Karnataka Rain: ರಾಜ್ಯಾದ್ಯಂತ ಒಣಹವೆ, ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ದಕ್ಷಿಣ ಒಳನಾಡಿನ ಚಿತ್ರದುರ್ಗ,ಮಂಡ್ಯ, ದಾವಣಗೆರೆ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಹೆಚ್ಚಿರುವ ಸಾಧ್ಯತೆ ಇದೆ. ಶಿರಾಲಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ ನಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಗರಿಷ್ಠ ಉಷ್ಣಾಂಶ ಕೊಂಚ ಹೆಚ್ಚಳವಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ.ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಮಳೆ ಮುನ್ಸೂಚನೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಮಳೆ ಮುನ್ಸೂಚನೆ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *