Drought distribution will be done on the basis of fruits ID :- ನಮಸ್ಕಾರ ಆತ್ಮೀಯ ರೈತ ಬಾಂಧವರು, ನಿಮಗೆ ಎಲ್ಲರಿಗೂ ತಿಳಿದ ಹಾಗೆ ಬರ ಪರಿಹಾರವನ್ನು ಈಗಾಗಲೇ ಘೋಷಣೆ ಮಾಡಿದ್ದಾರೆ ಆದರೆ ಇನ್ನೂ ಆದರೂ ಬರ ಪರಿಹಾರ ಬಂದಿಲ್ಲ.

ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ 👇🏻

ಹೌದು ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಬರ ಪರಿಹಾರ ಸಿಗುವುದು ಎಂದು ಕಂದಾಯ ಇಲಾಖೆ ಹೇಳಿದೆ. ಆದರೆ ಮೊದಲು ರೈತರು ತಮ್ಮ ಹೊಲದಲ್ಲಿ ಬರುವ ಎಲ್ಲಾ ಸರ್ವೇ ನಂಬರ್ ಗಳನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿದರೆ ಮಾತ್ರ ನಿಮಗೆ ಪರಿಹಾರ ಹಣ ಜಮೆಯಾಗುತ್ತದೆ. ದಯವಿಟ್ಟು ಈ ಕೂಡಲೇ ಎಲ್ಲ ರೈತರು ನಿಮ್ಮ ಹೊಲದ ಸರ್ವೆ ನಂಬರ್ ಗಳನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿ ಬರ ಪರಿಹಾರವನ್ನು ಪಡೆಯಿರಿ 🙏🏻..

ಬೆಂಗಳೂರು: ಬರಗಾಲದಿಂದ ಆಗಿರುವ ಬೆಳೆ ಹಾನಿಗೆ ‘ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿಗಳ ಮಾಹಿತಿ ವ್ಯವಸ್ಥೆ’ (ಫ್ರೂಟ್ಸ್‌) ದತ್ತಾಂಶದ ಆಧಾರದಲ್ಲೇ ಪರಿಹಾರ ವಿತರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಹೇಳಿದರು.

ನಿನ್ನೆಯಷ್ಟೇ ಸಚಿವರು ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಆಯ್ದ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರ ಜೊತೆ ಸಭೆ ನಡೆಸಿದರು.

ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಅವರು, ‘ಹಿಂದಿನ ವರ್ಷಗಳಲ್ಲಿ ಬರ ಪರಿಹಾರ ವಿತರಣೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿರುವುದು ಪತ್ತೆಯಾಗಿತ್ತು. ಅಕ್ರಮಗಳನ್ನು ತಡೆಯುವುದಕ್ಕಾಗಿ ಫ್ರೂಟ್ಸ್‌ ದತ್ತಾಂಶದ ಆಧಾರದಲ್ಲಿ ಪರಿಹಾರ ವಿತರಣೆಗೆ ನಿರ್ಧರಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ, ಡಿಸೆಂಬರ್‌ನಲ್ಲಿ ರೈತರಿಗೆ ಪರಿಹಾರ ಸಿಗುವ ಸಾಧ್ಯತೆಯಿದೆ ಎಂದು ಹೇಳಿದರು.

ರಾಜ್ಯದ ಶೇಕಡ 95ರಷ್ಟು ರೈತರು ಫ್ರೂಟ್ಸ್‌ ಗುರುತಿನ ಸಂಖ್ಯೆ ಹೊಂದಿದ್ದಾರೆ. ಆದರೆ, ಒಟ್ಟು ಸಾಗುವಳಿ ವಿಸ್ತೀರ್ಣದ ಶೇ 63ರಷ್ಟು ಮಾತ್ರ ದತ್ತಾಂಶದಲ್ಲಿ ದಾಖಲಾಗಿದೆ. ಆದ್ದರಿಂದ ವಿಸ್ತೀರ್ಣದ ವಿವರವನ್ನು ದಾಖಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ನಂತರದಲ್ಲಿ ಫ್ರೂಟ್ಸ್‌ ದತ್ತಾಂಶದಲ್ಲಿ ದಾಖಲಾದ ವಿಸ್ತೀರ್ಣದ ಆಧಾರದಲ್ಲೇ ಪರಿಹಾರ ವಿತರಣೆ ನಡೆಯಲಿದೆ ಎಂದು ತಿಳಿಸಿದರು.

ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಕಂದಾಯ ಇಲಾಖೆ ಕಚೇರಿಗಳಲ್ಲಿ ಫ್ರೂಟ್ಸ್‌ ದತ್ತಾಂಶದಲ್ಲಿ ವಿಸ್ತೀರ್ಣ ದಾಖಲಿಸಲು ಅವಕಾಶ ಕಲ್ಪಿಸಲಾಗುವುದು. ರೈತರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದರು.

ಡಿಸೆಂಬರ್ ನಲ್ಲಿಯೇ ಪರಿಹಾರ ಸಿಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಕೇಂದ್ರ ತಂಡ ಕರ್ನಾಟಕದಲ್ಲಿದ್ದು, ಈಗಾಗಲೇ ಸರ್ಕಾರ ಅಂಕಿಅಂಶವನ್ನು ನೀಡಿದೆ. ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಶೀಘ್ರದಲ್ಲೇ ಬಿಡುಗಡೆಯಾಗುವ ವಿಶ್ವಾಸವಿದೆ. ರೈತರ ಅಂಕಿಅಂಶಗಳನ್ನು ಸಿದ್ಧಪಡಿಸಲಾಗುತ್ತಿದೆ. ಕೇಂದ್ರದಿಂದ ಹಣ ಬಂದರೆ ಎರಡು ದಿನದಲ್ಲಿ ಪರಿಹಾರ ನೀಡಬಹುದು ಎಂದು ಹೇಳಿದರು.

ಭೇಟಿಗೆ ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ 10 ಬಾರಿ ಪತ್ರ ಬರೆದಿದ್ದೇವೆ. ದೆಹಲಿಯಲ್ಲಿ ಭೇಟಿಗೆ ಅವಕಾಶ ಸಿಗದಿದ್ದರೆ, ಬೇರೆ ಯಾವುದೇ ರಾಜ್ಯ, ಪ್ರದೇಶದಲ್ಲಿ ಬೇಕಾದರೂ ನಾವೇ ಭೇಟಿಗೆ ಬರುತ್ತೇವೆಂದೂ ತಿಳಿಸಿದ್ದೇವೆ. ಆದರೆ, ಇಲ್ಲಿಯವರೆಗೂ ನಮಗೆ ಸಮಯ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದಿನ ವರ್ಷಗಳಲ್ಲಿ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ನೀಡಿದ ಪರಿಹಾರದ ಕುರಿತು ಮಾತನಾಡಿ, ರೈತರ ಕುರಿತ ಮಾಹಿತಿಗಳನ್ನು ಅಧಿಕಾರಿಗಳು ಸ್ವತಃ ನಮೂದಿಸಿದ್ದು, ಇಲ್ಲಿ ಅಕ್ರಮಗಳು ನಡೆದಿರುವುದು, ಅಧಿಕಾರಿಗಳು ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಕಂಡು ಬಂದಿದೆ. ಹೀಗಾಗಿಯೇ ಫ್ರೂಟ್ಸ್‌ ದತ್ತಾಂಶದ ಆಧಾರದಲ್ಲಿ ಪರಿಹಾರ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಹೇಳಿದರು.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/HLCYrALalJpLbeEMnLRyZB

ರೈತರಿಗೆ ಫ್ರೂಟ್ಸ್ ಐಡಿ ಆಧಾರದ ಮೇಲೆ ಪರಿಹಾರವನ್ನು ಕೊಡುತ್ತಾರೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ರೈತರಿಗೆ ಫ್ರೂಟ್ಸ್ ಐಡಿ ಆಧಾರದ ಮೇಲೆ ಪರಿಹಾರವನ್ನು ಕೊಡುತ್ತಾರೆ.ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

ಬರ ಪರಿಹಾರದ ಕುರಿತು ಮಹತ್ವದ ಮಾಹಿತಿ :-

➡️ ನಿಮಗೆ ಬರ ಪರಿಹಾರ ಬೇಕಿದ್ದಲ್ಲಿ ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ನಿಮ್ಮ ಸರ್ವೇ ನಂಬರ್ ಗಳು ಜೋಡಣೆ ಆಗಿದೆಯೋ ಇಲ್ಲವೋ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ https://krushivahini.com/2023/11/22/check-fruits-id-status-for-drought-relief/

Leave a Reply

Your email address will not be published. Required fields are marked *