Crop insurance compensation not deposited

ನಮಸ್ಕಾರ ಆತ್ಮೀಯ ರೈತ ಬಾಂಧವರೇ ರೈತರಿಗೆ ಅನುಕೂಲವಾಗುವ ಬೆಳೆ ವಿಮೆ, ಹಾಗೂ ಬೆಳೆ ಹಾನಿ ಪರಿಹಾರದ ಮತ್ತು ಕಳೆದ ಮೂರು ವರ್ಷದಿಂದ ಇನ್ನೂ ಆದರೂ ಜಮಯಿಯಾಗಿಲ್ಲ ಈ ಲೇಖನದಲ್ಲಿ ಏಕೆ ಇನ್ನೂ ಆದರೂ ಹಣ ಜಮೆಯಾಗಿಲ್ಲ ಎಂಬ ಕಾರಣವನ್ನು ತಿಳಿದುಕೊಳ್ಳಿ. ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆಗಳು ನಡೆಯುತ್ತಿರುವ ಬೆನ್ನಲ್ಲೇ ಬೆಳೆ ವಿಮೆ ಪರಿಹಾರದ ಮೊತ್ತವು ಕಳೆದ ಮೂರು ವರ್ಷಗಳಿಂದಲೂ ಪಾವತಿಯಾಗದೇ ಬಾಕಿ ಇದೆ.

ಆಧಾರ್ ಜೋಡಣೆಯಲ್ಲಿನ ಲೋಪವೂ ಸೇರಿದಂತೆ ಇನ್ನಿತರ ತಾಂತ್ರಿಕ ದೋಷಗಳಿಂದಾಗಿ ಕಳೆದ 3 ವರ್ಷದಿಂದಲೂ ರಾಜ್ಯದ 10,053 ರೈತರಿಗೆ 9.68 ಕೋಟಿ ರೂ. ಇನ್ನು ಆದರೂ ಬೆಳೆ ವಿಮೆ ಪರಿಹಾರದ ಮೊತ್ತವೇ ಜಮೆಯಾಗಿಲ್ಲ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ರೈತರಿಗೆ ಹಿಂದಿನ ಸಾಲುಗಳಲ್ಲಿ ಬಾಕಿ ಇರುವ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ವೈಫಲ್ಯಗಳ ಮೇಲುಗೈಯಾಗಿರುವುದು ಇದೀಗ ತಿಳಿದುಬಂದಿದೆ.

ಬಾಕಿ ಇರುವ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸುವ ಸಂಬಂಧ ಕೃಷಿ ಇಲಾಖೆಯ ಆಯುಕ್ತರು ಮತ್ತು ಕಂದಾಯ ಇಲಾಖೆ ಆಯುಕ್ತರು, ಬ್ಯಾಂಕ್, ವಿಮೆ ಕಂಪೆನಿಗಳ ನಡುವಿನ ಸಮನ್ವಯತೆಯಲ್ಲಿ ಬೆಳೆ ವಿಮೆಯ ಕೊರತೆಯೇ ಇದಕ್ಕೆ ಕಾರಣ ಎನ್ನಲಾಗಿದೆ.

ಬೆಳೆ ವಿಮೆ ಪರಿಹಾರ ಮೊತ್ತ ಪಾವತಿ ಸಂಬಂಧ ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್ ಅವರು 2023 ರ ಸೆ.22 ರಂದು ಕಂದಾಯ ಇಲಾಖೆಯ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಕಂದಾಯ ಇಲಾಖೆ ಅಡಿ ಬರುವ ಗ್ರಾಮ್ ಒನ್ ಸೆಂಟರ್, ಬಾಪೂಜಿ ಸೇವಾ ಕೇಂದ್ರಗಳು ಇತ್ಯಾದಿಗಳ ಸೇವೆಗಳನ್ನು ಬಳಸಿಕೊಂಡು ಬಾಕಿ ಇರುವ ರೈತರಿಗೆ ಬೆಳೆ ವಿಮೆ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಬೇಕಿದ್ದ ಕಂದಾಯ ಇಲಾಖೆಯ ಬೇಜವಾಬ್ದಾರಿ ಇರುವುದು ಕಂಡು ಬಂದಿದೆ.

ಎಲ್ಲಾ ಜಿಲ್ಲೆಗಳ ಬ್ಯಾಂಕ್ ಹಾಗೂ ವಿಮಾ ಸಂಸ್ಥೆಗಳೊಂದಿಗೆ ಸತತವಾಗಿ ಪ್ರಯತ್ನಿಸಿ, ಬಾಕಿ ಮೊತ್ತವನ್ನು ಎಲ್ಲಾ ರೈತರಿಗೆ ಪಾವತಿಸಲು ಕ್ರಮವಹಿಸಲಾಗಿದೆ. ಆದರು 2019-20 ರಿಂದ 2022 ರ ಮುಂಗಾರು ಹಂಗಾಮಿನವರೆಗೆ 10,053 ರೈತರಿಗೆ 9.68 ಕೋಟಿ ರೂ. ಮೊತ್ತದ ಬೆಳೆವಿಮೆ ಪರಿಹಾರ ಪಾವತಿಸಲು ಬಾಕಿ ಇದೆ ಎಂದು ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್ ಅವರು ಬರೆದಿರುವ ಪತ್ರದಲ್ಲಿ ವಿವರಿಸಲಾಗಿದೆ.

2019-20 ನೇ ಸಾಲಿನಿಂದ ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸುವ ಪ್ರಕ್ರಿಯೆಯನ್ನು ರಾಷ್ಟ್ರದಲ್ಲೇ ಪ್ರಥಮ ಬಾರಿಗೆ ಸಂರಕ್ಷಣೆ ಪೋರ್ಟಲ್ ತಂತ್ರಾಂಶ ಅನುಷ್ಠಾನಗೊಳಿಸಲಾಗಿತ್ತು. ರೈತರ ಖಾತೆಗೆ ಆಧಾರ್ ಆಧಾರಿತ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದ ಕಾರಣವೂ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ 2019-20ನೇ ಸಾಲಿನಿಂದ ರಾಜ್ಯದಲ್ಲಿ ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತವು ರೈತರ ಬ್ಯಾಂಕ್ ಖಾತೆಗೆ ಜಮೆ ಯಾಗದೇ ಬಾಕಿ ಇದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ಇಳುವರಿ ಹಾಗೂ ಕ್ಷೇತ್ರ ಆಧಾರಿತ ಯೋಜನೆಯಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ 900 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿ.ಸಿ.ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಚಲುವನಾರಾಯಣಸ್ವಾಮಿ, ಕಳೆದ ವರ್ಷ ಬಿಜೆಪಿ ಅವಧಿಯಲ್ಲಿ ಇದೇ ಸಮಯಕ್ಕೆ 113 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವರ್ಷ 22 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಬಾರಿಗೆ ಹೋಲಿಸಿದರೆ ಆತ್ಮಹತ್ಯೆ ಪ್ರಮಾಣ ಕಡಿಮೆ ಆಗಿದೆ. ಆತ್ಮಹತ್ಯೆಯನ್ನು ಸಂಪೂರ್ಣ ನಿಲ್ಲಿಸಲು ಸರಕಾರ ಮುಂದಾಗಿದೆ ಎಂದರು.

ಅರ್ಜಿ ಸಲ್ಲಿಸುವುದರಿಂದ ಬೆಳೆ ಕಟಾವು ಪ್ರಯೋಗ ಹಾಗೂ ವಿಮಾ ಪರಿಹಾರ ಮೊತ್ತವನ್ನು ಅರ್ಹ ರೈತರ ಖಾತೆಗೆ ಜಮೆಯಾಗುವವರೆಗೆ ಪ್ರತಿಯೊಂದನ್ನೂ ವೈಜ್ಞಾನಿಕವಾಗಿ ಸಂರಕ್ಷಣೆ ಪೋರ್ಟಲ್ ಮೂಲಕ ಮಾಡಲಾಗುತ್ತಿದೆ ಎಂದು ಸರಕಾರವು ಹೆಮ್ಮೆಯಿಂದ ಬೀಗಿತ್ತು.

ಬೆಳೆ ವಿಮೆ ವಂಚನೆಗಳು ನಿರಂತರವಾಗಿ ವರದಿಯಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವೂ ಇದೆ. ರಾಜ್ಯದ ಕೆಲವು ಜಿಲ್ಲೆಗಳ ರೈತರು ಇಳುವರಿ ಮೌಲ್ಯಮಾಪನವನ್ನು ನಿರ್ವಹಿಸುವ ಅಧಿಕಾರಿಗಳಿಗೆ ವಿಮೆ ಮೊತ್ತವನ್ನು ಪಾವತಿಸುತ್ತಾರೆ.

ಕೃಷಿ ವೆಚ್ಚವನ್ನು ಪೂರೈಸಲು ಮತ್ತು ದುಡಿಯುವ ಬಂಡವಾಳಕ್ಕಾಗಿ ರೈತರು ಸಾಲವನ್ನು ಪಡೆಯುತ್ತಾರೆ. ಅಲ್ಲದೆ ಬರ, ಪ್ರವಾಹ ಅಥವಾ ಇತ್ತೀಚೆಗೆ ಕಂಡುಬಂದಂತೆ ಅಕಾಲಿಕ ಮಳೆ ಬೆಳೆ ಹಾನಿಯಿಂದಾಗಿ ನಷ್ಟಕ್ಕೀಡಾಗುವ ರೈತರೂ ಸಾಲಕ್ಕೆ ಮೊರೆ ಹೋಗುತ್ತಾರೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.ಬೆಳೆ ವಿಮೆ ಪರಿಹಾರ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

ತಪ್ಪದೆ ಓದಿರಿ :-

➡️🌴ಅಡಿಕೆ ಎಲೆ ಚುಕ್ಕೆ ರೋಗದ ಸಂಪೂರ್ಣ ನಿರ್ವಹಣೆ! ✅ಯಾವ ಜಿಲ್ಲೆಯಲ್ಲಿ ಅಡಿಕೆ ಧಾರಣೆ💵 ಎಷ್ಟಿದೆ ಎಂದು ತೆಗೆದುಕೊಳ್ಳಿ 👇🏻..
https://krushivahini.com/2023/10/20/arecaunt-leaf-spot-management/

➡️ ಈ ಕೆಲಸ ಮಾಡದಿದ್ದರೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬರುವುದಿಲ್ಲ. ಮೊಬೈಲ್ ನಲ್ಲಿ ಈ ಕೆಲಸವನ್ನು ಮಾಡಿ. https://krushivahini.com/2023/10/17/ration-card-correction-time-extended/

➡️ ಈ ಜಿಲ್ಲೆಯ ರೈತರಿಗೆ ಸದ್ಯದಲ್ಲೇ 6 ಕೋಟಿ ಪರಿಹಾರ ಹಣ ಜಮೆಯಾಗಲಿದೆ. ನಿಮ್ಮ ತಾಲೂಕಿಗೆ ಎಷ್ಟು ಪರಿಹಾರ ಹಣ ಬರುತ್ತದೆ ಇಲ್ಲಿ ಚೆಕ್ ಮಾಡಿಕೊಳ್ಳಿ https://krushivahini.com/2023/10/15/6-4-crore-crop-loss-compensation/

➡️ ಪಿಎಂ ಕಿಸಾನ್ ಯೋಜನೆಯ ಹಣ ಹೆಚ್ಚಳ ಈ ಕೆಲಸ ಮಾಡಿದವರಿಗೆ ಮಾತ್ರ ಹಣ ಜಮೆಯಾಗುತ್ತದೆ https://krushivahini.com/2023/10/14/pm-kisan-yojana-money-increased/

➡️ ಮತ್ತೆ ಹೆಚ್ಚುವರಿ ತಾಲೂಕುಗಳು ಅಂದರೆ 216 ತಾಲೂಕುಗಳನ್ನು ಬರಪೀಡಿತ ಆಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ ನಿಮ್ಮ ತಾಲೂಕು ಇದೆಯೇ ಇಲ್ಲಿ ನೋಡಿ https://krushivahini.com/2023/10/13/baragala-talukugalu/

Leave a Reply

Your email address will not be published. Required fields are marked *