New Rules for Buying and Selling Property

ನಮಸ್ಕಾರ ಸ್ನೇಹಿತರೇ, ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡಲು ಹೊರಟಿದೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆಯ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು ಆಸ್ತಿ ತೆರಿಗೆ ಹೆಚ್ಚಳದ ನಂತರ ಆಸ್ತಿ ಖರೀದಿದಾರರು ಮತ್ತು ಮಾರಾಟಗಾರರು ಅಸಮಾಧಾನಗೊಂಡಿದ್ದಾರೆ.

ಹೌದು, ರಾಜ್ಯದಲ್ಲಿ ಆಸ್ತಿ ಖರೀದಿ ಮತ್ತು ಮಾರಾಟದ ಬೆಲೆಗಳು ಸರಾಸರಿ 30% ರಷ್ಟು ಹೆಚ್ಚಾಗಿದೆ. ಹೊಸ ದರ ಪರಿಷ್ಕೃತ ಮಾರ್ಗಸೂಚಿಗಳು ಅಕ್ಟೋಬರ್ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದಲ್ಲಿನ ಭೂಮಿ, ಕಟ್ಟಡ, ಭೂಮಿ ಮತ್ತು ಇತರ ಸ್ಥಿರ ಆಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಕ್ಟೋಬರ್ 1 ಮತ್ತು 2 ರಂದು ರಜೆ ಇದ್ದ ಕಾರಣ ಅಕ್ಟೋಬರ್ ನಿಂದಲೇ ರಾಜ್ಯದಲ್ಲಿ ಹೊಸ ದರದ ಆಸ್ತಿ ನೋಂದಣಿ ತೆರಿಗೆ ಜಾರಿಯಾಗಲಿದೆ.

ಕೊರೊನಾ ಸೇರಿದಂತೆ ಹಲವು ಕಾರಣಗಳಿಂದ ಕಳೆದ ಐದು ವರ್ಷಗಳಿಂದ ಆಸ್ತಿ ದರ ಪರಿಷ್ಕರಣೆ ನಡೆದಿರಲಿಲ್ಲ. ಇದೀಗ 5 ವರ್ಷಗಳ ನಂತರ ಬೆಲೆ ಪರಿಷ್ಕರಣೆ ಆದೇಶ ಹೊರಡಿಸಲಾಗಿದೆ. ಹೊಸ ಆದೇಶದ ಪ್ರಕಾರ ಮಾರುಕಟ್ಟೆ ಬೆಲೆಗಿಂತ 500 ರಿಂದ 2000 ಪಟ್ಟು ಹೆಚ್ಚಳ ಮಾಡಲಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭೂಮಿಗೆ ಮಾರ್ಗಸೂಚಿ ಬೆಲೆ 5 ರಿಂದ 10 ಲಕ್ಷ ರೂ.

ಸ್ಥಿರ ಮಾರುಕಟ್ಟೆ ದರವು ರೂ.10 ಕೋಟಿಗಿಂತ ಹೆಚ್ಚಿರುವ ಪ್ರದೇಶಗಳಲ್ಲಿ, ಮಾರ್ಗಸೂಚಿ ದರವು 1% ಆಗಿದೆ. 50ರಷ್ಟು ಹೆಚ್ಚಳವಾಗಿದೆ. ಹಿಂದಿನ 2018 ರಲ್ಲಿ ಮಾರ್ಗಸೂಚಿ ದರವನ್ನು ಪರಿಷ್ಕರಿಸಲಾಯಿತು ಮತ್ತು ಕಳೆದ ನಾಲ್ಕೂವರೆ ವರ್ಷಗಳಿಂದ ಯಾವುದೇ ಪರಿಷ್ಕರಣೆ ಇರಲಿಲ್ಲ. ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೋಲಾರ ಸೇರಿದಂತೆ ಬೆಂಗಳೂರು ಸಮೀಪದ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಮೋದಿತ ನಿವೇಶನಗಳ ಮಾರ್ಗಸೂಚಿ ದರದಲ್ಲೂ ಏರಿಕೆಯಾಗಿದೆ. ಕೃಷಿ ಮತ್ತು ಕೃಷಿಯೇತರ ಜಮೀನುಗಳ ಮಾರ್ಗಸೂಚಿ ದರಗಳಲ್ಲಿ ಭಾರಿ ಬದಲಾವಣೆಯಾಗಿದೆ. ಈ ದರ ಬದಲಾವಣೆ ಮಧ್ಯಮ ವರ್ಗದ ಆಸ್ತಿ ಖರೀದಿದಾರರಿಗೆ ಆಘಾತ ತಂದಿದೆ. ಮಾರುಕಟ್ಟೆ ದರ ಮತ್ತು ಮಾರ್ಗಸೂಚಿ ದರ ಒಂದೇ ಆಗಿರುವ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ.10ರಷ್ಟು ಮಾತ್ರ ಹೆಚ್ಚಿಸಲಾಗಿದೆ.

ಮಾರ್ಗಸೂಚಿ ದರಕ್ಕಿಂತ ಮಾರುಕಟ್ಟೆ ದರ 200 ಪಟ್ಟು ಹೆಚ್ಚಿರುವ ಪ್ರದೇಶಗಳಲ್ಲಿ ಪರಿಷ್ಕೃತ ದರವನ್ನು ಶೇ.20ರಿಂದ ಶೇ.25ರಷ್ಟು ಹೆಚ್ಚಿಸಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಾರ್ಗಸೂಚಿ ದರಕ್ಕಿಂತ 500ರಿಂದ 2000 ಪಟ್ಟು ಮಾರುಕಟ್ಟೆ ದರ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಕೃಷ್ಣ ಭೈರೇಗೌಡ, ಬೆಲೆ ಪರಿಷ್ಕರಣೆ ಆಗುವ ಸುಳಿವು ನೀಡಿದ್ದರು.

ಈ ಮಾರ್ಗಸೂಚಿ ದರ ಪರಿಷ್ಕರಣೆಯಿಂದ ಕಂದಾಯ ಇಲಾಖೆಗೆ ಭಾರಿ ಪ್ರಮಾಣದ ಆದಾಯ ಸಂಗ್ರಹವಾಗುವ ವಿಶ್ವಾಸವಿದೆ. ಈ ಬಾರಿಯ ಬಜೆಟ್‌ನಲ್ಲೂ 2023-24ನೇ ಸಾಲಿನಲ್ಲಿ 25 ಸಾವಿರ ಕೋಟಿ ತೆರಿಗೆ ಸಂಗ್ರಹಿಸುವ ಗುರಿಯನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹೊಂದಿದೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಆಸ್ತಿ ಮಾರಾಟ ಹಾಗೂ ಖರೀದಿ:-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಆಸ್ತಿ ಮಾರಾಟ ಹಾಗೂ ಖರೀದಿ ಮಾಡುವವರಿಗೆ ಹೊಸ ರೂಲ್ಸ್ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

ತಪ್ಪದೆ ಓದಿರಿ :-

➡️ಹಿಂಗಾರು ಬೆಳೆ ವಿಮೆ 2023 ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕು? ಅರ್ಜಿ ಎಲ್ಲಿ ಸಲ್ಲಿಸಬೇಕು https://krushivahini.com/2023/10/18/rabi-crop-insurance-2023/

➡️ ಈ ಜಿಲ್ಲೆಯ ರೈತರಿಗೆ ಸದ್ಯದಲ್ಲಿ ಬೆಳೆ ಹಾನಿ ಪರಿಹಾರ ಹಣ ಜಮಯಾಗಲಿದೆ?? ನಿಮ್ಮ ತಾಲೂಕಿಗೆ ಎಷ್ಟು ಪರಿಹಾರ ಬರುತ್ತದೆ ಇಲ್ಲಿ ನೋಡಿ https://krushivahini.com/2023/10/15/6-4-crore-crop-loss-compensation/

➡️ ಪಿಎಂ ಕಿಸಾನ್ ಯೋಜನೆಯ ಹಣ ಹೆಚ್ಚಳ ನಿಮಗೆ ಎಷ್ಟು ಹಣ ಬರಲಿದೆ ಇಲ್ಲಿ ನೋಡಿ
https://krushivahini.com/2023/10/14/pm-kisan-yojana-money-increased/

➡️ ಕೊನೆಯ ಹಂತದ ಬರಗಾಲ ಪಟ್ಟಿ ಬಿಡುಗಡೆ ಬರಗಾಲ ಪೀಡಿತ ತಾಲೂಕುಗಳಿಗೆ ಎಷ್ಟು ಪರಿಹಾರ ಸಿಗುತ್ತದೆ ಇಲ್ಲಿ ನೋಡಿ
https://krushivahini.com/2023/10/16/drought-declared-talukugalu/

Leave a Reply

Your email address will not be published. Required fields are marked *