Continuous 5 hour power supply

ಕೃಷಿ ಪಂಪ್‌ಸೆಟ್‌ಗಳಿಗೆ ಅಬಾಧಿತ ಫೇಸ್ ಬೇರೆ ರಾಜ್ಯಗಳಿಗೆ ವಿದ್ಯುತ್ ಮಾರಾಟ ಸ್ಥಗಿತ ಇಂಧನ ಇಲಾಖೆ ಉನ್ನತ ಸಭೆಯಲ್ಲಿ ನಿರ್ಧಾರ.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ತೀವ್ರ ಹೆಚ್ಚಾಗಿದ್ದು, ರೈತರಿಗೆ ಕೃಷಿ ಪಂಪ್ ಸೆಟ್ ಬಳಕೆಗೆ ನಿತ್ಯ ಐದು ಗಂಟೆಗಳ ತಡೆರಹಿತ 3-ಫೇಸ್ ಎದ್ಯುತ್‌ ಪೂರೈಸುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಕಟ್ಟು ನಿಟ್ಟಿನ ಸೂಚನೆಯನ್ನು ಈಗಾಗಲೇ ನೀಡಿದ್ದಾರೆ.

ರಾಜ್ಯದಲ್ಲಿ ತೀವ್ರ ವಿದ್ಯುತ್‌ ಬರ ಉಂಟಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಅವರು, ಲಭ್ಯವಿರುವ ವಿದ್ಯುತ್ ದಕ್ಷವಾಗಿ ಹಂಚಿಕೆಯಾಗಬೇಕು. ಈ ನಿಟ್ಟಿನಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಹೆಚ್ಚಿನ ನಿಗಾ ವಹಿಸಿ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು.

ಪ್ರತಿ ಜಿಲ್ಲೆಗೊಬ್ಬರು ಮುಖ್ಯ ಎಂಜಿನಿಯರ್‌ಗಳನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ, ನಿತ್ಯ ನಿರಂತರ 5 ಗಂಟೆ ಎದ್ಯುತ್ ಪೂರೈಕೆ ಯಾವುದೇ ಅಡಚಣೆ ಇಲ್ಲದೆ ಆಗುತ್ತಿರುವ ಬಗ್ಗೆ ಖಾತರಿಪಡಿಸಬೇಕು. ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳ ಪಾಲನೆ ಆಗುತ್ತಿರುವುದನ್ನು ಖಾತರಿಪಡಿಸಿ ವರದಿ ನೀಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

*ಎಸ್ಕಾಂಗಳಿಗೆ ಸಿಎಂ ನೀಡಿದ ಸೂಚನೆಗಳು:-

• ಬರಗಾಲದ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ, ಅದನ್ನು ನಿಭಾಯಿಸಿ

• ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನಿತ್ಯ 5 ಗಂಟೆ ತಡೆರಹಿತ ವಿದ್ಯುತ್ ಪೂರೈಸಿ

• ಪ್ರತಿ ಜಿಲ್ಲೆಗೆ ಒಬ್ಬ ಮುಖ್ಯ ಎಂಜಿನಿಯ‌ ನೋಡಲ್‌ ಅಧಿಕಾರಿಯಾಗಿ ನೇಮಿಸಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಈ ಆದೇಶ ಪಾಲಿಸಿ

ಬೇರೆ ರಾಜ್ಯಗಳಿಗೆ ವಿದ್ಯುತ್ ಮಾರಾಟ ನಿಲ್ಲಿಸುವ ನಿರ್ಧಾರ ಕಟ್ಟುನಿಟ್ಟಾಗಿ ಪಾಲಿಸಿ

ವಿದ್ಯುತ್ ಅಭಾವ ಪರಿಹಾರಕ್ಕೆ ಏನು ಮಾಡಬೇಕು ಎಂಬ ಬಗ್ಗೆ ಯೋಜನೆ ರೂಪಿಸಿ,ಆಪತ್ಕಾಲಕ್ಕೆ ಬೇರೆ ಪ್ಲಾನ್ ಇಟ್ಟುಕೊಳ್ಳಿ

ಈಗಲೂ ಶೇ.13ರಷ್ಟು ವಿದ್ಯುತ್ ಸೋರಿಕೆಗೆ ಕಾರಣವೇನು? ಕೂಡಲೇ ಪತ್ತೆಹಚ್ಚಿ

ವಿತರಣೆ ವೇಳೆ ವಿದ್ಯುತ್‌ ಸೋರಿಕೆ ತಡೆಯಲು ವಿಕ್ಷಣ ದಳಕ್ಕೆ ಚುರುಕು ಮುಟ್ಟಿಸಿ ಎಂದ ಸಿಎಂ ಖಡಕ್ ವಾರ್ನಿಂಗ್..

ವಿದ್ಯುತ್ ಪೂರೈಕೆಗೆ ಕಡಿವಾಣ..!

ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡಲು ನಿರ್ಬಂಧ ವಿಧಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದರಲ್ಲಿ ಯಾವುದೇ ಲೋಪ ಆಗಬಾರದು. ರಾಜ್ಯದಲ್ಲಿ ಕಳೆದ ವರ್ಷ ಈ ವೇಳೆಗೆ ಕೇವಲ 9,000 ಮೆ.ವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಅದು ಈಗ 15-16 ಸಾವಿರ ಮೆ.ವ್ಯಾಟ್‌ಗೆ ಏರಿಕೆಯಾಗಿದೆ.

ವಿಶೇಷವೆಂದರೆ, ಕಳೆದ ನಾಲೈದು ವರ್ಷಗಳಿಂದ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆ ಪ್ರಮಾಣ ಮಾತ್ರ ಹೆಚ್ಚಾಗಿಲ್ಲ. ಕಲ್ಲಿದ್ದಲು ವ್ಯತ್ಯಯ, ಜಲ ವಿದ್ಯುತ್ ಉತ್ಪಾದನೆಗೆ ನೀರಿನ ಕೊರತೆ ಮತ್ತಿತರ ಕಾರಣಗಳಿಂದ ವಿದ್ಯುತ್ ಅಭಾವ ಸೃಷ್ಟಿಯಾಗಿದೆ. ಇದನ್ನು ಹೇಗೆ ಬಗೆಹರಿಸಬೇಕು ಎಂಬುದರ ಬಗ್ಗೆ ತ್ವರಿತಗತಿ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದ್ದಾರೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/K9mNNO3T6FzKJGch4oqd2m

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. 5 ಗಂಟೆ ವಿದ್ಯುತ್ ಪೂರೈಕೆ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *