This work is mandatory to get drought relief :- ಗದಗ: ‘ಬರ ಪರಿಹಾರ ಪಡೆಯಲು ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಪ್ರೋಟ್ಸ್ ತಂತ್ರಾಂಶದಲ್ಲಿ ದಾಖಲಿಸಬೇಕು‘ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ನಮಸ್ಕಾರ ಆತ್ಮೀಯ ರೈತ ಬಾಂಧವರೇ,ಇಂದಿನ ಲೇಖನದಲ್ಲಿ ನಾವು ಬರ ಪರಿಹಾರ ರೈತರಿಗೆ ಎಷ್ಟು ಬರುತ್ತದೆ ಹಾಗೂ ಬರ ಪರಿಹಾರ ಬರಬೇಕಾದರೆ ಈ ಕೆಲಸವನ್ನು ರೈತರು ಕಡ್ಡಾಯವಾಗಿ ಮಾಡಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸುತ್ತಾರೆ. ರೈತರಲ್ಲಿ ಇದೊಂದು ಮಹತ್ವದ ಕಳಕಳಿ, ದಯವಿಟ್ಟು ಲೇಖನವನ್ನು ಸಂಪೂರ್ಣವಾಗಿ ಓದಿ ನಿಮಗೆ ಬರ ಪರಿಹಾರ ಬರಬೇಕಾದರೆ ಏನು ಕೆಲಸವನ್ನು ಮಾಡಬೇಕು ಎಂಬುದನ್ನು ತಿಳಿಯಿರಿ..🙏🏻ಇಂದಿನ ಈ ಲೇಖನವನ್ನು ಸಂಪೂರ್ಣವಾಗಿ ಓದಿ ತಿಳಿದುಕೊಂಡು ತಪ್ಪದೆ ಎಲ್ಲರಿಗೂ ಶೇರ್ ಮಾಡಿ 🙏🏻..

> ರೈತರಿಗೆ ಎಷ್ಟು ಬರ ಪರಿಹಾರ ಬರುತ್ತದೆ? ನಿಮಗೆ ಬರ ಪರಿಹಾರ ಯಾವ ಆಧಾರದ ಮೇಲೆ ಕೊಡುತ್ತಾರೆ?? ರೈತರಿಗೆ ಎಷ್ಟು ಹಣ ಸಿಗುತ್ತದೆ?? ಇಲ್ಲಿ ನೋಡಿರಿ 👇🏻

ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ರೈತರು ತಮ್ಮ ಹೆಸರು, ಬ್ಯಾಂಕ್ ಖಾತೆ ವಿವರಗಳನ್ನು ಈಗಾಗಲೇ ದಾಖಲು ಮಾಡಿದ್ದಾರೆ. ಆದರೆ, ಒಬ್ಬ ರೈತನ ಬಳಿ ಎಷ್ಟು ಎಕರೆ ಜಮೀನು ಇದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸರ್ಕಾರ ಬರ ಪರಿಹಾರ ಪಾವತಿಸುವಾಗ ರೈತರು ಫ್ರಟ್ಸ್ ತಂತ್ರಾಂಶದಲ್ಲಿ ಎರಡು ಎಕರೆ ನಮೂದಿಸಿದ್ದರೆ ಪರಿಹಾರ ಅಷ್ಟಕ್ಕೆ ಮಾತ್ರ ಸಿಗಲಿದೆ. ಒಬ್ಬ ರೈತನಿಗೆ ಐದು ಎಕರೆ ಜಮೀನು ಇದ್ದು, ಸಂಪೂರ್ಣ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಿದ್ದರೆ ಐದು ಎಕರೆಗೂ ಪರಿಹಾರ ಸಿಗಲಿದೆ. ಆದಕಾರಣ, ಎಲ್ಲ ರೈತರು ಕೃಷಿ ಇಲಾಖೆಗೆ ತೆರಳಿ ತಮ್ಮ ಜಮೀನಿನ ಮಾಹಿತಿಯನ್ನು ನವೆಂಬರ್ ಅಂತ್ಯದ ಒಳಗೆ ನಮೂದಿಸಬೇಕು’ ಎಂದು ತಿಳಿಸಿದರು.

👉🏻ರೈತರು ಈ ಕೆಲಸ ಮಾಡಿದಲ್ಲಿ ಮಾತ್ರ ನಿಮಗೆ ಹಣ ಜಮೆಯಾಗುತ್ತದೆ??

ರೈತರು ತಪ್ಪದೆ ಈ ಮಹತ್ವದ ಮಾಹಿತಿಯನ್ನು ಪಡೆದು ನಿಮ್ಮ ಮೊಬೈಲ್ ನಲ್ಲಿ ಫ್ರೂಟ್ಸ್ ಐಡಿಯನ್ನು ಜನರೇಟ್ ಮಾಡಿ ನಿಮಗೆ ಎಷ್ಟು ಎಕರೆ ಹೊಲ ಇದೆ ಅದನ್ನು ನಿಮ್ಮ ಫ್ರೂಟ್ಸ್ ಐಡಿಯಲ್ಲಿ ಅಳವಡಿಸದಿದ್ದರೆ ನಿಮಗೆ ಪರಿಹಾರ ಹಣ ಬರುವುದಿಲ್ಲ.

ಆಧಾರ್ ನಂಬರ್ ಹಾಕಿ ನಿಮ್ಮ FID ತಿಳಿದುಕೊಳ್ಳಿ

ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ👇🏻

https://fruitspmk.karnataka.gov.in/MISReport/GetDetailsByAadhaar.aspx

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ.

ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇಸ್ಲಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

👉🏻ಏನಿದು ಫ್ರಟ್ಸ್ ನಂಬರ್??

ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID(ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ಎಲ್ಲಾ ವಿವರವನ್ನು ಒಳಗೊಂಡಿರುವ ಸಾಧಾನವಾಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕರು ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.

👉🏻ನೋಂದಣಿ ಹೇಗೆ? ಇಲ್ಲಿ ನೋಡಿರಿ

ನಿಮ್ಮ ಹತ್ತಿರದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳಲ್ಲಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟ್ರೀಕೃತ ಬ್ಯಾಂಕ್‌ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ, ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

ಏಕೆ ನೋಂದಾಯಿಸಬೇಕು?

ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ.

> ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx

– ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.

– ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.

– ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

– ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.

– ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ) ನಿಮಗೆ ಸಿಗಲಿದೆ.

ಹೀಗೆ ಬಂದಿರುವ FID ಯನ್ನು ಕೃಷಿ ಇಲಾಖೆ,ರೇಷ್ಮೆ, ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ನಂತರ FID ಯನ್ನು ಪಿ ಎಂ ಕಿಸಾನ್ ಯೋಜನೆ, ಬೆಳೆಸಾಲ, ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ನೀವು ಈ FID ಅನ್ನು ಬಳಸಬಹುದು.

‘ಸೈಬರ್ ಕ್ರೈಂ ಪ್ರಪಂಚಾದಾದ್ಯಂತ ಜಾಸ್ತಿ ಆಗುತ್ತಿದೆ. ನಮ್ಮ ಇಲಾಖೆಯ ನೋಂದಣಿ ವಿಭಾಗದಲ್ಲಿ ಹೆಬ್ಬೆಟ್ಟು ಕೊಟ್ಟ ನಂತರ, ರಿಜಿಸ್ಟರ್‌ನಲ್ಲಿ ಅದು ಡಿಸ್‌ಪ್ಲೇ ಆಗದಂತೆ ತಿಂಗಳ ಹಿಂದಿನಿಂದಲೇ ಕ್ರಮವಹಿಸಲಾಗಿದೆ. ಯಾರೇ ಆಗಲಿ ಮೊಬೈಲ್‌ನಲ್ಲಿ ಕರೆಗಳ ಅಮಿಷ ಅಥವಾ ಸಂದೇಶಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಇರಬೇಕು’ ಎಂದು ಮನವಿ ಮಾಡಿದರು.

ಗದಗ ಜಿಲ್ಲೆಯ ಹಲವೆಡೆ ಪರವಾನಗಿ ಪಡೆಯದೇ ಜಮೀನುಗಳಲ್ಲಿ ವಿಂಡ್ ಫ್ಯಾನ್‌ಗಳನ್ನು ಅಳವಡಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಪವನ ಹಾಗೂ ಸೌರ ನೀತಿಯಲ್ಲೇ ಕೆಲವೊಂದು ವಿನಾಯಿತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊಟ್ಟಿವೆ. ಅದರ ಹಿನ್ನಲೆಯಲ್ಲಿ ಈ ಪ್ರಕರಣಗಳನ್ನು ಪರಿಶೀಲಿಸಬೇಕಿದೆ. ವಿದ್ಯುತ್ ರೈತರಿಗೆ ಅತ್ಯಂತ ಅವಶ್ಯಕ. ಸೌರ ವಿದ್ಯುತ್‌ ಘಟಕಗಳ ಅನುಷ್ಠಾನಕ್ಕೆ ಅನುಮತಿ ಕೋರಿ ಗ್ರಾಮ ಪಂಚಾಯ್ತಿಗೆ ಕೊಟ್ಟ ಅರ್ಜಿ ಕೊಟ್ಟಿದ್ದನ್ನು ಸಮಯಕ್ಕೆ ಸರಿಯಾಗಿ ವಿಲೇ ಮಾಡದಿದ್ದರೆ ರೈತರಿಗೆ ತೊಂದರೆ ಆಗುತ್ತದೆ. ಇಲ್ಲಿ ನಿಯಮ ಉಲ್ಲಂಘನೆ ಆಗಿದ್ದರೆ ಪರಿಶೀಲಿಸಿ, ಕ್ರಮವಹಿಸಲಾಗುವುದು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ 30 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸಲಾಗಿದೆ. ಜನವಸತಿ ಇದ್ದೂ ಕಂದಾಯ ಪಟ್ಟಿಗೆ ಸೇರದ ಮೂರು ಗ್ರಾಮಗಳು ಇನ್ನೂ ಉಳಿದುಕೊಂಡಿವೆ. ಅವುಗಳನ್ನು ಕಂದಾಯ ಗ್ರಾಮಕ್ಕೆ ಸೇರಿಸಲು ಪ್ರಸ್ತಾವ ಕಳಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಕಂದಾಯ ಇಲಾಖೆ ಜನಪರವಾಗಿಯೂ, ವೇಗವಾಗಿಯೂ ಕೆಲಸ ಮಾಡುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ👇🏻

https://chat.whatsapp.com/HLCYrALalJpLbeEMnLRyZB

ರೈತರಿಗೆ ಬರ ಪರಿಹಾರ ಎಷ್ಟು ಬರುತ್ತದೆ ಎಂಬುದರ ಕುರಿತು :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

💚💸ಬೆಳೆ ಸಮೀಕ್ಷೆ ಮುಗಿದರೂ ಇನ್ನೂ ಆದರೂ ಬರ ಪರಿಹಾರ ಹಣ ಜಮೆಯಾಗಿಲ್ಲ!ಯಾವಾಗ ಬರುತ್ತದೆ ಬರ ಪರಿಹಾರ ಇಲ್ಲಿದೆ ಮಹತ್ವದ ಮಾಹಿತಿ
https://krushivahini.com/2023/11/10/when-will-drought-relief-come/

➡️ 25% ಮಧ್ಯಂತರ ಬೆಳೆ ಹಾನಿ ಪರಿಹಾರಕ್ಕೆ ಶಿಫಾರಸ್ಸು ನಿಮ್ಮ ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ https://krushivahini.com/2023/11/09/interim-crop-loss-proposal/

Leave a Reply

Your email address will not be published. Required fields are marked *