Drought relief protest :- ಬರ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಕಲಬುರಗಿಯಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು..

ಕಲಬುರಗಿ: ಬರದಿಂದ ಬೆಳೆ ಕಳೆದುಕೊಂಡ ಪ್ರತಿ ಎಕರೆಗೆ 25 ಸಾವಿರ ಪರಿಹಾರ, ವಿದ್ಯುತ್‌ ಲೋಡ್‌ಶೆಡ್ಡಿಂಗ್‌ ಸಮಸ್ಯೆ ಇತ್ಯರ್ಥ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ನಗರದ ಗಂಜ್‌ನ ಹನುಮಾನ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆಯನ್ನು ಶನಿವಾರ ನಡೆಸಿದರು.

ರಾಜ್ಯ ಸರ್ಕಾರ ಈಗಾಗಲೇ 161 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದೆ. ಇದಕ್ಕೆ ಪರಿಹಾರವಾಗಿ ಕೂಡಲೇ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಸಕಾಲಿಕ ಮಳೆಯಾಗದಿದ್ದುದರಿಂದ ತೇವಾಂಶ ಕೊರೆತೆಯಿಂದ ಬೆಳೆಗಳು ಒಣಗಿ ನಿಂತಿವೆ. ರೈತರು ನೀರುಣಿಸಿ ಬೆಳೆ ಉಳಿಸಿಕೊಳ್ಳುವ ಧಾವಂತದಲ್ಲಿದ್ದಾರೆ. ಆದರೆ, ಜೆಸ್ಕಾಂ ಅಧಿಕಾರಿಗಳು ನಿತ್ಯ ರಾತ್ರಿ 12ರಿಂದ 3 ಗಂಟೆಯವರೆಗೆ ವಿದ್ಯುತ್‌ ನೀಡುತ್ತಿದ್ದಾರೆ. ಹೀಗೆ, ವಿದ್ಯುತ್‌ ನೀಡಿದರೆ ಈ ವೇಳೆ ರೈತರು ಬೆಳೆಗಳಿಗೆ ನೀರುಣಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ 239 ತಾಲ್ಲೂಕುಗಳಲ್ಲಿ 161 ತಾಲ್ಲೂಕು ಮಾತ್ರ ಬರಪೀಡಿತ ಎಂದು ಘೋಷಣೆ ಮಾಡಿದೆ. ಇನ್ನುಳಿದ ತಾಲ್ಲೂಕುಗಳನ್ನು ಬರ ಎಂದು ಘೋಷಣೆ ಮಾಡಬೇಕು. ಶೀಘ್ರ ರೈತರಿಗೆ ಪರಿಹಾರ ನೀಡಬೇಕು. ವಿದ್ಯುತ್ ಸಮಸ್ಯೆ ಬಗೆಹರಿಸಿ ರೈತರಿಗೆ ಸರಿಯಾಗಿ ವಿದ್ಯುತ್‌ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ನವ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ದಯಾನಂದ ಪಾಟೀಲ, ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್‌ ಭಂಡಾರಿ, ಮಂಜುನಾಥ್ ನಾಲವಾರಕ‌, ಚಂದ್ರಕಾಂತ ನಾಟೀಕಾರ, ಶಶಿಕಾಂತ ದೀಕ್ಷಿತ, ಮಲ್ಲಿಕಾರ್ಜುನ ಸಾರವಾಡ, ಸಚಿನ ಫರ್ಹತಾಬಾದ್ ಇದ್ದರು.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಬರ ಪರಿಹಾರ ಪ್ರತಿಭಟನೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ ಪ್ರತಿಭಟನೆ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ಬರಪೀಡಿತ ತಾಲೂಕುಗಳಿಗೆ ಸಾಲ ಮನ್ನಾ ಮರುಪಾವತಿ ಮಾಡುವಂತೆ ನೋಟೀಸ್ ಜಾರಿ?? ಇಲ್ಲಿದೆ ಮಹತ್ವದ ಮಾಹಿತಿ🙏🏻🙏🏻 https://krushivahini.com/2023/10/24/crop-loan-notice/

➡️ ಮಳೆ ಮುನ್ಸೂಚನೆ :- ಮುಂದಿನ ದಿನಗಳಲ್ಲಿ ಈ ಜಿಲ್ಲೆಗಳಿಗೆ ಹೆಚ್ಚಿನ ಮಳೆಯ ಸಾಧ್ಯತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ https://krushivahini.com/2023/10/24/karnataka-rain/

➡️ ಸರಿಯಾಗಿ ವಿದ್ಯುತ್ ಕೊಡುತ್ತಿಲ್ಲ?? ಮಧ್ಯಂತರ ಬೆಳೆ ವಿಮೆ ಬಿಡುಗಡೆ ಇಲ್ಲ??? ಬರ ಪರಿಹಾರ ಯಾವಾಗ ಬರುತ್ತದೆ https://krushivahini.com/2023/10/23/karnataka-drought-news/

➡️ ಎನ್ ಡಿ ಆರ್ ಎಫ್ ನಿಂದ ಕೂಡಲೇ ರೈತರಿಗೆ ಬರ ಪರಿಹಾರ ಕೊಡಬೇಕು ಸಚಿವ ಕೃಷ್ಣ ಬೈರೇಗೌಡ https://krushivahini.com/2023/10/22/bara-parihara-news/

➡️ ಮಳೆ ಮುನ್ಸೂಚನೆ:- ಈ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ https://krushivahini.com/2023/10/22/weather-report/

One thought on “Drought relief protest- ಬರ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.”

Leave a Reply

Your email address will not be published. Required fields are marked *