Geskom :-
ಈ ಜಿಲ್ಲೆಗಳಿಗೆ ಕೃಷಿ ಪಂಪ್ ಸಟ್ ಗಳಿಗೆ 5-6 ತಾಸು ವಿದ್ಯುತ್ ಪೂರೈಸಿದ ಜೆಸ್ಕಾಂ.
ಜೆಸ್ಕಾಂ ವ್ಯಾಪ್ತಿಯ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿನ ಕಬ್ಬು, ಭತ್ತ, ತೊಗರಿ ಮತ್ತು ಇತರೆ ಬೆಳೆಗಳಿಗೆ ಕೃಷಿ ನೀರಾವರಿ ಪಂಪ್ ಸೆಟ್‌ಗಳಿಗೆ ಈಗಾಗಲೇ ಅಕ್ಟೋಬರ್ 19 ರಿಂದ ಹಗಲು ವೇಳೆಯಲ್ಲಿಯೇ ಪ್ರತಿದಿನ 5 ರಿಂದ 6 ಗಂಟೆಗಳ ಕಾಲ 3-ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಕರಲಿಂಗಣ್ಣವರ್ ತಿಳಿಸಿದ್ದಾರೆ.
ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು,ರೈತರು ತಮ್ಮ ಕಬ್ಬು ಹಾಗೂ ಇತರೆ ಬೆಳೆಗಳಿಗೆ ಹೆಚ್ಚಿನ ಸಮಯದ ವಿದ್ಯುತ್ ಪೂರೈಸಬೇಕೆಂದು ಕೋರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಮುಂಗಾರು ವೈಫಲ್ಯದ ನಡುವೆಯೂ ರಾಜ್ಯ ಸರ್ಕಾರವು ವಿದ್ಯುತ್ ಕೊರತೆಯನ್ನು ಸರಿದೂಗಿಸಲು ಬೇರೆ ಮೂಲಗಳಿಂದ ವಿದ್ಯುತ್ ಖರೀದಿಸಿ ರೈತರಿಗೆ ವಿದ್ಯುತ್ ಪೂರೈಕೆಗೆ ಸರ್ಕಾರ ಆದೇಶಿಸಿರುತ್ತದೆ.
ಅದರಂತೆ ನಿಗಮದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಪ್ರತಿದಿನ 5 ರಿಂದ 6 ಗಂಟೆಗಳ ಕಾಲ 3-ಫೇಸ್ ವಿದ್ಯುತ್ ಪೂರೈಸುವಂತೆ ಜೆಸ್ಕಾಂ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/IdgrNNJ7davJ82ndmV12M1
ಜೆಸ್ಕಾಂ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಜೆಸ್ಕಾಂ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.