4,860 crore as drought relief from the central government :-

ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಶೀಘ್ರ ದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತಾ ವರದಿ ನೀಡಲಿದ್ದು, ಅದಾದ ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ರೈತರಿಗೆ ಮಧ್ಯಂತರ ಬೆಳೆ ಪರಿಹಾರ ನೀಡುವುದು ಸೇರಿದಂತೆ ರೈತರಿಗೆ ಹೇಗೆ ನೆರವಾಗಬೇಕು ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ರಾಜ್ಯದಲ್ಲಿ ಸೃಷ್ಟಿಯಾಗಿ ರುವ ಬರದ ಹಿನ್ನೆಲೆಯಲ್ಲಿ 39.74 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶದಲ್ಲಿ ಬೆಳೆ ನಷ್ಟವುಂಟಾಗಿದೆ. ಸದ್ಯ ಮಳೆ ಯಾಗುತ್ತಿದ್ದರೂ, ಬೆಳೆ ನಷ್ಟವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತಿಲ್ಲ.

ಈ ಎಲ್ಲದರ ಬಗ್ಗೆ ಕೇಂದ್ರ ಸರ್ಕಾರದಿಂದ ಬಂದ ಬರ ಅಧ್ಯಯನ ತಂಡಕ್ಕೂ ಮಾಹಿತಿ ನೀಡಲಾಗಿದೆ. ಅಲ್ಲದೆ, ಕೇಂದ್ರದ ತಂಡವೂ ರಾಜ್ಯದ ಪರಿಸ್ಥಿತಿ ಬಗ್ಗೆ ಅರಿತಿದೆ. ಅದಕ್ಕೆ ತಕ್ಕಂತೆ ಪರಿಹಾರ ನೀಡಲಿದೆ ಎಂಬ ವಿಶ್ವಾವಿದೆ ಎಂದರು. ಕೇಂದ್ರ ಸರ್ಕಾರದಿಂದ ಬರ ಪರಿಹಾರವಾಗಿ 4,860 ಕೋಟಿ ರು. ನೀಡುವಂತೆ ಕೋರಲಾಗಿದೆ. ಕೇಂದ್ರದ ತಂಡವು ಅಧ್ಯಯನ ನಡೆಸಿದ್ದು ರಾಜ್ಯ ಸರ್ಕಾರದಿಂದ ಎಲ್ಲ ರೀತಿಯ ಅಗತ್ಯ ಮಾಹಿತಿ ನೀಡಲಾಗಿದೆ. ಕೇಂದ್ರ ತಂಡವು ಸಕಾರಾತ್ಮಕವಾಗಿ ಸ್ಪಂದಿಸಿ ಪರಿಹಾರ ದೊರಕಿಸುವುದಾಗಿ ತಿಳಿಸಿದೆ.

ಆದರೆ, ಕೇಂದ್ರ ಸರ್ಕಾರದಿಂದ ಪರಿಹಾರವು ವಿಳಂಬವಾಗಲಿದ್ದು, ಅದಕ್ಕಾಗಿ ರೈತರಿಗೆ ರಾಜ್ಯ ಸರ್ಕಾರದಿಂದಲೇ ಮಧ್ಯಂತರ ಪರಿಹಾರ ನೀಡುವ ಬಗ್ಗೆಯೂ ಚರ್ಚಿಸಲಾಗುತ್ತಿದೆ. ಕೇಂದ್ರ ತಂಡವು ತನ್ನ ಅಧ್ಯಯನದ ಕುರಿತು ಸ್ಪಷ್ಟತಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದೆ. ಅದಾದ ನಂತರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ನೀಡುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

55 ತಾಲೂಕುಗಳ ಮರು ಸಮೀಕ್ಷೆ: ರಾಜ್ಯದಲ್ಲಿ ಮಳೆ ಕೊರತೆ ಇದ್ದರೂ ಕೃಷಿ ಭೂಮಿಯಲ್ಲಿ ಹಸಿರು ಹೊದಿಕೆ ಹೆಚ್ಚಿದೆ.ಹೀಗಾಗಿ ರಾಜ್ಯವು ಹಸಿರು ಬರಗಾಲ ಎದುರಿಸುತ್ತಿದೆ. ಅದರಿಂದಾಗಿ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ನಾಶದಿಂದಾಗಿ 4,030 ಕೋಟಿ ರು. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರ ಜತೆಗೆ ಮೇವು,ಔಷಧ, ಆಹಾರ, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಇನ್ನಿತರ ಕ್ರಮಗಳಿಗಾಗಿ ಒಟ್ಟು ಬರ ಪರಿಹಾರವಾಗಿ 4,860 ಕೋಟಿ ರು. ನೀಡುವಂತೆ ಕೋರಲಾಗಿದೆ. ಅದರ ಜತೆಗೆ ಸಾಧಾರಣ ಬರ ಎಂದು ಘೋಷಿಸಲಾಗಿರುವ 34 ತಾಲೂಕುಗಳು ಹಾಗೂಹೊಸದಾಗಿ ಬರದ ಪಟ್ಟಿಗೆ ಸೇರ್ಪಡೆ ಮಾಡಬೇಕಿರುವ 21 ತಾಲೂಕುಗಳ ಮರು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಚೆಲುವರಾಯಸ್ವಾಮಿ ತಿಳಿಸಿದರು.

ಪರ್ಯಾಯ ಬೆಳೆಗಳಿಗೆ ಒತ್ತು: ಮಳೆ ಕೊರತೆ ಸಂದರ್ಭದಲ್ಲಿ ರೈತರು ಪರ್ಯಾಯ ಬೆಳೆಗತ್ತ ಹೆಚ್ಚಿನ ಗಮನಹರಿಸಬೇಕು. ಕೃಷಿ ವಿಶ್ವವಿದ್ಯಾಲಯಗಳ ಮೂಲಕ ರೈತರಲ್ಲಿ ಜಾಗೃತಿಯನ್ನೂ ಮೂಡಿಸಲಾ ಗುತ್ತಿದೆ. ನೀರು ಕಡಿಮೆ ಬಳಕೆಯಾಗುವ ಬೆಳೆಗಳನ್ನು ಬೆಳೆಯುವಂತೆಯೂ ತಿಳಿಸಲಾಗುತ್ತಿದೆ. ಅದರ ಜತೆಗೆ ಹೊಸಬಗೆಯ ತಳಿಗಳ ಸೃಷ್ಟಿಗೂ ಸಂಶೋಧನಾ ವಿಭಾಗ ಕೆಲಸ ಮಾಡುತ್ತಿದೆ ಎಂದು ಚೆಲುವರಾಯ ಸ್ವಾಮಿ ಹೇಳಿದರು.

ರೈತರು ಪರ್ಯಾಯ ಬೆಳೆಗತ್ತ ಹೆಚ್ಚಿನ ಗಮನಹರಿಸಬೇಕು. ಕೃಷಿ ವಿಶ್ವವಿದ್ಯಾಲಯಗಳ ಮೂಲಕ ರೈತರಲ್ಲಿ ಜಾಗೃತಿಯನ್ನೂ ಮೂಡಿಸಲಾ ಗುತ್ತಿದೆ. ನೀರು ಕಡಿಮೆ ಬಳಕೆಯಾಗುವ ಬೆಳೆಗಳನ್ನು ಬೆಳೆಯುವಂತೆಯೂ ತಿಳಿಸಲಾಗುತ್ತಿದೆ. ಅದರ ಜತೆಗೆ ಹೊಸಬಗೆಯ ತಳಿಗಳ ಸೃಷ್ಟಿಗೂ ಸಂಶೋಧನಾ ವಿಭಾಗ ಕೆಲಸ ಮಾಡುತ್ತಿದೆ ಎಂದು ಚೆಲುವರಾಯ ಸ್ವಾಮಿ ಹೇಳಿದರು.

ಮೆಕ್ಕೆಜೋಳ ಹೆಚ್ಚು ಹಾನಿ ಬರಹಿನ್ನೆಲೆಯಲ್ಲಿ ರಾಜ್ಯದಲ್ಲಿ 39.74 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಅದರಲ್ಲಿ 11.84 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆಯಲಾಗಿದ್ದ ಮೆಕ್ಕೆ ಜೋಳ ನಾಶವಾಗಿದೆ. ಹಾಗೆಯೇ, 7.16 ಲಕ್ಷಹೆಕ್ಟೇರ್ ತೊಗರಿ, 4.45 ಲಕ್ಷ ಹೆಕ್ಟೇರ್ ರಾಗಿ, 4.04 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆಯಲಾಗಿದ್ದ ಹತ್ತಿ ನಾಶವಾಗುತ್ತಿದೆ. ಹಾಗೆಯೇ, ನೆಲಗಡಲೆ, ಹಸಿರು ಬೇಳೆ, ಭತ್ತ, ಸೋಯಾಬೀನ್, ಕಬ್ಬು ಸೇರಿದಂತೆ ಇನ್ನಿತರ ಬೆಳೆಗಳೂ ನೀರಿನಲ್ಲಿ ಹಾನಿಯಾಗಿವೆ.

ಬರ ಪರಿಹಾರಕ್ಕೆ ಈ ರೀತಿ ಮಾಡಿ :-

https://play.google.com/store/apps/details?id=com.csk.farmer23_24.cropsurvey

• ಈ ಮೇಲಿನ ಲಿಂಕ್ ಬಳಸಿ ಪ್ಲೇ ಸ್ಟೋರ್ ನಲ್ಲಿ ಮೊದಲು ಈ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
• ಅಲ್ಲಿ ತೋರಿಸುವ ಮುಖಪುಟದಲ್ಲಿ ತಮ್ಮ ಆಧಾರ್ ಕಾರ್ಡ್ ನ ಮೂಲಕ EKYC ಪ್ರಕ್ರಿಯೆ ಪೂರ್ಣಗೊಳಿಸಿ. ನೊಂದಾಯಿಸಿಕೊಂಡು ತಮ್ಮ ಜಮೀನಿನ ವಿವರಗಳನ್ನು ನಿಮ್ಮ ಹೊಲದ ಸರ್ವೆ ನಂಬರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕು.
• ತಮ್ಮ ಜಮೀನುಗಳಿಗೆ ತೆರಳಿ ಸಂಬಂಧಪಟ್ಟ ಸರ್ವೆ ನಂಬರ್ ನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರಗಳನ್ನು ತೆಗೆದು ಅಪ್ ಲೋಡ್ ಮಾಡಬೇಕು.
• ನಿಮ್ಮ ಬೆಳೆ ಸಮೀಕ್ಷೆಯ ಛಾಯಾಚಿತ್ರವು ಸರಿಯಾಗಿದ್ದು, ಬರಗಾಲ ಸಮೀಕ್ಷೆಯ ತಂಡವು ಇದಕ್ಕೆ ಅನುಮತಿ ಕೊಟ್ಟರೆ ಮಾತ್ರ ನಿಮಗೆ ಬೆಳೆ ಹಾನಿ ಬೆಳೆಯುವ ಇಂತಹ ಪರಿಹಾರ ಹಣ ಜಮಯಾಗುತ್ತವೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿhttps://chat.whatsapp.com/IdgrNNJ7davJ82ndmV12M1

ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ನಾಶದಿಂದಾಗಿ 4,030 ಕೋಟಿ ರೂ ಪರಿಹಾರ..

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ನಾಶದಿಂದಾಗಿ 4,030 ಕೋಟಿ ರು. ಪರಿಹಾರ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ಈ ಕೆಲಸ ಮಾಡದಿದ್ದರೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬರುವುದಿಲ್ಲ. ಮೊಬೈಲ್ ನಲ್ಲಿ ಈ ಕೆಲಸವನ್ನು ಮಾಡಿ. https://krushivahini.com/2023/10/17/ration-card-correction-time-extended/

➡️ ಈ ಜಿಲ್ಲೆಯ ರೈತರಿಗೆ ಸದ್ಯದಲ್ಲೇ 6 ಕೋಟಿ ಪರಿಹಾರ ಹಣ ಜಮೆಯಾಗಲಿದೆ. ನಿಮ್ಮ ತಾಲೂಕಿಗೆ ಎಷ್ಟು ಪರಿಹಾರ ಹಣ ಬರುತ್ತದೆ ಇಲ್ಲಿ ಚೆಕ್ ಮಾಡಿಕೊಳ್ಳಿ https://krushivahini.com/2023/10/15/6-4-crore-crop-loss-compensation/

➡️ ಪಿ ಎಂ ಕಿಸಾನ್ ಯೋಜನೆಯ ಹಣ ಹೆಚ್ಚಳ ಎಷ್ಟು ಹಣ ಸಿಗುತ್ತದೆ?? ಈ ಕೆಲಸ ಮಾಡಿದವರಿಗೆ ಮಾತ್ರ ಹಣ ಸಿಗುತ್ತದೆ https://krushivahini.com/2023/10/14/pm-kisan-yojana-money-increased/

➡️ ಕೃಷಿ ಪಂಸೆಟ್ ಗಳಿಗೆ 5 ತಾಸು ಕೊಡುವುದಾಗಿ ಘೋಷಣೆ ಮಾಡಿದ ಸಿಎಂ https://krushivahini.com/2023/10/14/continuous-5-hour-power-supply/

One thought on “4,860 crore as drought relief from the central government”

Leave a Reply

Your email address will not be published. Required fields are marked *