BJP said that Gruhalakshmi Yojana has been stopped for 2 months
ಬೆಂಗಳೂರು,: ಅರ್ಹ ಫಲಾನುಭವಿಗಳಿಗೆ ಮಾಸಿಕ 2,000 ರೂಪಾಯಿ ವಿತರಿಸುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ‘ಗೃಹ ಲಕ್ಷ್ಮೀ’ ಯೋಜನೆಯು ಎರಡೇ ತಿಂಗಳಿಗೆ ಸ್ಥಗಿತಗೊಂಡಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ರಾಜ್ಯ ಸರ್ಕಾರದ ವಿರುದ್ಧ ಯೋಜನೆ ವಿಚಾರವಾಗಿ ಹರಿಹಾಯ್ದಿದೆ.
ಗೃಹಲಕ್ಷ್ಮೀ ಯೋಜನೆ ಕುರಿತು ಬಿಜೆಪಿ ಮಂಗಳವಾರ ಟ್ವೀಟ್ ಮಾಡಿದೆ. ಸರ್ಕಾರಿ ಹಣ ಖರ್ಚು ಮಾಡಿ ವೈಭವದ ಪ್ರಚಾರದಿಂದ ಆರಂಭವಾದ ಗೃಹಲಕ್ಷ್ಮಿ ಯೋಜನೆ ಎರಡೇ ತಿಂಗಳಿಗೆ ಸ್ಥಗಿತಗೊಂಡಿರುವುದು ನುಡಿದಂತೆ ನಡೆಯಲಾರದ ಕರ್ನಾಟಕ ಸರ್ಕಾರದ ವಾಸ್ತವ ಅನಾವರಣಗೊಂಡಿದೆ ಎಂದು ಟೀಕಿಸಿದೆ.
ಮಹಿಳೆಯರಿಗೆ ಬೆಲೆ ಏರಿಕೆ ಹೊರೆ ಕಡಿಮೆ ಮಾಡಲು ಮಾಸಿಕವಾಗಿ 2000 ರೂಪಾಯಿಯನ್ನು ಮಹಿಳೆಯರಿಗೆ ನೀಡುವಾದಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದರು. ಇದೀಗ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹2,000 ಮೋಸದ ಜತೆಗೆ ಬೆಲೆ ಏರಿಕೆಯೂ ಉಚಿತ ಎಂದು ಬಿಜೆಪಿ ಲೇವಡಿ ಮಾಡಿದೆ.
ಗೃಹ ಲಕ್ಷ್ಮಿ ಹಣ ಇನ್ನು ಯಾಕೆ ಜಮಾ ಆಗಿಲ್ಲ ಇಲ್ಲಿದೆ ನೋಡಿ ಪರಿಹಾರ??
3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ.
5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್ ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ(CDPO)ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ.
1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್ ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಇಂದೀಕರಿಸಿದ ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಲಾಗಿದೆ.
ಗೃಹ ಲಕ್ಷ್ಮಿ ಯೋಜನೆಯ ಮಾಸಿಕ ಹಣಕ್ಕಾಗಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸಲ್ಲಿಸಿ ನೋಂದಾಯಿಸಿಕೊಂಡಿದ್ದ ಮಹಿಳೆಯರ ಪೈಕಿ 9 ಲಕ್ಷ ಅಧಿಕ ಮಹಿಳೆಯರಿಗೆ ಹಣ ಹೋಗಿಲ್ಲ ಎನ್ನಲಾಗಿದೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಣ ವಿತರಣೆಗೆ ಆದ ಅಡ್ಡಿ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ವಿಚಾರವಾಗಿ ರಾಜ್ಯ ಬಿಜೆಪಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದೆ. ನುಡಿದಂತೆ ನಡೆದಿಲ್ಲ ಎಂದು ದೂರಿದೆ.
ತಪ್ಪದೆ ಈ ಕೆಲಸ ಮಾಡಿರಿ ಗೃಹಲಕ್ಷ್ಮಿ ಯೋಜನೆಯ ಹಣ ಖಂಡಿತವಾಗಿಯೂ ಜಮೆ ಆಗುತ್ತದೆ..
1) ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದೇ ಇರುವುದು ಯೋಜನೆಯಡಿ ನಗದು ಮೊತ್ತ ವರ್ಗಾವಣೆ ಆಗುವುದಿಲ್ಲ.
2) ಆಧಾರ್ ಸಂಖ್ಯೆಗೆ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಜೋಡಣೆ ಮಾಡದೇ ಇರುವುದು.
3) ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿದ್ದಾಗ ಅಥವಾ ಮುಖ್ಯಸ್ಥರೇ ಇಲ್ಲದಿದ್ದ ಸಂದರ್ಭದಲ್ಲಿ ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿರುವುದು
4) ಬ್ಯಾಂಕಿನಲ್ಲಿ ಇ-ಕೆವೈಸಿ ಕಾರ್ಯ ಪೂರ್ಣಗೊಳಿಸದೇ ಇರುವುದು, ಕಳೆದ ಮೂರು ತಿಂಗಳಲ್ಲಿ ಒಂದು ತಿಂಗಳಾದರು ಪಡಿತರ ಸಾಮಗ್ರಿಯನ್ನು ಪಡೆಯದೆ ಇದ್ದಲ್ಲಿಯೂ ನಗದು ಮೊತ್ತ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುವುದಿಲ್ಲ.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/K9mNNO3T6FzKJGch4oqd2m