Gruhalakshmi amount not deposited do this immediately:-

ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಈಗಾಗಲೇ ಗೃಹಲಕ್ಷ್ಮಿ ಯೋಜನೆ ಅಡಿ ಬಹಳಷ್ಟು ಫಲಾನುಭವಿಗಳ ಹಣವು ಅವರ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಅದೇ ರೀತಿಯಾಗಿ ಬಹಳಷ್ಟು ಜನರು ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಈ ಲೇಖನದಲ್ಲಿ ಕೊಟ್ಟಿರುವ ಹಾಗೆ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಇಲ್ಲಿ ಹೇಳಿರುವ ಹಾಗೆ ಮಾಡಿದರೆ ನಿಮ್ಮ ಗ್ರಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಖಂಡಿತವಾಗಿಯೂ ಜಮೆಯಾಗುತ್ತದೆ. ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ ಹಾಗೂ ಶೇರ್ ಮಾಡಿ.

ಬೆಂಗಳೂರು, ಅಕ್ಟೋಬರ್‌ 09: ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಹೌದು ಇನ್ನೂ ಹಣ ಜಮಾ ಆಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸೂಕ್ತ ಕಾರಣಗಳನ್ನು ನೀಡಿದ್ದಾರೆ.

3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ.

5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್ ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ(CDPO)ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ. ಜಿಲ್ಲಾ ಉಪ ನಿರ್ದೇಶಕರು, ನಿರೂಪಣಾಧಿಕಾರಿಗಳು ಮತ್ತು ಮಹಿಳೆಯರ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಹಾಗೂ ಇನ್ನಿತರ ಸಿಬ್ಬಂದಿ ವರ್ಗದವರಿದ್ದು ಕಚೇರಿಯ ವಿಳಾಸ, ದೂರವಾಣಿ ಸಂಖ್ಯೆಯ ಮಾಹಿತಿ.

ನಿಮ್ಮ ಜಿಲ್ಲೆಯ ಸಿಡಿಪಿಯೋ (CDPO)ಕಚೇರಿ ಎಲ್ಲಿದೆ ಹಾಗೂ ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಕೆಳಕಂಡ ಲಿಂಕ್ 👇🏻..

https://dwcd.karnataka.gov.in/page/Contact+us/Deputy+Directors/en

1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್ ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಇಂದೀಕರಿಸಿದ ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಲಾಗಿದೆ.

ಗೃಹಲಕ್ಷ್ಮಿ ಅರ್ಹ ಫಲಾನುಭವಿಗಳ ಪಟ್ಟಿ:-

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ನಿಮ್ಮ ಫೋನಿನ ಎಡಬದಿಯಲ್ಲಿ ಕಾಣುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ

ತದನಂತರ ಈ ಮುಖಪುಟದಲ್ಲಿ ಈ ರೇಷನ್ ಕಾರ್ಡ್(e-ration card) ಅನ್ನು ಒತ್ತಿ. ಕೆಳಗೆ ಶೋ ವಿಲೇಜ್ ಲಿಸ್ಟ್ ಅನ್ನು ಒತ್ತಬೇಕು.

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯಿತಿ, ಹಳ್ಳಿ ಯನ್ನು, ಆಯ್ಕೆ ಮಾಡಿಕೊಂಡ ಮೇಲೆ Go ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಗೃಹಲಕ್ಷ್ಮಿ ಅರ್ಹ ಫಲಾನುಭವಿಗಳ ಪಟ್ಟಿ ಸಿಗುತ್ತದೆ. ಈ ಲಿಸ್ಟ್ ನಲ್ಲಿ ಹೆಸರಿದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಆಗುತ್ತದೆ.

ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿರುವ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ..

ಮೊದಲನೆಯದಾಗಿ ಈ ಕೆಳಕಂಡ ಲಿಂಕನ್ನು ಒತ್ತಿ.. ಪ್ಲೇ ಸ್ಟೋರ್ ನಲ್ಲಿ ಈ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.. https://play.google.com/store/apps/details?id=com.dbtkarnataka

ನಂತರ ಅಲ್ಲಿ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ನಂತರ ಗೆಟ್ ಒಟಿಪಿ ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬಂದು ಒಟಿಪಿಯನ್ನು ಅಲ್ಲಿ ಹಾಕಬೇಕು.

ಅದಾದ ನಂತರ ನಿಮಗೆ ಬೇಕಾದ ನಾಲ್ಕು ಅಂಕಿಯ m-pin ಅನ್ನು ಅಲ್ಲಿ ಹಾಕಬೇಕು.

ಮುಂದಿನ ಮುಖಪುಟದಲ್ಲಿ ನಿಮಗೆ ಕಾಣುವ ಹಾಗೆ ನೀವು ಮೊದಲಿಗೆ ಪೇಮೆಂಟ್ ಸ್ಟೇಟಸ್ Payment status ಮೇಲೆ ಕ್ಲಿಕ್ ಮಾಡಬೇಕು. ಅದೇ ರೀತಿಯಾಗಿ ನಿಮ್ಮ ಆಧಾರ್ ಬ್ಯಾಂಕ್ ಅಕೌಂಟ್ ಗೆ ಸೀಟ್ ಆಗಿರುವ ಸ್ಟೇಟಸ್ ಅನ್ನು ನೀವು ಅಲ್ಲಿ ನೋಡಬಹುದು.

ನೀವು ಪೇಮೆಂಟ್ ಸ್ಟೇಟಸ್ ಮೇಲೆ ಒತ್ತಿದರೆ ನಿಮಗೆ ಹಣ ಜಮಾ ಆಗಿದ್ದರೆ ನಿಮಗೆ ಈ ರೀತಿ ಬರುತ್ತದೆ

ಅಕ್ಟೋಬರ್ 4 ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ಕೈಗೊಂಡಿರುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.

ತಪ್ಪದೆ ಈ ಕೆಲಸ ಮಾಡಿರಿ ಗೃಹಲಕ್ಷ್ಮಿ ಯೋಜನೆಯ ಹಣ ಖಂಡಿತವಾಗಿಯೂ ಜಮೆ ಆಗುತ್ತದೆ..

1) ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದೇ ಇರುವುದು ಯೋಜನೆಯಡಿ ನಗದು ಮೊತ್ತ ವರ್ಗಾವಣೆ ಆಗುವುದಿಲ್ಲ.

2) ಆಧಾರ್ ಸಂಖ್ಯೆಗೆ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಜೋಡಣೆ ಮಾಡದೇ ಇರುವುದು.

3) ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿದ್ದಾಗ ಅಥವಾ ಮುಖ್ಯಸ್ಥರೇ ಇಲ್ಲದಿದ್ದ ಸಂದರ್ಭದಲ್ಲಿ ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿರುವುದು

4) ಬ್ಯಾಂಕಿನಲ್ಲಿ ಇ-ಕೆವೈಸಿ ಕಾರ್ಯ ಪೂರ್ಣಗೊಳಿಸದೇ ಇರುವುದು, ಕಳೆದ ಮೂರು ತಿಂಗಳಲ್ಲಿ ಒಂದು ತಿಂಗಳಾದರು ಪಡಿತರ ಸಾಮಗ್ರಿಯನ್ನು ಪಡೆಯದೆ ಇದ್ದಲ್ಲಿಯೂ ನಗದು ಮೊತ್ತ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುವುದಿಲ್ಲ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ https://chat.whatsapp.com/K9mNNO3T6FzKJGch4oqd2m

Leave a Reply

Your email address will not be published. Required fields are marked *