Weather report :-
ಕರ್ನಾಟಕ, ಅಕ್ಟೋಬರ್, 22: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಸಿದೆ. ಇದರಿಂದ ರೈತರು ಬೆಳೆದ ಬೆಳೆಗಳೆಲ್ಲವೂ ನೆಲಕಚ್ಚುತ್ತಲೇ ಇವೆ. ಮತ್ತೊಂದೆಡೆ ಇದೀಗ ಹಿಂಗಾರು ಚುರುಕುಗೊಂಡಿದ್ದು, ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಆಗಾಗ ಮಳೆರಾಯ ಅಬ್ಬರಿಸುತ್ತಿದ್ದಾನೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಈ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಆಗಾಗ ಮಳೆರಾಯ ಅಬ್ಬರಿಸುತ್ತಿದ್ದಾನೆ. ಹಾಗೆಯೇ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.
ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ನಿನ್ನೆ ಪಣಂಬೂರಿನಲ್ಲಿ ಸಾಧಾರಣ ಮಳೆ ಬಿದ್ದಿದೆ. ಶಿರಾಲಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲು ಆಗಿದ್ದು, ವಿಜಯಪುರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮತ್ತೊಂದೆಡೆ ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಬೀಳಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು, ಮತ್ತು ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಳ ಆಗುವ ಸಾಧ್ಯತೆಯಿದೆ.
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬೆಳೆಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮಾಹಿತಿಯನ್ನು ರವಾನಿಸಿದೆ.
ಒಟ್ಟಿನಲ್ಲಿ ರಾಜ್ಯದಲ್ಲಿ ಈಗಾಗಲೇ ಮುಂಗಾರು ಕೈಕೊಟ್ಟಿದ್ದು, ಇದೀಗ ಹಿಂಗಾರು ಚುರುಕು ಪಡೆದಿದೆ. ಕೆಲವೆಡೆ ಮಾತ್ರ ಅಬ್ಬರದ ಮಳೆಯಾಗುತ್ತಿದೆ. ಹಾಗೆಯೇ ಇಂದಿನಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಒಂದು ವೇಳೆ ಹೀಗೆ ಎಲ್ಲಾ ಕಡೆ ಮಳೆಯಾದರೆ ಬಿಸಿಲಿನ ಧಗೆ ಕಡಿಮೆಯಾಗುತ್ತದೆ. ಭೂಮಿಯೂ ತಂಪಾದಂತಾಗುತ್ತದೆ. ಇಲ್ಲದಿದ್ದರೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗುವುದಂತೂ ಗ್ಯಾರಂಟಿ ಎನ್ನುವಂತಾಗಿದೆ.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/IdgrNNJ7davJ82ndmV12M1
ಮಳೆ ಮಾಹಿತಿ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಮಳೆ ಮಾಹಿತಿ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
➡️ ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಯಾವ ಬೆಳೆಗೆ ಎಷ್ಟು ಹೆಚ್ಚಾಗಿದೆ ಇಲ್ಲಿ ನೋಡಿರಿ… https://krushivahini.com/2023/10/25/rabi-2023-minimum-support-price/
➡️ ಮಳೆ ಮುನ್ಸೂಚನೆ :- ಮುಂದಿನ ದಿನಗಳಲ್ಲಿ ಈ ಜಿಲ್ಲೆಗಳಿಗೆ ಹೆಚ್ಚಿನ ಮಳೆಯ ಸಾಧ್ಯತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ https://krushivahini.com/2023/10/24/karnataka-rain/
➡️ ಸರಿಯಾಗಿ ವಿದ್ಯುತ್ ಕೊಡುತ್ತಿಲ್ಲ?? ಮಧ್ಯಂತರ ಬೆಳೆ ವಿಮೆ ಬಿಡುಗಡೆ ಇಲ್ಲ??? ಬರ ಪರಿಹಾರ ಯಾವಾಗ ಬರುತ್ತದೆ https://krushivahini.com/2023/10/23/karnataka-drought-news/
➡️ ಎನ್ ಡಿ ಆರ್ ಎಫ್ ನಿಂದ ಕೂಡಲೇ ರೈತರಿಗೆ ಬರ ಪರಿಹಾರ ಕೊಡಬೇಕು ಸಚಿವ ಕೃಷ್ಣ ಬೈರೇಗೌಡ https://krushivahini.com/2023/10/22/bara-parihara-news/
➡️ ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ ಎಕರೆಗೆ 25,000 ಬೆಳೆ ಪರಿಹಾರ ಕೊಡುವಂತೆ ಪ್ರತಿಭಟನೆ 🙏🏻https://krushivahini.com/2023/10/21/drought-relief-protest/
➡️ ಹಿಂಗಾರು ಬೆಳೆ ವಿಮೆ ನೀವು ಯಾವ ಬೆಳೆಗೆ ಎಷ್ಟು ವಿಮೆ ಪಾವತಿಸಬೇಕು ಹಾಗೂ ಕೊನೆಯ ದಿನಾಂಕವನ್ನು ಇಲ್ಲಿ ನೋಡಿ https://krushivahini.com/2023/10/21/crop-you-can-insure/
Good rain weather information vivek