Gram panchayat recruitment 2023 :- ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯ ಗ್ರಾಮ ಪಂಚಾಯತ್ ನಲ್ಲಿ ಡಾಟಾ ಎಂಟ್ರಿ ಆಪರೇಟರ್ ( Data entry operator ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಲಾಯವು ಆದೇಶ ಹೊರಡಿಸಿದೆ.

ಈ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಆದೇಶ ಹೊರಡಿಸಿರುವ ಬಗ್ಗೆ ಬೇಕಾದ ಪೂರ್ಣ ಮಾಹಿತಿ ತಿಳಿಯಲು ಈ ಕೆಳಗಿನ ಲೇಖನವನ್ನು ಓದಿ.

ಕರ್ನಾಟಕ ರಾಜ್ಯದಲ್ಲಿ ಪ್ರತಿಯೊಂದು ಪಂಚಾಯಿತಿಗೆ ಒಬ್ಬರಂತೆ ಸುಮಾರು 5900ಕ್ಕೂ ಹೆಚ್ಚು ಡಾಟಾ ಎಂಟ್ರಿ ಆಪರೇಟರ್ (Data entry operator) ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಆದೇಶ ಹೊರಡಿಸಿದೆ. ಆದೇಶದ ಪ್ರಕಾರ ಈ ಹುದ್ದೆಗಳ ನೇಮಕಾತಿ ಸಂಪೂರ್ಣ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳ ಕೈಯಲ್ಲಿದ್ದು, ಕೂಡಲೇ ನೇಮಕಾತಿಯನ್ನು ಮಾಡಲು ಸಕಲಸಿದ್ಧತೆ ಮಾಡಿಕೊಳ್ಳಬೇಕೆಂದು ಆದೇಶ ಹೊರಡಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರಿರುತ್ತಾರೆ?

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಯುಸಿ ಮುಗಿಸಿದವರು ಅರ್ಹರಿರುತ್ತಾರೆ ಮತ್ತು ಇದರ ಜೊತೆಗೆ ಮೂರು ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು.

ಡಾಟಾ ಎಂಟ್ರಿ ಆಪರೇಟರ್ ವೇತನ –

ಡಾಟಾ ಎಂಟ್ರಿ ಆಪರೇಟರ್ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ಸಂಬಳ 16 ಸಾವಿರ ರೂಪಾಯಿ ಇರುತ್ತದೆ. ಆದೇಶದ ಪ್ರಕಾರ ಡಾಟಾ ಎಂಟ್ರಿ ಆಪರೇಟರ್ಸ್ ಗಳಿಗೆ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಬರುವ ಮೊತ್ತದಿಂದ ಇವರ ವೇತನವನ್ನು ನೀಡಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ್ಯಂತ ಸುಮಾರು 5 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ, ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಸರ್ಕಾರದ ಈ ಒಂದು ಬೃಹತ್ ನೇಮಕಾತಿಯು ನಿರುದ್ಯೋಗಿಗಳಿಗೆ ಸಂತಸವನ್ನು ತಂದಿದೆ.

ನಾವು ದಿನನಿತ್ಯ ನಿಮಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ..

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಗ್ರಾಮ ಪಂಚಾಯತಿ ನೇಮಕಾತಿಗೆ ಅರ್ಜಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಗ್ರಾಮ ಪಂಚಾಯತಿ ನೇಮಕಾತಿಗೆ ಅರ್ಜಿ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *