LPG Price Hike : ನವೆಂಬರ್ ತಿಂಗಳ ಮೊದಲ ದಿನವೇ ಜನರಿಗೆ ಹಣದುಬ್ಬರದ ಆಘಾತ ನೀಡಲಾಗಿದೆ. ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಇತ್ತೀಚೆಗೆ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯನ್ನು ಘೋಷಿಸಿವೆ. ನವೆಂಬರ್ 01, 2023ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 101.50 ರೂಪಾಯಿ ಹೆಚ್ಚಿಸಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ವಾಣಿಜ್ಯ ಸಿಲಿಂಡರ್ ದರವನ್ನು 100 ರೂ.ನಿಂದ 103ರೂ. ಗಳಷ್ಟು ಹೆಚ್ಚಿಸಲಾಗಿದೆ. ಗಮನಾರ್ಹವಾಗಿ, ಈ ಹೆಚ್ಚಳವು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳಿಗೆ ಮಾತ್ರ ಅನ್ವಯಿಸುತ್ತದೆ.

ಇತ್ತೀಚಿನ ದರ ಏರಿಕೆಯ ಹಿನ್ನೆಲೆಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಗಮನಿಸಿದರೆ ಇಂದಿನಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19ಕೆ‌ಜಿ ವಾಣಿಜ್ಯ ಸಿಲಿಂಡರ್ ಬೆಲೆ 833ರೂ.ಇದ್ದರೆ, ಕೋಲ್ಕತ್ತಾದಲ್ಲಿ ಈ ದರ 943 ರೂ. ಗಳಿಗೆ ಜಿಗಿದಿದೆ. ಅದೇ ವಾಣಿಜ್ಯ ನಗರಿ ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 785 ರೂ.ಗೆ ಹಾಗೂ ದಕ್ಷಿಣದ ರಾಜ್ಯವಾದ ಚೆನ್ನೈನಲ್ಲಿ ಈ ದರ 999 ರೂ.ಗಳಿಗೆ ತಲುಪಿದೆ.

ಕಳೆದ ಅಕ್ಟೋಬರ್ 1ರಂದು ಸಹ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ ಹೆಚ್ಚಳ ಮಾಡಲಾಗಿತ್ತು. ಆಗ ಸಿಲಿಂಡರ್ ದರ 209 ರೂ. ಗಳಷ್ಟು ಏರಿಕೆಯಾಗಿತ್ತು. ಅರ್ಥಾತ್, ಒಂದೇ ತಿಂಗಳಲ್ಲಿ 19ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು ಸುಮಾರು 310 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ.

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಇಲ್ಲ:

ಆದಾಗ್ಯೂ, ನೆಮ್ಮದಿಯ ಸುದ್ದಿ ಎಂದರೆ ವಾಣಿಜ್ಯ ಸಿಲಿಂಡರ್ ದರ ಏರಿಕೆ ಮಾಡಿರುವ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ದೇಶಾದ್ಯಂತ 14.2 ಕೆಜಿ ಸಿಲಿಂಡರ್ ದರ ಸ್ಥಿರವಾಗಿದೆ. ಗಮನಾರ್ಹವಾಗಿ ಗೃಹಬಳಕೆ ಸಿಲಿಂಡರ್ ದರವನ್ನು ಕೊನೆಯದಾಗಿ ಆಗಸ್ಟ್ 30 ರಂದು ಕಡಿಮೆ ಮಾಡಲಾಗಿತ್ತು.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ಸರ್ಕಾರಿ ಯೋಜನೆ ಅಡಿ ನಿಮಗೆ ಎಷ್ಟು ಹಣ ಬಂದಿದೆ?? ಪಿಎಂ ಕಿಸಾನ್? ಗೃಹಲಕ್ಷ್ಮಿ ಹಣ? ಹಾಗೂ ರೈತ ಶಕ್ತಿ ಯೋಜನೆ? ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ https://krushivahini.com/2023/11/03/direct-benefit-transfer-2/

➡️ ಕೇಂದ್ರದಿಂದ 17.901 ಕೋಟಿ ರೂ ಬಿಡುಗಡೆ ರೈತರ ಖಾತೆಗೆ ಯಾವಾಗ ಜಮೆಯಾಗುತ್ತದೆ ಇಲ್ಲಿ ನೋಡಿ https://krushivahini.com/2023/11/01/bara-parihara-update/

Leave a Reply

Your email address will not be published. Required fields are marked *