Narega amount increased :- ನರೇಗಾ ಮೊತ್ತವನ್ನು ಎಷ್ಟು ಏರಿಕೆ ಮಾಡಿದೆ?

ಪ್ರೀಯ ರೈತರೇ ಸರ್ಕಾರವು ಸಹ ರೈತರ ನೆರವಿಗೆ ನಿಂತು ಕೆಲಸ ಮಾಡುತ್ತಿದೆ ಹಾಗೂ ರೈತರು ಸಹ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಅದೇ ರೀತಿ ಈಗ ನರೇಗಾ ಯೋಜನೆಯಡಿ ಕೂಲಿಕಾರರಿಗೆ ಅಕುಶಲ ಕೆಲಸ ಒದಗಿಸುವುದರ ಜತೆಗೆ ಫಲಾನುಭವಿಗಳ ಜೀವನಾಧಾರಕ್ಕೆ ನೆರವಾಗುವ ವೈಯಕ್ತಿಕ ಕಾಮಗಾರಿಗಳಿಗೆ ನೀಡುತ್ತಿದ್ದ 2.50 ಲಕ್ಷ ರೂ. ಮೊತ್ತವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಮೊದಲು 2.50 ಲಕ್ಷ ಲಕ್ಷ ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ.2.50 ಲಕ್ಷ ರೂ.ದಿಂದ ನರೇಗಾದಡಿ ವೈಯಕ್ತಿಕ ಕಾಮಗಾರಿ ಮೊತ್ತ 5 ಲಕ್ಷಕ್ಕೆ ಹೆಚ್ಚಿಸಿದ ಸರ್ಕಾರ

ಹೆಚ್ಚಿಸುವ ಮೂಲಕ ಫಲಾನುಭವಿಗಳ ಆರ್ಥಿಕ ಪರಿಸ್ಥಿತಿ ಉತ್ತಮಪಡಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಅಲೆಮಾರಿ ಬುಡಕಟ್ಟುಗಳು, ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು, ಬಡತನರೇಖೆಗಿಂತ ಕೆಳಗಿರುವ ಕುಟುಂಬಗಳು, ಮಹಿಳಾ ಪ್ರಧಾನ ಕುಟುಂಬಗಳು, ವಿಕಲಚೇತನ ಕುಟುಂಬಗಳು, ಭೂ ಸುಧಾರಣಾ ಫಲಾನುಭವಿಗಳು, ವಸತಿ ಯೋಜನೆಯ ಫಲಾನುಭವಿಗಳು, ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಅಧಿಕೃತ ಜ್ಞಾಪನಾ ಪತ್ರದಲ್ಲಿ ತಿಳಿಸಲಾಗಿದೆ. ಈ ಯೋಜನೆಯಡಿ ನೋಂದಾಯಿತ ಒಂದು ಅರ್ಹ ಕುಟುಂಬ ತನ್ನ ಜೀವಿತಾವಧಿಯಲ್ಲಿ ಗರಿಷ್ಠ 5 ಲಕ್ಷ ರೂ. ವರೆಗೆ ನೀಡಲಾಗುವ ವೈಯಕ್ತಿಕ ಕಾಮಗಾರಿ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

ದನಗಳ ಶೆಡ್ ನಿರ್ಮಾಣ, ಕುರಿ, ಕೋಳಿ ಸಾಕಾಣಿಕೆ, ಹಾಗೂ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿ ಅಡಿಯಲ್ಲಿ ಸಹಾಯಧನ ಇದೆಯೇ?

ಹೌದು ದನಗಳ ಶೆಡ್ ನಿರ್ಮಾಣ, ಕುರಿ ಕೋಳಿ ಘಟಕ, ಎರೆಹುಳು ಗೊಬ್ಬರ ತಯಾರಿಕೆ, ಹಾಗೂ ಕೃಷಿ ಹೊಂಡ ನಿರ್ಮಾಣ ಮಾಡಲು ಸರ್ಕಾರದ ಕಡೆಯಿಂದ ಸಹಾಯಧನ ನೀಡಲು ಮುಂದಾಗಿದೆ. ಬನ್ನಿ ಅದರ ಸಂಪೂರ್ಣ ಮಾಹಿತಿ ತಿಳಿಯೋಣ.

ಪ್ರೀಯ ರೈತರೇ ಸರ್ಕಾರದ ಕಡೆಯಿಂದ ಕೃಷಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ದೊರೆಯುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಅಡಿಯಲ್ಲಿ ನರೇಗಾ ಯೋಜನೆ ಪ್ರಾರಂಭಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ಪಶು ಸಂಗೋಪನೆ, ಜಾನುವಾರುಗಳು, ಹಾಗೂ ಇನ್ನಿತರ ಕೃಷಿ ಚಟುವಟಿಕೆಗಳಿಗೆ ಜೀವಾಳವಾಗಿರುವ ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ, ಕುರಿ ಕೋಳಿ ಘಟಕ, ಎರೆಹುಳು ಗೊಬ್ಬರ ಘಟಕ, ಕೃಷಿ ಹೊಂಡ ಹೀಗೆ ಹಲವಾರು ಚಟುವಟಿಕೆಗಳಿಗೆ ಸರ್ಕಾರವು ನರೇಗಾ ಯೋಜನೆ ಅಡಿಯಲ್ಲಿ ರೈತರಿಗೆ ಸಹಾಯಧನ ನೀಡಲು ಮುಂದಾಗಿದೆ.

ಈಗಾಗಲೇ ಈ ಯೋಜನೆ ಅಡಿಯಲ್ಲಿ 547 ಕೆರೆಗಳ ಒಟ್ಟು ವಿಸ್ತೀರ್ಣ 1568.29 ಹೆಕ್ಟೇರ್ ಹೊಂದಿದ್ದು, 189 ಹೆಕ್ಟೇರ್‌ ಅಕ್ರಮ ಕೆರೆ ಒತ್ತುವರಿಯನ್ನು ಕೂಡ ತೆರವುಗೊಳಿಸಲಾಗಿದೆ. 2021-22ನೇ ಸಾಲಿನಲ್ಲಿ ಕೆರೆಗಳ ಅಭಿವೃದ್ಧಿಗಾಗಿ 33.72 ಕೋಟಿ ರೂ. ಹಣ ವಿನಿಯೋಗದ ಗುರಿ ಹೊಂದಲಾಗಿದ್ದು, ಅದರಲ್ಲಿ ಈಗಾಗಲೇ ಡಿಸೆಂಬರ್ -2021 ರ ಅಂತ್ಯಕ್ಕೆ 16.21 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಕಾಮಗಾರಿಗಳಿಂದ 5.60 ಲಕ್ಷ ಮಾನವ ದಿನಗಳು ಸೃಜನೆಯಾಗಿರುತ್ತದೆ…..

ಕೂಲಿ ಹಾಗೂ ಕಾಮಗಾರಿ ಬೇಡಿಕೆಗೆ ಅರ್ಜಿ ಸಲ್ಲಿಸಲು ನಿಮ್ಮ ಗ್ರಾಮ ಪಂಚಾಯತ್‌ನ್ನು ಸಂಪರ್ಕಿಸಿ. ಉಚಿತ ಸಹಾಯವಾಣಿ ಸಂಖ್ಯೆ: 1800-425-8666

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ತಪ್ಪದೆ ಶೇರ್ ಮಾಡಿ 🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ನರೇಗಾ ಯೋಜನೆ ಮಾಹಿತಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ನರೇಗಾ ಯೋಜನೆ ಮಾಹಿತಿ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *