Karnataka Rain Alert: ನವೆಂಬರ್ 9ರವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ.
ರಾಜ್ಯದಲ್ಲಿ ಹಿಂಗಾರು ಸ್ವಲ್ಪ ಪ್ರಮಾಣದಲ್ಲಿ ಚುರುಕುಗೊಂಡಿದ್ದು ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಭಾನುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿದ್ದು, ನವೆಂಬರ್ 9ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
ಭಾನುವಾರ ಕರಾವಳಿ ಜಿಲ್ಲೆಗಳಿಗ ಹಳದಿ ಎಚ್ಚರಿಕೆ ನೀಡಲಾಗಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿದಿದೆ. ದಕ್ಷಿಣ ಕನ್ನಡದ ಚೆನ್ನೈತ್ತೋಡಿಯಲ್ಲಿ 150 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ.
ಉಡುಪಿಯ ಕಾಂತಾವರದಲ್ಲಿ 148 ಮಿ.ಮೀ ಮಳೆಯಾಗಿದೆ, ಹಾಸನ ಜಿಲ್ಲೆಯ ಹರಿಹರಪುರ 113 ಮಿ.ಮೀ, ಶಿವಮೊಗ್ಗದ ಕುಂಚೇನಹಳ್ಳಿಯಲ್ಲಿ 95 ಮಿ.ಮೀ, ಕೊಡಗು ಜಿಲ್ಲೆಯ ಬೇಲೂರು ಬಾಣೆ 86 ಮಿ.ಮೀ, ಚಿತ್ರದುರ್ಗ ಜಿಲ್ಲೆಯ ಹಿರೇಗುಂಟನೂರಿನಲ್ಲಿ 78 ಮಿ.ಮೀ, ದಾವಣಗೆರೆ ಜಿಲ್ಲೆಯ ಹಿರೇಮಳಲಿಯಲ್ಲಿ 78 ಮಿ.ಮೀ, ಚಿಕ್ಕಮಗಳೂರು ಜಿಲ್ಲೆಯ ಹೊರನಾಡುವಿನಲ್ಲಿ 73 ಮಿ.ಮೀ, ತುಮಕೂರು ಜಿಲ್ಲೆಯ ಬರಗೂರಿನಲ್ಲಿ 62 ಮಿ.ಮೀ, ಮೈಸೂರು ಜಿಲ್ಲೆಯ ಕೃಷ್ಣರಾಜನಗರದಲ್ಲಿ 57 ಮಿ.ಮೀ, ಮಂಡ್ಯ ಜಿಲ್ಲೆಯ ಆನೆಗೋಳದಲ್ಲಿ 44 ಮಿ.ಮೀ, ಚಾಮರಾಜನಗರ ಜಿಲ್ಲೆಯ ಮುಕ್ಕಡಹಳ್ಳಿಯಲ್ಲಿ 32 ಮಿ.ಮೀ ಮಳೆಯಾಗಿದೆ.
ಹಾಸನದ ಹೊಳೆನರಸೀಪುರ ತಾಲೂಕಿನ ಕೆಲವೆಡೆ ಧಾರಾಕಾರ ಮಳೆಯಾಗಿದ್ದು ಇಚ್ಚನಹಳ್ಳಿ 64 ಮಿ.ಮೀ, ಸಂಕನಹಳ್ಳಿ 62 ಮಿ.ಮೀ, ಬಾಗಿವಾಳು 61 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.
ನವೆಂಬರ್ 9ರವರೆಗೆ ಉತ್ತಮ ಮಳೆ:-
ನವೆಂಬರ್ 6 ಮತ್ತು 7ರಂದು ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ನವೆಂಬರ್ 7ರಂದು ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ನವೆಂಬರ್ 8-9ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಶಿವಮೊಗ್ಗ, ಕಲಬುರಗಿ, ವಿಜಯಪುರ, ರಾಯಚೂರು, ಬಳ್ಳಾರಿ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ನವೆಂಬರ್ 10 ರಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/HLCYrALalJpLbeEMnLRyZB
ಮಳೆ ಮುನ್ಸೂಚನೆ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.ಮಳೆ ಮುನ್ಸೂಚನೆ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.
ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
ಇಲ್ಲಿದೆ ಮೋದಿಜಿ ಅವರಿಂದ ಘೋಷಣೆಯಾದ ಹೊಸ ಗ್ಯಾರಂಟಿ ಯೋಜನೆ, ತಪ್ಪದೇ ನೋಡಿರಿ 👇🏻👇🏻🙏🏻
➡️ ಮೋದಿ ಅವರಿಂದ ಹೊಸ ಗ್ಯಾರಂಟಿ ಯೋಜನೆ ಉಚಿತವಾಗಿ 5 ಕೆಜಿ ಅಕ್ಕಿ 5 ವರ್ಷ ತನಕ ಸಿಗುತ್ತದೆ https://krushivahini.com/2023/11/06/modi-statement-to-distribute-free-5-kg-rice/