Bara parihara bidugade :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಈಗಾಗಲೇ ಬರ ಪರಿಹಾರದ ಬಗ್ಗೆ ಸಾಕಷ್ಟು ಸುದ್ದಿಯನ್ನು ನೀವು ನಮ್ಮ ವೆಬ್ಸೈಟ್ನಲ್ಲಿ ಓದಿದ್ದೀರಿ. ಆದರೆ ರೈತರಿಗೆ ಈಗಾಗಲೇ ಬರ ಪರಿಹಾರವನ್ನು ವಿತರಣೆ ಮಾಡಲಾಗುವುದೆಂದು ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ.
➡️ ಯಾವಾಗ ರೈತರ ಖಾತೆಗೆ ಮೊದಲ ಕಂತಿನ ಪರಿಹಾರ ಹಣ ಬರುತ್ತದೆ??
ಅರ್ಹ ರೈತರಿಗೆ ಎರಡು ಸಾವಿರ ರು.ವರೆಗೆ ಪರಿಹಾರ ನೀಡಲು ರಾಜ್ಯ ಸರಕಾರ ನಿರ್ಧಾರ
ಬರ: ಮೊದಲ ಕಂತಿನ ಬೆಳೆಹಾನಿ ಪರಿಹಾರ
ಬೆಂಗಳೂರು: ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರದ ನೆರವಿಗಾಗಿ ಕಾಯುತ್ತಿದ್ದ ರಾಜ್ಯ ಸರಕಾರ, ಈವರೆಗೆ ನೆರವು ಬಾರದೇ ಇರುವುದರಿಂದ ರಾಜ್ಯದ ವತಿಯಿಂದಲೇ 2,000 ರು. ವರೆಗೆ ಬೆಳೆ ಪರಿಹಾರ ವಿತರಿಸಲು ಮುಂದಾಗಿದೆ.
* ಯಾವ ತಾಲೂಕಿಗೆ ಎಷ್ಟು ಬರ ಪರಿಹಾರ ಬರುತ್ತದೆ??👇🏻
ಮುಂದಿನ ನಾಲೈದು ದಿನದಲ್ಲಿ ಅರ್ಹ ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ಆರಂಭ!
223 ತಾಲೂಕು ಗಳಲ್ಲಿನ ಅರ್ಹ ರೈತರ ಬಗ್ಗೆ ಮಾಹಿತಿ ಪಡೆದು ಪರಿಹಾರ ವಿತರಣೆ ಶುರು ಮಾಡಲಾಗುತ್ತದೆ.
➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..
https://landrecords.karnataka.gov.in/PariharaPayment/
ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.
👇🏻 ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ??
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..
ಈ ಮೇಲೆ ಕಾಣುವ ಮುಖಪುಟದಲ್ಲಿ ತೋರಿಸುವ ಹಾಗೆ ನಿಮ್ಮ ಊರಲ್ಲಿ ಯಾರಿಗೆ ಎಷ್ಟು ಪರಿಹಾರ ಹಣ ಬರುತ್ತದೆ ಎಂಬುವುದು ಇಲ್ಲಿ ನಿಮಗೆ ತಿಳಿಯುತ್ತದೆ..
👇🏻ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.
ಆಧಾರ್ ನಂಬರ್ ಹಾಕಿ ನಿಮ್ಮ FID ತಿಳಿದುಕೊಳ್ಳಿ
ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ👇🏻
https://fruitspmk.karnataka.gov.in/MISReport/GetDetailsByAadhaar.aspx
ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಎಫ್ ಐ ಡಿ ಜನರೇಟ್ ಆಗಿರುವುದು ನಿಮಗೆ ಕಾಣುತ್ತದೆ…
ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.
• ರಾಜ್ಯದಲ್ಲಿ ಭೀಕರ ಬರವಿದ್ದರೂ, ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ನಮ್ಮ ರೈತರು ಹಾಗೂ ಜನರನ್ನು ಉಳಿಸುವ ಕೆಲಸವನ್ನು ಸರಕಾರ ಮಾಡಬೇಕಿದೆ. ಆದ್ದರಿಂದ ಕೇಂದ್ರದಿಂದ ಹಣ ಬರುವ ತನಕ ಕಾಯದೆ, ರಾಜ್ಯ ಸರಕಾರ ಮೊದಲ ಕಂತು ಬಿಡುಗಡೆ ಮಾಡಿದೆ.
ತುರ್ತು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರಕಾರಕ್ಕೆ ನಾನು ಸೇರಿದಂತೆ ಸಂಪುಟ ಸಚಿವರು ಹಲವು ಬಾರಿ ಪತ್ರ ಬರೆದು, ಎನ್‌ಡಿಆರ್.ಎಫ್ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಕೇಂದ್ರ ಸರಕಾರ ಈವರೆಗೆ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರಕಾರದ ಕಡೆಯಿಂದಲೇ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2000 ರು. ವರೆಗೆ ಬೆಳೆ ಪರಿಹಾರ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ರಾಜ್ಯ ಸರಕಾರದಿಂದ ಮೊದಲ ಕಂತಿನಿಂದ ಈ ಪರಿಹಾರ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. (ಮುಂದಿನ ನಾಲೈದು ದಿನದಲ್ಲಿ ಅರ್ಹ ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ.)
223 ತಾಲೂಕುಗಳಲ್ಲಿನ ಅರ್ಹ ರೈತರ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ತರಿಸಿಕೊಂಡು ಪರಿಹಾರ ನೀಡುವ ಕೆಲಸ ಆರಂಭಿಸಲಾಗುವುದು ಎಂದರು.
– ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರಕಾರ ಈಗಾಗಲೇ 6.5 ಲಕ್ಷ ರೈತರಿಗೆ 460 ಕೋಟಿ ಬಿಡುಗಡೆ ಮಾಡಿದೆ.
ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಉನ್ನತಮಟ್ಟದ ಸಮಿತಿ ಪರಿಶೀಲಿಸಿ ತೀರ್ಮಾನ ಮಾಡಿದ ತಕ್ಷಣ ಕೇಂದ್ರದಿಂದ ರಾಜ್ಯಕ್ಕೆ ಹಣ ಬರಲಿದೆ. ಅದನ್ನು ಯಾರೂ ನಿಲ್ಲಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಮತ್ತು ಸಚಿವರು ಪತ್ರ ಬರೆದು ಅದು ನನಗೆ ತಲುಪುವ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಾರೆ. ನಾನು ರಾಜ್ಯದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದು, ನನಗೂ ಜವಾಬ್ದಾರಿ ಇದೆ. ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಹಣ ಬಾಕಿ ಇಲ್ಲ.
– ನಿರ್ಮಲಾ ಸೀತಾರಾಮನ್ ಕೇಂದ್ರ ಸಚಿವೆ
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/BV4GiFXeLXJKfXFJFZSiGj
ಮೊದಲ ಕಂತಿನ ಬರ ಪರಿಹಾರ ಹಣ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಮೊದಲ ಕಂತಿನ ಬರ ಪರಿಹಾರ ಹಣ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
➡️ಈ ಪಟ್ಟಿಯಲ್ಲಿ ಇರುವ ರೈತರಿಗೆ ಬರ ಪರಿಹಾರ ಹಣ ಬರುವುದಿಲ್ಲ! 🛑 ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದೆಯೇ ಚೆಕ್ ಮಾಡಿಕೊಳ್ಳಿ 🙏🏻 https://krushivahini.com/2023/12/04/reason-why-these-farmers-do-not-get-drought-relief/
➡️ 223 ತಾಲೂಕುಗಳಿಗೆ ಬರ ಪರಿಹಾರ ತಲಾ ರೈತರಿಗೆ 2000 ರೂ ಸಾಧಾರಣ ಬರಪೀಡಿತ ತಾಲೂಕುಗಳಿಗೆ ಪರಿಹಾರ ಹಣ ಬರುತ್ತದೆ ಇಲ್ಲವೋ https://krushivahini.com/2023/12/01/drought-relief-of-2000-announced-to-each-farmer/