Bara parihara news :-
ಚಾಮರಾಜನಗರ: ‘ಬರ ಪರಿಹಾರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರದ ಕೆಲಸ. ಕೇಳುವುದು ನಮ್ಮ ಹಕ್ಕು, ಬರ ಪರಿಹಾರ ಕೇಳಲು ಕೇಂದ್ರ ಗೃಹ ಹಾಗೂ ಕೃಷಿ ಸಚಿವರನ್ನು ಸೆ.23 ರಿಂದ ಭೇಟಿಗೆ ಅವಕಾಶ ಕೇಳುತ್ತಿದ್ದೇವೆ. ಆದರೆ, ಇಲ್ಲಿಯವರೆಗೂ ಭೇಟಿಗೆ ಅವಕಾಶವನ್ನೇ ನೀಡಿಲ್ಲ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಶನಿವಾರ ದೂರಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಮ್ಮ ಅಧಿಕಾರಿಗಳು ನಿತ್ಯ ಕೇಂದ್ರ ಸಚಿವರ ಕಚೇರಿಗೆ ಕರೆ ಮಾಡುತ್ತಿದ್ದಾರೆ. ನಾನೂ ಪತ್ರ ಬರೆದು ಕಾಲಾವಕಾಶ ಕೇಳಿದ್ದೇನೆ. ಆದರೂ ಅವಕಾಶ ಸಿಕ್ಕಿಲ್ಲ. ಮುಂದಿನ ವಾರ ದೆಹಲಿಗೆ ಹೋಗಿ ಅಲ್ಲೇ ಕುಳಿತು ಭೇಟಿ ಮಾಡುವ ಪ್ರಯತ್ನ ಮಾಡುತ್ತೇನೆ’ ಎಂದರು.
‘ರಾಜ್ಯದ 216 ತಾಲ್ಲೂಕುಗಳು ಬರಪೀಡಿತ ಘೋಷಣೆ ಎಂದು ಆಗಿದೆ. ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ. ವರದಿ ಬಗ್ಗೆ ಶೀಘ್ರ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ಬರ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯವೂ ಹೌದು. ನಮ್ಮ ಹಕ್ಕಿನ ಪ್ರಕಾರ, ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ಕೊಡಲೇಬೇಕು’ ಎಂದರು.
‘ಬೇರೆ ರಾಜ್ಯಗಳಿಗೆ ಕೊಟ್ಟಂತೆ ನಮ್ಮ ರಾಜ್ಯಕ್ಕೂ ಕೊಡಬೇಕಾಗಿದ್ದು ಕೇಂದ್ರದ ಕರ್ತವ್ಯ. ನಮಗೆ ಬರಬೇಕಾದ ಅನುದಾನ ಬಿಟ್ಟು ಹೆಚ್ಚುವರಿ ನಿರೀಕ್ಷೆ ಮಾಡುತ್ತಿಲ್ಲ. ನೀತಿ ನಿಯಮಗಳ ಪ್ರಕಾರ ಅನುದಾನ ಕೊಡಲೇಬೇಕು’ ಎಂದು ಸಚಿವರು ಹೇಳಿದರು.
‘ಇ-ಆಫೀಸ್ ಯೋಜನೆಯನ್ನು ತಾಲ್ಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು. ಇದರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಬೇಗ ವಿಲೇವಾರಿಯಾಗುತ್ತವೆ’ ಎಂದರು.
ಕಲಬುರಗಿ: ಬರದಿಂದ ಬೆಳೆ ಕಳೆದುಕೊಂಡ ಪ್ರತಿ ಎಕರೆಗೆ 25 ಸಾವಿರ ಪರಿಹಾರ, ವಿದ್ಯುತ್ ಲೋಡ್‌ಶೆಡ್ಡಿಂಗ್ ಸಮಸ್ಯೆ ಇತ್ಯರ್ಥ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ನಗರದ ಗಂಜ್‌ನ ಹನುಮಾನ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆಯನ್ನು ಶನಿವಾರ ನಡೆಸಿದರು.
ರಾಜ್ಯ ಸರ್ಕಾರ ಈಗಾಗಲೇ 161 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದೆ. ಇದಕ್ಕೆ ಪರಿಹಾರವಾಗಿ ಕೂಡಲೇ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಬರ ಪೀಡಿತ ತಾಲೂಕುಗಳ ಪಟ್ಟಿ :-
ಸಕಾಲಿಕ ಮಳೆಯಾಗದಿದ್ದುದರಿಂದ ತೇವಾಂಶ ಕೊರೆತೆಯಿಂದ ಬೆಳೆಗಳು ಒಣಗಿ ನಿಂತಿವೆ. ರೈತರು ನೀರುಣಿಸಿ ಬೆಳೆ ಉಳಿಸಿಕೊಳ್ಳುವ ಧಾವಂತದಲ್ಲಿದ್ದಾರೆ. ಆದರೆ, ಜೆಸ್ಕಾಂ ಅಧಿಕಾರಿಗಳು ನಿತ್ಯ ರಾತ್ರಿ 12ರಿಂದ 3 ಗಂಟೆಯವರೆಗೆ ವಿದ್ಯುತ್ ನೀಡುತ್ತಿದ್ದಾರೆ. ಹೀಗೆ, ವಿದ್ಯುತ್ ನೀಡಿದರೆ ಈ ವೇಳೆ ರೈತರು ಬೆಳೆಗಳಿಗೆ ನೀರುಣಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ 239 ತಾಲ್ಲೂಕುಗಳಲ್ಲಿ 161 ತಾಲ್ಲೂಕು ಮಾತ್ರ ಬರಪೀಡಿತ ಎಂದು ಘೋಷಣೆ ಮಾಡಿದೆ. ಇನ್ನುಳಿದ ತಾಲ್ಲೂಕುಗಳನ್ನು ಬರ ಎಂದು ಘೋಷಣೆ ಮಾಡಬೇಕು. ಶೀಘ್ರ ರೈತರಿಗೆ ಪರಿಹಾರ ನೀಡಬೇಕು. ವಿದ್ಯುತ್ ಸಮಸ್ಯೆ ಬಗೆಹರಿಸಿ ರೈತರಿಗೆ ಸರಿಯಾಗಿ ವಿದ್ಯುತ್ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.
ನವ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ದಯಾನಂದ ಪಾಟೀಲ, ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಭಂಡಾರಿ, ಮಂಜುನಾಥ್ ನಾಲವಾರಕ, ಚಂದ್ರಕಾಂತ ನಾಟೀಕಾರ, ಶಶಿಕಾಂತ ದೀಕ್ಷಿತ, ಮಲ್ಲಿಕಾರ್ಜುನ ಸಾರವಾಡ, ಸಚಿನ ಫರ್ಹತಾಬಾದ್ ಇದ್ದರು.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/IdgrNNJ7davJ82ndmV12M1
ಬರ ಪರಿಹಾರ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
➡️ ಬರಪೀಡಿತ ತಾಲೂಕುಗಳಿಗೆ ಸಾಲ ಮನ್ನಾ ಮರುಪಾವತಿ ಮಾಡುವಂತೆ ನೋಟೀಸ್ ಜಾರಿ?? ಇಲ್ಲಿದೆ ಮಹತ್ವದ ಮಾಹಿತಿ🙏🏻🙏🏻 https://krushivahini.com/2023/10/24/crop-loan-notice/
➡️ ಮಳೆ ಮುನ್ಸೂಚನೆ :- ಮುಂದಿನ ದಿನಗಳಲ್ಲಿ ಈ ಜಿಲ್ಲೆಗಳಿಗೆ ಹೆಚ್ಚಿನ ಮಳೆಯ ಸಾಧ್ಯತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ https://krushivahini.com/2023/10/24/karnataka-rain/
➡️ ಈ ಜಿಲ್ಲೆಗಳಲ್ಲಿ ಹೂ ಹಣ್ಣುಗಳು ಬೆಲೆ ಗಗನಕ್ಕೆ ದಸರಾ ಹಬ್ಬದ ಪ್ರಯುಕ್ತ ಬೆಲೆ ಏರಿಕೆ ಯಾವ ಹೂವು ಮತ್ತು ಹಣ್ಣಿಗೆ ಎಷ್ಟು ಧರ ಇದೆ ಇಲ್ಲಿ ನೋಡಿ https://krushivahini.com/2023/10/23/drought-all-market-price-increased/
➡️ ಸರಿಯಾಗಿ ವಿದ್ಯುತ್ ಕೊಡುತ್ತಿಲ್ಲ?? ಮಧ್ಯಂತರ ಬೆಳೆ ವಿಮೆ ಬಿಡುಗಡೆ ಇಲ್ಲ??? ಬರ ಪರಿಹಾರ ಯಾವಾಗ ಬರುತ್ತದೆ https://krushivahini.com/2023/10/23/karnataka-drought-news/
➡️ ತೇಜ್ ಚಂಡಮಾರುತ :- ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮಹತ್ವದ ಮಾಹಿತಿ https://krushivahini.com/2023/10/23/tej-cyclone/
➡️ ರೈತರ ಹೊಲದ ಕಾಲುದಾರಿ ಬಂಡಿದಾರಿ ಬಗ್ಗೆ ಸರ್ಕಾರದಿಂದ ಸಿಹಿಸುದ್ದಿ ನಿಮ್ಮ ಹೊಲದ ನಕ್ಷೆ ಇಲ್ಲಿ ಪಡೆಯಿರಿ👇🏻 https://krushivahini.com/2023/10/22/village-map/