Bargala declared for 43 talukas- ಮತ್ತೇ 43 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ.

ಮತ್ತೆ 43 ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಿಸಿದ ರಾಜ್ಯ ಸರ್ಕಾರ :-

ರಾಜ್ಯದಲ್ಲಿ ಮುಂಗಾರು ಮುನಿಸಿಕೊಂಡ ಕಾರಣ ಭೀಕರ ಬರದ ಛಾಯೆ ಆವರಿಸಿದೆ. ಇದೀಗ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಿಸಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಸೋಮವಾರ ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 09: ರಾಜ್ಯದಲ್ಲಿ ಮುಂಗಾರು ಮುನಿಸಿಕೊಂಡ ಕಾರಣ ಭೀಕರ ಬರದ ಛಾಯೆ ಆವರಿಸಿದೆ. ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು ಇತ್ತೇಚೆಗೆ ರಾಜ್ಯದ 195 ತಾಲೂಕುಗಳು ಬರ (drought) ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಿಸಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಸೋಮವಾರ ಆದೇಶ ಹೊರಡಿಸಿದ್ದಾರೆ.

ಬರಪೀಡಿತ ತಾಲ್ಲೂಕುಗಳ ಪಟ್ಟಿ ಹೀಗಿದೆ :-

ಚಾಮರಾಜನಗರ, ಯಳಂದೂರು, ಕೆ.ಆರ್.ನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾಂವ್, ಕಲಘಟಗಿ, ಅಳ್ನಾವರ,ಅಣ್ಣಿಗೇರಿ, ಆಲೂರು, ಅರಸಿಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ, ದಾಂಡೇಲಿ.

ಸಾಧಾರಣ ಬರಪೀಡಿತ ತಾಲ್ಲೂಕುಗಳ ಪಟ್ಟಿ ಹೀಗಿದೆ:-

ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ, ಮಾಲೂರು, ತುಮಕೂರು,‌ ಗುಂಡ್ಲುಪೇಟೆ, ಹನೂರು, ಕೊಳ್ಳೆಗಾಲ, ದೇವದುರ್ಗ, ಮಸ್ಕಿ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ,ಮಂಗಳೂರು,‌ ಮೂಡಬಿದಿರೆ, ಬ್ರಹ್ಮಾವರ, ಕಾರವಾರ.

ಪರಿಷ್ಕೃತ ಬರ ಕೈಪಿಡಿ -2020ರಲ್ಲಿ ಹಂತ-1 ಮತ್ತು ಹಂತ-2ರಲ್ಲಿ ಸೂಚಿಸಿರುವ ಮಾನದಂಡಗಳನ್ವಯ ಪ್ರಸಕ್ತ ಮುಂಗಾರು ಅವಧಿಯಲ್ಲಿ ರಾಜ್ಯದ 236 ತಾಲೂಕಗಳ ಪೈಕಿ ಈಗಾಗಲೇ 195 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದಿರುವ 41 ತಾಲೂಕುಗಳ ಪೈಕಿ ಹೆಚ್ಚುವರಿಯಾಗಿ 21 ತಾಲ್ಲೂಕುಗಳಲ್ಲಿ ತೀವ್ರತೆಯನ್ನು ಆಧರಿಸಿ 21 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯನ್ನು ನಿರ್ಧರಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಇಂದು ಸಚಿವ ಸಂಪುಟದ ಉಪ ಸಮಿತಿಯ ಶಿಫಾರಸ್ಸಿನಂತೆ ಅನುಬಂಧ-1ರಲ್ಲಿ ಹೊಸದಾಗಿ ಪ್ರಸ್ತಾಪಿಸಿರುವ 21 ತಾಲೂಕುಗಳಲ್ಲಿ ಶೇಕಡ 10 ರಷ್ಟು ಗ್ರಾಮಗಳನ್ನು ಯಾದೃಚ್ಛಿಕ ಆಗಿ ಆಯ್ಕೆ ಮಾಡಿ, ಪ್ರಮುಖ ಬೆಳೆಗಳನ್ನು ಗುರುತಿಸಿ ಪ್ರತಿ ಬೆಳೆಗಳ ಸುಮಾರು 5 sites ಇ-ಆಡಳಿತ ಅಭಿವೃದ್ಧಿ ಪಡಿಸಿರುವ ಆ್ಯಪ್ ಮೂಲಕ ಪರೀಕ್ಷೆ ಮಾಡಿ, ಬರ ಪಿಡಿಯಲ್ಲಿ ನಮೂದಿಸಿರುವ Form No.11 ರಲ್ಲಿ ದೃಢೀಕೃತ ವರದಿಯನ್ನು ಸಂಬಂಧ ಪಟ್ಟ ಜಿಲ್ಲಾಧಿಕಾರಿಗಳು ಸಲ್ಲಿಸಿದ್ದರು. ಅದರಂತೆಯೇ ಇದೀಗ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಪ್ರಕಟಿಸಲಾಗಿದೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ https://chat.whatsapp.com/HLCYrALalJpLbeEMnLRyZB

ತಪ್ಪದೆ ಓದಿರಿ :-

➡️ 216 ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ ನಿಮ್ಮ ತಾಲೂಕು ಇದೆ ಚೆಕ್ ಮಾಡಿಕೊಳ್ಳಿ https://krushivahini.com/2023/10/13/baragala-talukugalu/

➡️ ಈ ಕೆಲಸ ಮಾಡಿದ ರೈತರಿಗೆ ಮಾತ್ರ ಬೆಳೆವಿಮೆ ಹಾಗೂ ಬೆಳೆ ಹಾನಿ ಪರಿಹಾರ ಹಣ ಖಾತಿಗೆ ಜಮ ಆಗುತ್ತದೆ ಈ ಕೂಡಲೇ ಮೊಬೈಲ್ನಲ್ಲಿ ಈ ಕೆಲಸ ಮಾಡಿ https://krushivahini.com/2023/10/12/fruits-id/

➡️ ಅನುಗ್ರಹ ಯೋಜನೆಯ ಅಡಿ ಜಾನುವಾರುಗಳು ಮರಣ ಹೊಂದಿದರೆ10,000/- ಸಹಾಯಧನವನ್ನು ಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. https://krushivahini.com/2023/10/12/anugraha-yojana-subsidy/

➡️ ಹೊಸ ರೇಷನ್ ಕಾರ್ಡನ್ನು ಈ ದಿನ ವಿತರಿಸಲಾಗುತ್ತದೆ ರಾಜ್ಯ ಸರ್ಕಾರದ ಮಹತ್ವದ ಮಾಹಿತಿ ಬಿಡುಗಡೆ https://krushivahini.com/2023/10/11/new-ration-card-will-be-distributed-on-this-day/

➡️ ಬರಗಾಲ ಘೋಷಿತ ರೈತರಿಗೆ ಬೆಳೆ ಸಾಲ ಮರುಪಾವತಿ ಬಗ್ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ ಇಲ್ಲಿದೆ ಮಹತ್ವದ ಮಾಹಿತಿ ತಪ್ಪದೆ ತಿಳಿಯಿರಿ https://krushivahini.com/2023/10/11/crop-loan-repayment-for-drought-declared-farmers/

➡️ ಕೋಳಿ ಫಾರಂ ಹೊಸದಾಗಿ ಆರಂಭಿಸಲು ಸರ್ಕಾರದಿಂದ 50% ಸಹಾಯಧನ ಈ ಕೂಡಲೇ ಅರ್ಜಿ ಸಲ್ಲಿಸಿ https://krushivahini.com/2023/10/10/poultry-farming-subsidy-national-livestock-mission/

➡️ ಫಸಲ್ ಭೀಮಾ ಯೋಜನೆ ಬೆಳೆ ವಿಮೆ ಹಾಗೂ ಬೆಳೆ ಹಾನಿ ಹಣ ಜಮಾ ಆಗಿರುವ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿ ನೋಡಿರಿ https://krushivahini.com/2023/10/09/fasal-bhima-yojana-new-list-released/

➡️ ಈ ಕೆಲಸ ಮಾಡಿದವರಿಗೆ ಮಾತ್ರ ಬರಗಾಲ ಸಮೀಕ್ಷೆ ಅಡಿಯಲ್ಲಿ ಹಣವನ್ನು ಕೊಡುತ್ತಾರೆ. ಕೂಡಲೇ ಈ ಕೆಲಸ ಮಾಡಿ https://krushivahini.com/2023/10/09/baragala-samikshe-2023/

➡️ ಸರ್ಕಾರದಿಂದ ಅಧಿಕೃತ ಬರಗಾಲ ಘೋಷಿತ ಪಟ್ಟಿಯನ್ನು ಇಲ್ಲಿ ನೋಡಿ https://krushivahini.com/2023/09/14/official-drought-list-released-by-govt/

➡️ ರಾಜ್ಯಕ್ಕೆ 42 ಕೋಟಿ ಬೆಳೆ ವಿಮೆ ಹಣ ಜಮಾ ಈ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ ಜಮಾ ಆಗಿದೆ ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ https://krushivahini.com/2023/10/07/crop-insurance/

Leave a Reply

Your email address will not be published. Required fields are marked *