Karnataka Rain update :- ಕರ್ನಾಟಕದಿಂದ ಈಗಾಗಲೇ ಮುಂಗಾರು ನಿರ್ಗಮಿಸಿಯಾಗಿದ್ದರೂ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಮಲೆನಾಡು ಭಾಗದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ( IMD) ನೀಡಿದೆ.

ಬೆಂಗಳೂರು: ಈಗಾಗಲೇ ಮುಂಗಾರಿನ ಅವಧಿ ಮುಗಿದಿದ್ದರೂ ಕರ್ನಾಟಕದ ಮಲೆನಾಡು ಭಾಗದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಭಾರತೀಯ ಹಮಾಮಾನ ಇಲಾಖೆ( IMD) ಬೆಂಗಳೂರು ಕೇಂದ್ರವು ಈ ವಾರದ ಮಳೆಗೆ ಸಂಬಂಧಿಸಿದ ವರದಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಇದಲ್ಲದೇ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಹಾಗೂ ಮಿಂಚಿನ ವಾತಾವರಣವೂ ಅಕ್ಟೋಬರ್‌ 30 ಹಾಗೂ 31 ರಂದು ಕಂಡು ಬರಲಿದೆ ಎಂದು ತಿಳಿಸಲಾಗಿದೆ.

ಉತ್ತರ ಒಳನಾಡಿನ ಹಲವು ಜಿಲ್ಲೆಗಳ ಉಷ್ಣಾಂಶದ ಪ್ರಮಾಣದಲ್ಲಿ ಏರಿಕೆಯೂ ಇದೇ ಅವಧಿಯಲ್ಲಿ ಕಂಡು ಬರಲಿದೆ

ಎಲ್ಲೆಲ್ಲಿ ಮಳೆ ಮುನ್ಸೂಚನೆ :-

ಅಕ್ಟೋಬರ್‌ 30ರ ಸೋಮವಾರ ಹಾಗೂ ಅಕ್ಟೋಬರ್‌ 31ರ ಮಂಗಳವಾರದಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಸೋಮವಾರದಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಹಾಗೂ ಮಿಂಚು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. ಮಂಗಳವಾರದಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಇರುವ ಸಾಧ್ಯತೆಗಳು ದಟ್ಟವಾಗಿವೆ.

ಉಳಿದಂತೆ ಭಾನುವಾರದಂದು ದಕ್ಷಿಣ ಕನ್ನಡ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗಲಿದೆ. ಸೋಮವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಬಹುದು. ಮಂಗಳವಾರದಂದು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ .

ಬುಧವಾರದಂದು ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಉಷ್ಣಾಂಶ ಏರಿಕೆ:-

ಕರ್ನಾಟಕದ ಹಲವು ಕಡೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಬಹುದು. ಕನಿಷ್ಠ ಉಷ್ಣಾಂಶಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ವರೆಗೆ ಕಡಿಮೆಯಾಗಬಹುದು ಎಂದು ತಿಳಿಸಲಾಗಿದೆ.

ಕಾರವಾರ ನಗರದಲ್ಲಿ ಗರಿಷ್ಠ ಉಷ್ಣಾಂಶ 36.1 ಡಿಗ್ರಿ ಸೆಲ್ಸಿಯಸ್‌ ನಷ್ಟು ದಾಖಲಾದರೆ, ವಿಜಯಪುರ ನಗರದಲ್ಲಿ 13.4 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ದಾಖಲಾಗಿದೆ.

ಬೆಂಗಳೂರು ನಗರ

ಬೆಂಗಳೂರು ನಗರದಲ್ಲಿ ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೆ, ಹಗುರ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಮುಸುಕಿದ ಸಾಧ್ಯತೆಗಳೇ ಹೆಚ್ವು. ಬೆಂಗಳೂರಿನ ಗರಿಷ್ಠ ಉಷ್ಣಾಂಶವು 29 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ

. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಮಳೆ ಮುನ್ಸೂಚನೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಮಳೆ ಮುನ್ಸೂಚನೆ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ಕೇಂದ್ರದಿಂದ 17.901 ಕೋಟಿ ರೂ ಬಿಡುಗಡೆ ರೈತರ ಖಾತೆಗೆ ಯಾವಾಗ ಜಮೆಯಾಗುತ್ತದೆ ಇಲ್ಲಿ ನೋಡಿ https://krushivahini.com/2023/11/01/bara-parihara-update/

➡️ ಇನ್ನೊಂದು ಹಂತದ ಬರ ಅಧ್ಯಯನ ಆರಂಭ? ಸದ್ಯದಲ್ಲೇ ಬರಲಿದೆ ರೈತರ ಖಾತೆಗೆ ಬರ ಪರಿಹಾರ ಹಣ💸 https://krushivahini.com/2023/10/31/drought-situation-study/

➡️ ನಿಮಗೆ ಎಷ್ಟು ಬೆಳೆ ಹಾನಿ ಹಣ ಜಮೆಯಾಗಿದೆ?? ವಿಮಾ ಕಂಪನಿಯಿಂದ ಈ ಜಿಲ್ಲೆಗೆ 26.17 ಕೋಟಿ ಬೆಳೆ ವಿಮೆ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಿ https://krushivahini.com/2023/10/30/crop-loss-compensation-status-check/

One thought on “Karnataka Rain update”

Leave a Reply

Your email address will not be published. Required fields are marked *