Immediate drought relief distribution to 226 drought talukas:-

ಚಿತ್ರದುರ್ಗ, ನವೆಂಬರ್‌, 23: ಬರಘೋಷಿಸಿದ ನಂತರ ಪರಿಹಾರ ನೀಡುವ ಕಾರ್ಯದಲ್ಲಿ ಎಲ್ಲಾ ಪ್ರಕ್ರಿಯೆ ಮುಗಿದಿದ್ದು, ಬೆಳೆಗಳ ಕ್ರಾಪ್ ಸರ್ವೆ ಮುಗಿದು ಅಂತಿಮ ಹಂತದಲ್ಲಿದೆ. ಈ ಕುರಿತು ಕೇಂದ್ರಕ್ಕೆ ಸಾಕಷ್ಟು ಒತ್ತಡ ತಂದಿದ್ದೀವಿ. ಶೀಘ್ರದಲ್ಲೇ 226 ತಾಲೂಕುಗಳಲ್ಲಿ ಬರ ಪರಿಹಾರ ನೀಡಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.

ಚಿತ್ರದುರ್ಗ ನಗರದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ಪರಿಹಾರ ವಿಚಾರವಾಗಿ ನಾನು, ಸಚಿವ ಪ್ರಯಾಂಕ ಖರ್ಗೆ, ಕೃಷ್ಣಭೈರೇಗೌಡ್ರು ಮುಖ್ಯಮಂತ್ರಿಗಳನ್ನು ಬೇಟಿ ಮಾಡೋಕೆ ಹೋಗಿದ್ದೆವು. ಆದರೆ ಭೇಟಿಗೆ ಅವಕಾಶ ನೀಡದ ಹಿನ್ನೆಲೆ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದೇವೆ ಎಂದರು.

ಈಗಾಗಲೇ ಹಲವು ಮೆಮೋರಂಡಮ್ ಹಾಗೂ ಪತ್ರ ಬರೆದಿದ್ದೀವಿ. ಅಂತಿಮವಾಗಿ ಪ್ರೋಸೆಸ್ ಆಗಿ ಒಂದು ಹಂತಕ್ಕೆ ಬಂದಿದೆ. ನಾವು ಕೊಟ್ಟ ಮೆಮೋತಂಡಮ್‌ಗೆ ಇನ್ನೂ ಪತ್ರ ಬಂದಿಲ್ಲ. ನಿನ್ನೆ ರಾತ್ರಿ ಈ ಕುರಿತಂತೆ ನನಗೆ ಮಾಹಿತಿ ಬಂದಿದೆ. ಸಮಯ ಫಿಕ್ಸ್ ಆದರೆ ನಾನು, ಕೃಷ್ಣ ಭೈರೇಗೌಡರು ಹೋಗುತ್ತೇವೆ. ಫೈನಾನ್ಸ್ ಮಿನಿಸ್ಟರ್ ಹಂತಕ್ಕೆ ಹೋಗಿದೆ ಅಂದರೆ ಇಂದು ಅಂತಿಮ ಮಾಡಲಾಗುತ್ತದೆ ಎಂದರು.

➡️ ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ??

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

➡️ ಈ ಲಿಸ್ಟ್ ನಲ್ಲಿರುವ ರೈತರಿಗೂ ಕೂಡ ಹಣ ಬರುವುದಿಲ್ಲ..ನಿಮಗೆ ಬರ ಪರಿಹಾರ ಬೇಕಿದ್ದಲ್ಲಿ ತಪ್ಪದೆ ಕೊನೆಯವರೆಗೂ ಲೇಖನವನ್ನು ಓದಿ ನಿಮ್ಮ ತಾಲೂಕು ಇದೆಯೇ ಖಚಿತಪಡಿಸಿಕೊಳ್ಳಿ.

ನಿಮ್ಮ ಜಿಲ್ಲೆಗೆ ಎಷ್ಟು ಬರ ಪರಿಹಾರ ಬರುತ್ತದೆ ಹಾಗೂ ಈಗ ತಾನೇ ಹೊಸದಾಗಿ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ನಿಮ್ಮ ತಾಲೂಕು ಇರುವುದನ್ನು ಇಲ್ಲಿ ನೋಡಿರಿ. ಮತ್ತು ಈ ತಾಲೂಕುಗಳಿಗೆ ಬರ ಪರಿಹಾರ ಬರುವುದು ಅನುಮಾನ ದಯವಿಟ್ಟು ಲೇಖನವನ್ನು ಪೂರ್ತಿಯಾಗಿ ಓದಿ ತಪ್ಪದೇ ಶೇರ್ ಮಾಡಿ 🙏🏻…👇🏻

👆👆ಈ ಮೇಲಿರುವ ಹಿರೇಹುಲ್ಲಾಳ ಗ್ರಾಮದ ರೈತರು 3 ದಿನಗಳ ಒಳಗಾಗಿ FID ಮಾಡಿಸಿಕೊಳ್ಳಲು ತಿಳಿಸಿದೆ ಮಾಡಿಸದೇ ಇದ್ದರೆ ರೈತರಿಗೆ ಬೆಳೆ ಹಾನಿ ಬೆಳೆ ಪರಿಹಾರ ಬೆಳೆ ವಿಮೆ ಇನ್ನಿತರೇ ಯಾವುದೇ ಪರಿಹಾರ ಬರುವುದಿಲ್ಲ FID ಮಾಡಿಸಲು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಮತ್ತು ರೈತ ಸಂಪರ್ಕ ಕೇದ್ರಕ್ಕೆ ತೆರಳಿ FID ಮಾಡಿಸಲು ಸೂಚಿಸಿದೆ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಆಡಳಿತ ಅಧಿಕಾರಿಗಳನ್ನು ಬೆಟ್ಟಿ ಮಾಡಿ ತಿಳಿಯಿರಿ.

➡️ ಈ ಕೆಲಸ ಮಾಡಿದರೆ ಮಾತ್ರ ಬರ ಪರಿಹಾರ ಹಣ ನಿಮಗೆ ಜಮೆ ಆಗುತ್ತದೆ.

ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

➡️ ಆಧಾರ್ ನಂಬರ್ ಹಾಕಿ ನಿಮ್ಮ FID ಸ್ಟೇಟಸ್ ತಿಳಿದುಕೊಳ್ಳಿ👇🏻

ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ👇🏻

https://fruitspmk.karnataka.gov.in/MISReport/GetDetailsByAadhaar.aspx

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಎಫ್ ಐ ಡಿ ಜನರೇಟ್ ಆಗಿರುವುದು ನಿಮಗೆ ಕಾಣುತ್ತದೆ…

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

➡️ ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ? ಇಲ್ಲಿ ನೋಡಿರಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.

ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ ) ನಿಮಗೆ ಸಿಗಲಿದೆ.

ಹೀಗೆ ಬಂದಿರುವ FID ಯನ್ನು ಕೃಷಿ ಇಲಾಖೆ,ರೇಷ್ಮೆ, ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ನಂತರ FID ಯನ್ನು ಪಿ ಎಂ ಕಿಸಾನ್ ಯೋಜನೆ, ಬೆಳೆಸಾಲ, ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ನೀವು ಈ FID ಅನ್ನು ಬಳಸಬಹುದು.

➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

ಬರಪೀಡಿತ ಜಗಳೂರು ತಾಲೂಕಿನ 48 ಗ್ರಾಮಗಳ ಜನರಿಗೆ ಪ್ಲೋರೈಡ್‌ ನೀರೇ ಗತಿ: ಈ ಬಗ್ಗೆ ಸಚಿವ S.S.ಮಲ್ಲಿಕಾರ್ಜುನ್‌ ಹೇಳಿದ್ದೇನು? ಬರಪೀಡಿತ ಜಗಳೂರು ತಾಲೂಕಿನ 48 ಗ್ರಾಮಗಳ ಜನರಿಗೆ ಪ್ಲೋರೈಡ್‌ ನೀರೇ ಗತಿ: ಈ ಬಗ್ಗೆ ಸಚಿವ S.S.ಮಲ್ಲಿಕಾರ್ಜುನ್‌ ಹೇಳಿದ್ದೇನು?

ಇನ್ನು ಎರಡ್ಮೂರು ದಿನಗಳ ಬಳಿಕ ಅಂತಿಮ ನಿರ್ಧಾರ ಆಗುತ್ತದೆ. ನಮ್ಮ ಸಚಿವ ಸಂಪುಟದಲ್ಲಿ ಕೂಡಾ ನಿರ್ಧಾರ ಮಾಡುತ್ತೇವೆ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಕೇಂದ್ರ ದ್ವೇಷದ ರಾಜಕೀಯ ಮಾಡುತ್ತಿದೆ. ನಾವು ಈಗಾಗಲೇ 226 ತಾಲ್ಲೂಕುಗಳನ್ನು ಬರ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದೇವೆ. ಅವುಗಳಿಗೆ ಪರಿಹಾರ ನೀಡಲು ಪ್ರಾರಂಭ ಮಾಡುತ್ತೇವೆ ಎಂದರು.

ಪಡಿತರ ಅಕ್ಕಿಗೆ ಕೇಂದ್ರ ಸರ್ಕಾರ ಬಿಲ್ಲನ್ನು ನೀಡುವ ಚಿಂತನೆಗೆ ಪ್ರತಿಕ್ರಿಯಿಸಿದ ಅವರು, ಏನ್‌ ಮಾಡುತ್ತಾರೆ ಮಾಡಲಿ. ಅವರು ಕರ್ನಾಟಕದ ಬಗ್ಗೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. 26 ಲೋಕಸಭಾ ಸದಸ್ಯರುಗಳನ್ನು ಗೆಲ್ಲಿಸಿ ಕಳುಹುಸಿದ್ದಾರೆ. ಆ ಪ್ರಜ್ಞೆ ಅವರಿಗಿಲ್ಲ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.

2 ಬಾರಿ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯದಿಂದ ಬೆಂಬಲ ಕೊಡಲಾಗಿದೆ. ರಾಜ್ಯದ ವಿಚಾರಗಳಲ್ಲೂ ಯಾವುದೇ ಗಮನ ನೀಡುತ್ತಿಲ್ಲ.

ರಾಜ್ಯದ ಬಗ್ಗೆ ಜಿ.ಎಸ್.ಟಿ ಯ ಪಾಲು ನೀಡಿಕೆ ಇರಬಹುದು, ಕಾವೇರಿ ನೀರು ಹಂಚಿಕೆ ವಿಚಾರ ಇರಬಹುದು, ಬರದ ವಿಚಾರದ ಬಗ್ಗೆ ಮೂರು ತಿಂಗಳಿನಿಂದ ಓಡಾಡುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ಯಾವುದೇ ಸ್ಪಂದನೆ ಕೊಡುತ್ತಿಲ್ಲ. 4 ಲಕ್ಷ ಕೋಟಿ ರೂಪಾಯಿ ರಾಜ್ಯದಿಂದ ಜಿ.ಎಸ್.ಟಿ ಹೋಗುತ್ತದೆ. ಆದರೆ ಅವರು ಕೇವಲ 50 ಸಾವಿರ ಕೋಟಿ ಮಾತ್ರ ನಮಗೆ ನೀಡುತ್ತಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳು ಕೇವಲ ಲೋಕಸಭಾ ಚುನಾವಣೆವರೆಗೆ ಮಾತ್ರ ಎಂಬ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆಗಳ ಜಾರಿಯ ಹತಾಷೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ವಿಧ್ಯಾನಿಧಿಯನ್ನು ಹೊರತು ಪಡಿಸಿ ಉಳಿದ ಯೋಜನೆಗಳು 5 ವರ್ಷ ಜಾರಿಯಲ್ಲಿರುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದರು.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/HLCYrALalJpLbeEMnLRyZB

226 ಬರ ತಾಲೂಕುಗಳಿಗೆ ಶೀಘ್ರದಲ್ಲಿ ಪರಿಹಾರ ವಿತರಣೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. 226 ಬರ ತಾಲೂಕುಗಳಿಗೆ ಶೀಘ್ರದಲ್ಲಿ ಪರಿಹಾರ ವಿತರಣೆ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ದಾಖಲೆಯಾಗಿವೆ?? ನಿಮ್ಮ ಎಷ್ಟು ಹೊಲಕ್ಕೆ ಎಷ್ಟು ಪರಿಹಾರ ಬರುತ್ತದೆ ಇಲ್ಲಿ ಚೆಕ್ ಮಾಡಿಕೊಳ್ಳಿ👇🏻 https://krushivahini.com/2023/11/28/fruits-id-linked-survey-number/

💚⬇️💸ರೈತರ ಖಾತೆಗೆ ಹವಾಮಾನ ಆಧಾರಿತ ಬೆಳೆ ವಿಮೆ ಮೊತ್ತ ಜಮೆ! 79,197 ಪ್ರಸ್ತಾವಗಳಿಗೆ ₹78.39 ಕೋಟಿ ವಿಮಾ ಪರಿಹಾರ ಘೋಷಣೆ!👇🏻 https://krushivahini.com/2023/11/24/78-39-crore-insurance-relief-announced-for-79197-proposals/

Leave a Reply

Your email address will not be published. Required fields are marked *