90% subsidy under krishi sinchayi scheme :- ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇಂದಿನ ದಿನ ನಾವು ಈ ಲೇಖನದಲ್ಲಿ ಸೂಕ್ತ ನೀರಾವರಿ ಯೋಜನೆ ಹಾಗೂ ತುಂತುರು ನೀರಾವರಿ ಘಟಕ ಸ್ಥಾಪಿಸಲು 90% ಸಹಾಯಧನವನ್ನು ನೀಡಲಾಗುತ್ತಿದೆ. ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಇದರ ಉಪಯೋಗವನ್ನು ಪಡೆದುಕೊಳ್ಳಿ..

ಸೂಕ್ತ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ ರೋಣ: ರೋಣ ಮತ್ತು ಗಜೇಂದ್ರಗಡ ತಾಲೂಕಿನ ರೈತ ಬಾಂಧವರಿಗೆ 2023-24ನೇ ಸಾಲಿನ ಸೂಕ್ತ ನೀರಾವರಿ ಯೋಜನೆಯಡಿ ಕೃಷಿ ಇಲಾಖೆಯಿಂದ ತುಂತುರು ನೀರಾವರಿ ಹಾಗೂ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಘಟಕಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಶೇ.90ರಷ್ಟು ಸಹಾಯಧನದಡಿ (ಪ್ರತಿ ಹೆಕ್ಟೇರ್‌ಗೆ ರೈತರು ವಂತಿಕೆ 63 ಎಂ.ಎಂ.ಗೆ ಈ 4139 ಹಾಗೂ 75 ಎಂ.ಎಂ ಗೆ ಈ 4667) ನೀರಾವರಿ ಘಟಕ ವಿತರಣೆಗೆ ಅರ್ಜಿ ಕರೆಯಾಲಾಗಿದೆ. ಆದ್ದರಿಂದ ಆಸಕ್ತ ರೈತರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬೇಕು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ರವೀಂದ್ರಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭೂಜಲ್ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕಗಳನ್ನು (ಹನಿ ಮತ್ತು ತುಂತುರು ನೀರಾವರಿ ಘಟಕಗಳ) ಪಡೆಯಲು ರೈತರಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ಕೃಷಿ ಬೆಳೆಗಳಲ್ಲಿ ನೀರಿನ ಸಮರ್ಥ ಬಳಕೆಗಾಗಿ ಮತ್ತು ಹೆಚ್ಚಿನ ವಿಸ್ತೀರ್ಣವನ್ನು ನೀರಾವರಿ

ಪ್ರದೇಶವನ್ನಾಗಿ ಪರಿವರ್ತಿಸಲು ಸೂಕ್ಷ್ಮ ನೀರಾವರಿ ಘಟಕಗಳ ಮುಖಾಂತರ ನೀರು ಹಾಯಿಸು ವುದು ಅವಶ್ಯಕವಾಗಿರುತ್ತದೆ..

ಆದ್ದರಿಂದ ಸೂಕ್ಷ 33 ನೀರಾವರಿ ಘಟಕಗಳಾದ ಹನಿ ಮತ್ತು ತುಂತುರು ನೀರಾವರಿ ಘಟಕಗಳನ್ನು ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭೂಜಲ್ ಯೋಜನೆಯಡಿ ಶೇ. 90 ರಷ್ಟು ರಿಯಾಯಿತಿ ದರದಲ್ಲಿ ವಿತರಿಸಲು ಅವಕಾಶವಿರುತ್ತದೆ. ಈ ಯೋಜನೆ ಗಳಡಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಘಟಕಗಳನ್ನು ಸಹಾಯಧನ ಪಡೆಯಲು ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನೀಡಿ, ಕಿಸಾನ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು, ರೈತರ ವಂತಿಗೆ ಪಾವತಿಸಿ ಪಡೆಯಲು ಕೋರಿದೆ.

ಅಗತ್ಯ ದಾಖಲಾತಿಗಳು: ನಿಗದಿತ ನಮೂನೆಯಲ್ಲಿ ಅರ್ಜಿ, ಪಹಣಿ, ಬೆಳೆದೃಢೀಕರಣ (ಕೃಷಿ ಬೆಳೆಗಳಾದ ಮುಸುಕಿನಜೋಳ, ರಾಗಿ, ತೊಗರಿ, ನೆಲಗಡಲೆ), ಕೊಳವೆಬಾವಿ ದೃಢೀಕರಣ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಟುಕ್, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳಿಂದ ನಿರಕ್ಷೇಪಣ ಪತ್ರ, 20 ರುಪಾಯಿ ಸ್ಟಾಂಪ್ ಪೇಪರ್, ಪ.ಜಾತಿ/ ಪ.ಪಂಗಡ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಚಿಕ್ಕಬಳ್ಳಾಪುರ ಸಹಾಯಕ ಕೃಷಿ ನಿರ್ದೇಶಕ ಎ.ಕೇಶವರೆಡ್ಡಿ ತಿಳಿಸಿದ್ದಾರೆ.

ಯಾದಗಿರಿ: 2023-24ನೇ ಸಾಲಿನ ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಂಟಿ ಕೃಷಿ ನಿರ್ದೇಶಕರು ಅವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತೂರು ನೀರಾವರಿ ಘಟಕಗಳನ್ನು ಅಳವಡಿಸಲು ಬಯಸುವ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು ಆಧಾರ್‌ಕಾರ್ಡ್, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ಲಗತ್ತಿಸಬೇಕು, 20.ರೂ. ಛಾಪ ಕಾಗದ (ನೋಟರಿಯೊಂದಿಗೆ), ಬ್ಯಾಂಕ್‌ ಪಾಸ್‌ಬುಕ್, ಆರ್.ಟಿ.ಜಿ.ಎಸ್ ಪತ್ರಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ರೈತ ಭಾಂದವರದಲ್ಲಿ ಕೋರಲಾಗಿದೆ. ಲಾಭ ಪಡೆಯಲು ರೈತರು ಕಡ್ಡಾಯವಾಗಿ ಪ್ರೊಟ್ಸ್ ಐಡಿಯನ್ನು ಹೊಂದಿರಬೇಕು, ರೈತರು ಈಗಾಗಲೇ ಪ್ರೋಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ, ತಮ್ಮ ಎಲ್ಲಾ ಪಹಣಿಗಳನ್ನು ಪ್ರೋಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ಸೂಕ್ತ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಲಿಸ್ಟ್ ನಲ್ಲಿ ಇದ್ದವರಿಗೆ ಬರ ಪರಿಹಾರ ಬರುವುದಿಲ್ಲ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ..

Leave a Reply

Your email address will not be published. Required fields are marked *