Rain update Karnataka :-

ಬೆಂಗಳೂರು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಾತ್ರ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಯೆಲ್ಲೋ ಅಲರ್ಟ್:-

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ 24 ಘಂಟೆಗಳು ರಾಜ್ಯದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಿಡಿಲು ಬೀಳುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

ಕಳೆದ 24 ಗಂಟೆಗಳಲ್ಲಿ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 3 ಸೆಂಮೀ ಮಳೆಯಾಗಿದೆ.

Weather update:-ಬೆಂಗಳೂರು ನಗರ ಸೇರಿದಂತೆ ಈ ಕೆಳಗಿನ ಜಿಲ್ಲೆಗಳಿಗೆ ಭಾರೀ ಮಳೆ: ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ ಗರಿಷ್ಠ ಉಷ್ಣಾಂಶ ದಾಖಲೆ

ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 34.9 ಡಿ.ಸೆ ಚಿಕ್ಕನಹಳ್ಳಿಯಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 19.0 ಡಿ.ಸೆ. ವಿಜಯಪುರ ನಲ್ಲಿ ದಾಖಲಾಗಿದೆ.

ಉಷ್ಣಾಂಶಗಳ ಎಚ್ಚರಿಕೆ:-

ಗರಿಷ್ಠ ಉಷ್ಣಾಂಶಗಳು : ಬಾಗಲಕೋಟೆ, ಗದಗ, ಕೊಪ್ಪಳ, ಕಲಬುರ್ಗಿ ರಾಯಚೂರು ಯಲ್ಲಿ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ತುಮಕೂರು ಜಿಲ್ಲೆಯಲ್ಲಿ ಒಂದೆರಡು ಕಡೆಗಳಲ್ಲಿ 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಮಳೆ ಮುನ್ಸೂಚನೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಮಳೆ ಮುನ್ಸೂಚನೆ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️💸 ಸದ್ಯದಲ್ಲೇ 27 ಲಕ್ಷ ರೈತರಿಗೆ ಬರ ಪರಿಹಾರ ಹಣ ಕೊಡುವುದಾಗಿ ಹೇಳಿದ ಸರ್ಕಾರ!
* ಎಕರೆಗೆ 9,423 ರೂ ಬರ ಪರಿಹಾರ
* ಬೆಳೆ ಪರಿಹಾರ ಹಣವನ್ನು ರೈತರು ಪಡೆಯುವುದು ಹೇಗೆ??https://krushivahini.com/2023/10/19/drought-relief/

Leave a Reply

Your email address will not be published. Required fields are marked *