Crop loan waiver news :-ರೈತರು ಸಾಲ ಮರು ಪಾವತಿ ಮಾಡುವಂತಿಲ್ಲ: ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣವನ್ನು ಕಡಿಮೆ ಮಾಡುವ ಸಲುವಾಗಿ ರಾಜ್ಯ ಸರಕಾರ ಮಹತ್ವದ ಕ್ರಮವನ್ನು ಅನುಸರಿಸಿದೆ. ಈಗಾಗಲೇ ರಾಜ್ಯದ 200 ಕ್ಕೂ ಅಧಿಕ ತಾಲೂಕುಗಳು ಬರಗಾಲದಿಂದ ತತ್ತರಿಸಿ ಹೋಗಿವೆ. ಇದರಿಂದಾಗಿ ಅನ್ನದಾತರು ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ.

ಕೇಂದ್ರ ಸರಕಾರ ಈಗಾಗಲೇ ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸಿ ಬರಪೀಡಿತ ತಾಲೂಕಿಗಳಲ್ಲಿ ಸರ್ವೆ ಕಾರ್ಯವನ್ನು ನಡೆಸಿದೆ. ರಾಜ್ಯ, ಕೇಂದ್ರ ಸರಕಾರಗಳು ಬರ ಪರಿಹಾರ ನೀಡುವ ನಿರೀಕ್ಷೆಯಲ್ಲಿ ಅನ್ನದಾತರು ಕಾಯುತ್ತಿದ್ದಾರೆ. ಬರಗಾಲದಿಂದಾಗಿ ಸಾಲ ಪಾವತಿಸದೇ ಸಂಕಷ್ಟಕ್ಕೆ ರೈತರು ಸಿಲುಕಿದ್ದಾರೆ..

ಬರಗಾಲದಿಂದ ಕಂಗಾಲಾಗಿರುವ ರೈತರ ಸಂಕಷ್ಟಕ್ಕೆ ರಾಜ್ಯ ಸರಕಾರ ಇದೀಗ ಸ್ಪಂದಿಸಿದೆ. ಬರಪೀಡಿತ ಪ್ರದೇಶಗಳಲ್ಲಿ ರೈತರಿಂದ ಸಾಲ ವಸೂಲಿ (Agriculture Loan) ಮಾಡದಂತೆ ರಾಜ್ಯ ಸರಕಾರ ರಾಷ್ಟ್ರೀಕೃತ ಬ್ಯಾಂಕುಗಳಿಗೆ (Nationalised Banks) ಸೂಚನೆಯನ್ನು ನೀಡಿವೆ. ಅಲ್ಲದೇ ರೈತರು ಪಡೆದಿರುವ ಸಾಲವನ್ನು (Agriculture Loan)ಪುನರ್‌ ರಚಿಸುವಂತೆ ಬ್ಯಾಂಕರ್‌ಗಳ ಸಮಿತಿ ಎಲ್ಲಾ ಬ್ಯಾಂಕುಗಳಿಗೆ ಸೂಚಿಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿಯ ನಡುವಲ್ಲೇ ಲೋಡ್‌ ಶೆಡ್ಡಿಂಗ್‌ (load shedding) ಸಮಸ್ಯೆಯನ್ನು ರೈತರು ಎದುರಿಸುತ್ತಿದ್ದಾರೆ.ರಾಜ್ಯದ ಕಾಂಗ್ರೆಸ್‌ ಸರಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ. ಕೃಷಿ ಚಟುವಟಿಕೆಗೆ ವಿದ್ಯುತ್‌ ನೀಡಲು ರಾಜ್ಯ ಸರಕಾರದಿಂದ ಸಾಧ್ಯವಾಗುತ್ತಿಲ್ಲ. ಜೊತೆಗೆ ಬರಗಾಲದಿಂದ ರೈತರು ತತ್ತರಿಸಿದ್ದಾರ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್‌ ವಾಗ್ದಾಳಿ ನಡೆಸಿದ್ದರ*

ಯಾರಿಗೆಲ್ಲಾ ಸಾಲ ಮನ್ನಾ ಆಗಿದೆ ಎಂದು ಚೆಕ್ ಮಾಡಿಕೊಳ್ಳಿರಿ :-

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.. 👇🏻
https://mahitikanaja.karnataka.gov.in/department

ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..

ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ

ನಂತರ ಅಲ್ಲಿ ಕಾಣುವ ವಾಣಿಜ್ಯ ಬ್ಯಾಂಕಿನ ಸಾಲ ಮನ್ನಾ ಚೆಕ್ ಮಾಡಲು ‘loan waiver report for commercial bank’ ಇದರ ಮೇಲೆ ಕ್ಲಿಕ್ ಮಾಡಬೇಕು. ಹಾಗೂ ಸೊಸೈಟಿಯಲ್ಲಿನ ಸಾಲವನ್ನು ಚೆಕ್ ಮಾಡಲು ‘ loan waiver report for primary agricultural cooperative societies” ಮೇಲೆ ಕ್ಲಿಕ್ ಮಾಡಿರಿ.

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆ ಎಷ್ಟು ಸಾಲಮನ್ನಾ ಆಗಿದೆ ಎಂಬುದನ್ನು ಚೆಕ್ ಮಾಡಬಹುದು. Search button ಅಲ್ಲಿ ನಿಮ್ಮ ನಿಮ್ಮ ಹೆಸರನ್ನು ಹಾಕಿದರೆ ಅಲ್ಲಿ ಮಾಹಿತಿಯನ್ನು ತೋರಿಸುತ್ತದೆ.

ಬಹಳಷ್ಟು ರೈತರಿಗೆ ಅವರ ಸಾಲ ಮನ್ನಾ ಆಗಿಲ್ಲ ಎಂದು ಹೇಳುತ್ತಾರೆ ಆದರೆ ಸಾಲ ಮನ್ನಾ ಮಾಡಲು ಕೆಲವು ದಾಖಲೆ ಮತ್ತು ಅರ್ಹತೆಗಳು ಮುಖ್ಯ,
ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಸಾಲ ಮನ್ನಾ ಆಗಲು ಬೇಕಾದ ದಾಖಲಾತಿಗಳು ಹಾಗೂ ಅರ್ಹತೆಗಳನ್ನು ಇಲ್ಲಿ ನೋಡಿ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸಾಲ ಮನ್ನಾ ಆಗಲು ಬೇಕಾದ ಅರ್ಹತೆ ಹಾಗೂ ದಾಖಲಾತಿಗಳನ್ನು ನೋಡಬಹುದು. 👇🏻https://mahitikanaja.karnataka.gov.in/department

ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..

ನಂತರ ‘ಕಂದಾಯ ಇಲಾಖೆ ಸೇವೆಗಳು” ಇದರ ಮೇಲೆ ಕ್ಲಿಕ್ ಮಾಡಿ

ನಂತರ clws ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ಮುಂದಿನ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ, ಮತ್ತು ಬ್ಯಾಂಕ್ ಸೆಲೆಕ್ಟ್ ಮಾಡಿ, ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ನಂತರ ಈ ಕೆಳಗೆ ಸೂಚಿಸಿರುವ ಸಾಲ ಮನ್ನಾ ಅರ್ಹತೆ ಹಾಗೂ ದಾಖಲೆಗಳನ್ನು ನೀವು ನೋಡಬಹುದು.ಹಾಗೂ ಸಾಲ ಮನ್ನಾ ಸ್ಥಿತಿ ಗತಿ ಯನ್ನು ಅಲ್ಲಿ ಕಾಣುತ್ತಿರಿ.

ಸದ್ಯಕ್ಕೆ ಬರಗಾಲದಿಂದ ತತ್ತರಿಸಿರುವ ರೈತರು ತಾವು ಹಿಂದೆ ಕೃಷಿಗಾಗಿ ಮಾಡಿದ್ದ ಸಾಲವನ್ನು ಮರುಪಾವತಿ ಮಾಡಲು ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಸದ್ಯ ಬೆಳೆದಿರುವ ಬೆಳೆ ನೆಲಕಚ್ಚುವ ಭೀತಿಯಲ್ಲಿದ್ದ ಅನ್ನದಾತರು, ಸಾಲವನ್ನು ಮುಂದಿನ ಇಳುವರಿಯಲ್ಲಿ ಪಾವತಿಸಲು ಅವಕಾಶ ದೊರೆತಂತಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆಯ ಮೂಲಕ ಬಡವರು, ಮಧ್ಯಮ ವರ್ಗದವರಿಗೆ ನೆರವಾಗಿದೆ. ಆದರೆ ರಾಜ್ಯದ ಅನ್ನದಾತರಿಗೆ ಯಾವುದೇ ಘೋಷಣೆಯನ್ನೂ ಮಾಡದಿರುವುದು ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ,ಇನ್ನು ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಕೂಡ ರಾಜ್ಯ ಸರಕಾರ ರೈತರ ಪರ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪ ಮಾಡಿದ್ದರು. ಜೊತೆಗೆ ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜ್ಯ ಸರಕಾರ ಕತ್ತಲೆಭಾಗ್ಯವನ್ನು ಕರುಣಿಸಿದೆ ಎಂಬ ಆರೋಪ ಮಾಡಿದ್ದರು.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಬೆಳೆ ಸಾಲ ಮರುಪಾವತಿ :-ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬೆಳೆ ಸಾಲ ಮರುಪಾವತಿ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️⛈️ಮುಂದಿನ ಎರಡು ದಿನಗಳಲ್ಲಿ ಈ ಜಿಲ್ಲೆಗೆ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ⛈️
https://krushivahini.com/2023/10/29/karnataka-rain-update/

➡️ ಈ ಜಿಲ್ಲೆಯ 33,375 ರೈತರಿಗೆ ವಿಮಾ ಕಂಪನಿಯಿಂದ 26.17 ಕೋಟಿ ರೂ ಮಧ್ಯಂತರ ಬೆಳೆ ವಿಮೆ ಬಿಡುಗಡೆ https://krushivahini.com/2023/10/29/release-of-interim-crop-insurance-2/

➡️ ಹತ್ತಿ ಹಾಗೂ ಕಬ್ಬಿನ ಬೆಲೆಯಲ್ಲಿ ಬಂಪರ್ ಏರಿಕೆ ನಿಮ್ಮ ಜಿಲ್ಲೆಯಲ್ಲಿ ಎಷ್ಟು ಬೆಲೆ ಇದೆ, https://krushivahini.com/2023/10/25/cotton-sugarcane-price-increased/

➡️ ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಯಾವ ಬೆಳೆಗೆ ಎಷ್ಟು ಹೆಚ್ಚಾಗಿದೆ ಇಲ್ಲಿ ನೋಡಿರಿ… https://krushivahini.com/2023/10/25/rabi-2023-minimum-support-price/

➡️ ಬರಪೀಡಿತ ತಾಲೂಕುಗಳಿಗೆ ಸಾಲ ಮನ್ನಾ ಮರುಪಾವತಿ ಮಾಡುವಂತೆ ನೋಟೀಸ್ ಜಾರಿ?? ಇಲ್ಲಿದೆ ಮಹತ್ವದ ಮಾಹಿತಿ🙏🏻🙏🏻 https://krushivahini.com/2023/10/24/crop-loan-notice/

➡️ ಮಳೆ ಮುನ್ಸೂಚನೆ :- ಮುಂದಿನ ದಿನಗಳಲ್ಲಿ ಈ ಜಿಲ್ಲೆಗಳಿಗೆ ಹೆಚ್ಚಿನ ಮಳೆಯ ಸಾಧ್ಯತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ https://krushivahini.com/2023/10/24/karnataka-rain/

➡️ ಈ ಜಿಲ್ಲೆಗಳಲ್ಲಿ ಹೂ ಹಣ್ಣುಗಳು ಬೆಲೆ ಗಗನಕ್ಕೆ ದಸರಾ ಹಬ್ಬದ ಪ್ರಯುಕ್ತ ಬೆಲೆ ಏರಿಕೆ ಯಾವ ಹೂವು ಮತ್ತು ಹಣ್ಣಿಗೆ ಎಷ್ಟು ಧರ ಇದೆ ಇಲ್ಲಿ ನೋಡಿ https://krushivahini.com/2023/10/23/drought-all-market-price-increased/

➡️ ಸರಿಯಾಗಿ ವಿದ್ಯುತ್ ಕೊಡುತ್ತಿಲ್ಲ?? ಮಧ್ಯಂತರ ಬೆಳೆ ವಿಮೆ ಬಿಡುಗಡೆ ಇಲ್ಲ??? ಬರ ಪರಿಹಾರ ಯಾವಾಗ ಬರುತ್ತದೆ https://krushivahini.com/2023/10/23/karnataka-drought-news/

Leave a Reply

Your email address will not be published. Required fields are marked *