ ಮಾಡಿಕೊಳ್ಳಿ.

ಈ ಮೇಲೆ ಕಾಣಿಸಿರುವ ಹಾಗೆ ಆರ್‌ಸಿ ನಂಬರ್ ಅಂದರೆ ನಿಮ್ಮ ರೇಷನ್ ಕಾರ್ಡ್ ನಂಬರನ್ನು ನಮೂದಿಸಿ Go ಮೇಲೆ ಮಾಡಿದರೆ ನಿಮ್ಮ ಸದ್ಯದ ರೇಷನ್ ಕಾರ್ಡ್ ಸ್ಥಿತಿಯ ಬಗ್ಗೆ ತಿಳಿಸುತ್ತದೆ. ಇದರ ಮೂಲಕ ನಿಮ್ಮ ರೇಷನ್ ಕಾರ್ಡ್ ನ ಸದ್ಯದ ಸ್ಥಿತಿಯನ್ನು ತಿಳಿದುಕೊಳ್ಳಬಹುದು.

ಅನ್ನಭಾಗ್ಯ ಯೋಜನೆಯ ಡಿಬಿಟಿ ಸ್ಟೇಟಸ್:-

(ಜೂಲೈ,ಆಗಸ್ಟ್,ಸೆಪ್ಟೆಂಬರ್ ) ಮೂರು ತಿಂಗಳ ಹಣ ಜಮಾ ಸ್ಟೇಟಸ್ ಮಾಡಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ ನಂತರ ಅಲ್ಲಿ ಕಾಣಿಸುವ ತಿಂಗಳನ್ನು ಆಯ್ಕೆ ಮಾಡಿಕೊಂಡು ಕೆಳಗೆ ತೋರಿಸಿರುವ ಆರ್‌ಸಿ ನಂಬರ್ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಗೋ ಎಂದು ಕ್ಲಿಕ್ ಮಾಡಿದರೆ ನಿಮ್ಮ ಜಮಾ ಹಣವನ್ನು ತೋರಿಸುತ್ತದೆ.

https://ahara.kar.nic.in/status1/status_of_dbt_new.aspx

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/K9mNNO3T6FzKJGch4oqd2m

➡️ ರಾಜ್ಯಕ್ಕೆ 42 ಕೋಟಿ ಬೆಳೆ ವಿಮೆ ಹಣ ಬಿಡುಗಡೆ ಈ ರಾಜ್ಯಕ್ಕೆ ಸಿಗಲಿದೆ ಹೆಚ್ಚಿನ ಬೆಳೆ ವಿಮೆ ಪ್ರತಿ ರೈತರ ಖಾತೆಗೆ 8314.5 ರೂ ಹಣ ಜಮಾ

https://krushivahini.com/2023/10/07/crop-insurance/

Leave a Reply

Your email address will not be published. Required fields are marked *