Drought relief 25,000 thousand to farmer :- ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇಂದಿನ ಲೇಖನದಲ್ಲಿ ನಾವು ರೈತರಿಗೆ ಎಕರೆ ಗೆ 25 ಸಾವಿರ ಬರ ಪರಿಹಾರ ನೀಡುವುದರ ಬಗ್ಗೆ ತಿಳಿದಿಕೊಳ್ಳೋಣ.

ಪ್ರತಿ ರೈತನಿಗೆ ಎಕರೆಗೆ ಕನಿಷ್ಠ 25,000 ರೂ. ಕೊಡಿ | ರೈತ ಸಂಘದ ಮುಖಂಡ ಕುರುಬೂರು ಶಾಂತಕುಮಾರ ಆಗ್ರಹ..

ಬರ ಪರಿಹಾರದ ತಲಾ 2000 ರೂ.ಭಿಕ್ಷೆ ಬೇಡ!👇🏻

ಮೈಸೂರು: ಮುಖ್ಯಮಂತ್ರಿ 2000 ರೂಪಾಯಿ ಬರ ಪರಿಹಾರದ ಭಿಕ್ಷೆ ನೀಡುವುದು ಬೇಡ. ಸಂಪೂರ್ಣ ಬರ ನಷ್ಟವನ್ನು ಎಕರೆಗೆ ಕನಿಷ್ಠ 25,000 ರೂ.ಗಳಂತೆ ಬಿಡುಗಡೆ ಮಾಡಬೇಕು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ ಆಗ್ರಹಿಸಿದರು.

➡️ ಈ ಪಟ್ಟಿಯಲ್ಲಿ ಇರುವ ರೈತರಿಗೆ ಮಾತ್ರ ಬರ ಪರಿಹಾರ ಬರುತ್ತದೆ👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

ಯಾವಾಗ ರೈತರ ಖಾತೆಗೆ ಮೊದಲ ಕಂತಿನ ಪರಿಹಾರ ಹಣ ಬರುತ್ತದೆ??

ಅರ್ಹ ರೈತರಿಗೆ ಎರಡು ಸಾವಿರ ರು.ವರೆಗೆ ಪರಿಹಾರ ನೀಡಲು ರಾಜ್ಯ ಸರಕಾರ ನಿರ್ಧಾರ

ಬರ: ಮೊದಲ ಕಂತಿನ ಬೆಳೆಹಾನಿ ಪರಿಹಾರ

ಬೆಂಗಳೂರು: ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರದ ನೆರವಿಗಾಗಿ ಕಾಯುತ್ತಿದ್ದ ರಾಜ್ಯ ಸರಕಾರ, ಈವರೆಗೆ ನೆರವು ಬಾರದೇ ಇರುವುದರಿಂದ ರಾಜ್ಯದ ವತಿಯಿಂದಲೇ 2,000 ರು. ವರೆಗೆ ಬೆಳೆ ಪರಿಹಾರ ವಿತರಿಸಲು ಮುಂದಾಗಿದೆ.

• ಯಾವ ತಾಲೂಕಿಗೆ ಎಷ್ಟು ಬರ ಪರಿಹಾರ ಬರುತ್ತದೆ??

ಮುಂದಿನ ನಾಲೈದು ದಿನದಲ್ಲಿ ಅರ್ಹ ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ಆರಂಭ!
223 ತಾಲೂಕು ಗಳಲ್ಲಿನ ಅರ್ಹ ರೈತರ ಬಗ್ಗೆ ಮಾಹಿತಿ ಪಡೆದು ಪರಿಹಾರ ವಿತರಣೆ ಶುರು

• ರಾಜ್ಯದಲ್ಲಿ ಭೀಕರ ಬರವಿದ್ದರೂ, ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ನಮ್ಮ ರೈತರು ಹಾಗೂ ಜನರನ್ನು ಉಳಿಸುವ ಕೆಲಸವನ್ನು ಸರಕಾರ ಮಾಡಬೇಕಿದೆ. ಆದ್ದರಿಂದ ಕೇಂದ್ರದಿಂದ ಹಣ ಬರುವ ತನಕ ಕಾಯದೆ, ರಾಜ್ಯ ಸರಕಾರ ಮೊದಲ ಕಂತು ಬಿಡುಗಡೆ ಮಾಡಿದೆ.

ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ..

ಡಿಸೆಂಬರ್ 23ರ ವಿಶ್ವ ರೈತ ದಿನ’ದಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ರೈತರ ಮಹಾ ಅಧಿವೇಶನ ನಡೆಸಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರಾಷ್ಟ್ರೀಯ ರೈತ ಮುಖಂಡರ ಸಮ್ಮುಖದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಈ ಕುರಿತು ಗಂಭೀರ ಎಚ್ಚರಿಕೆ ನೀಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಪ್ರವಾಹ ಹಾನಿ ಮಳೆಹಾನಿ, ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲಾ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿದ್ದಾರೆ. ಬೆಳೆ ನಾಶವಾಗಿದೆ. ರೈತ ಸಂಕಷ್ಟಕ್ಕೆ ಸಿಲುಕಿದ್ದು ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ, ಕಾನೂನು ಜಾರಿ ಆಗಬೇಕು. ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ಪ್ರಧಾನಿಯವರು

* ಡಿಸೆಂಬರ್ 13ಕ್ಕೆ ವಿಶ್ವ ರೈತ ದಿನ

ಬೆಂಗಳೂರಲ್ಲಿ ರೈತರ ಅಧಿವೇಶನ

ಉದ್ಯಮಿಗಳಿಗೆ ಸಂಕಷ್ಟದ ನೆರವು ಎಂದು 12 ಲಕ್ಷ ಕೋಟಿ ಮನ್ನಾ ಮಾಡಿರುವ ರೀತಿ ರೈತರ ಸಾಲವೂ ಮನ್ನಾ ಆಗಬೇಕು. ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ. ಯಾವುದೇ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ನೆರವಿಗೆ ಬಾರದೆ ರಾಜಕೀಯ ಚೆಲ್ಲಾಟ ಮಾಡುತ್ತಿದ್ದಾರೆ ಎಂದು ಆಗ್ರಹಿಸಿದರು.

ಬಣ್ಣಾರಿ ಸಕ್ಕರೆ ಕಾರ್ಖಾನೆ ಕಳೆದ ವರ್ಷ 2953ರೂ ಪಾವತಿ ಮಾಡಿದ್ದೇವೆ ಎಂದು ಸುಳ್ಳು ವರದಿ ನೀಡಿ ಕಬ್ಬು ಬೆಳೆಗಾರ ರೈತರನ್ನು ವಂಚಿಸುತ್ತಿದೆ. ರಾಜ್ಯದ ಬಹುತೇಕ ಸಕ್ಕರೆ ಕಾರ್ಖಾನೆಗಳು ಸ್ವಯಂ ಪ್ರೇರಿತವಾಗಿ ಹೆಚ್ಚುವರಿಯಾಗಿ 100 ರೂ ನೀಡುತ್ತಿದ್ದಾರೆ. ಸಕ್ಕರೆ ಬೆಲೆ ಗಗನಕ್ಕೆ ಏರುತ್ತಿದೆ. ಮೂರು ನಾಲ್ಕು ಸಭೆಗಳಾದರೂ ಕಾರ್ಖಾನೆಯವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಅಂತಿಮ ಎಚ್ಚರಿಕೆ ನೀಡುತ್ತಿದ್ದೇವೆ. ಎಚ್ಚೆತ್ತುಕೊಳ್ಳದಿದ್ದರೆ ಕಾರ್ಖಾನೆ ಮಾಲೀಕರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಬ್ಬಿನ ಬೆಳೆಯನ್ನು ಮಾನದಂಡಕ್ಕೆ ಸೇರಿಸಬೇಕು. ಬರ ನಷ್ಟ ಪರಿಹಾರ ಸಿಗುವಂತಾಗಬೇಕು. ಕಬ್ಬು ಬೇಸಾಯ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್ ಆರ್‌ಇಜಿ ಲಿಂಕ್ ಮಾಡಬೇಕು, ಎಲ್ಲ ಬೆಳೆಗಳಿಗೂ ಕಡ್ಡಾಯ ಬೆಳೆ ವಿಮೆ ಜಾರಿಗೊಳಿಸಬೇಕು. ಬೆಳೆ ವಿಮೆ ಸರಳೀಕರಣಗೊಳಿಸಬೇಕು ಅತಿವೃಷ್ಟಿ ಬರ ನಷ್ಟ ಪರಿಹಾರ ಬೆಳೆ ವಿಮೆಯಡಿ ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ದೇಶದ 140 ಕೋಟಿ ಜನರಿಗೆ ಆಹಾರ ಉತ್ಪಾದಿಸಲು ಜೀವನ ಮುಡಿವುಡುವ 60 ವರ್ಷದ ಹಿರಿಯ ರೈತರಿಗೆ ತಿಂಗಳಿಗೆ ಕನಿಷ್ಠ 5000 ರೂ. ಪಿಂಚಣಿ ಯೋಜನೆ ಜಾರಿಗೆ ತರಬೇಕು. ಕೃಷಿ ಪಂಪ್ ಸೆಟ್ ಗಳಿಗೆ ನೀಡುವ ಉಚಿತ ವಿದ್ಯುತ್ ತಪ್ಪಿಸಲು ವಿದ್ಯುತ್ ಖಾಸಗೀಕರಣ ಕೈ ಬಿಡಬೇಕು. ಕೃಷಿಗೆ ಹಗಲು ನಿರಂತರ 10 ಗಂಟೆ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರಕಾರ ನೀಡುವ ಶೇ.50 ಸಹಾಯಧನ ಕುಸುಮ ಯೋಜನೆಗೆ ರಾಜ್ಯ ಸರ್ಕಾರ ಶೇ.30ರಷ್ಟು ಸೇರಿಸಿ ನೀಡಲಿ. ಇದರಿಂದ ರೈತರಿಗೆ ಹಗಲು ವಿದ್ಯುತ್ ಸಿಗುತ್ತದೆ. ರೈತನ ಮಗನ ಮದುವೆಯಾಗುವ ವಧುವಿಗೆ ನೌಕರಿಯಲ್ಲಿ ಶೇ.10 ಮೀಸಲಾತಿ ತರಬೇಕು, ಈ ಮೂಲಕ ರೈತರ ಮಕ್ಕಳನ್ನು ಅಪಾಯದಿಂದ ಪಾರು ಮಾಡಬೇಕು ಎಂದು ಹೇಳಿದರು.

ಸರ್ಕಾರಿ ವಾಪಾಸು ಪಡೆಯಲಿ:-

ದೆಹಲಿಯಲ್ಲಿ ಒಂದು ವರ್ಷ ಕಾಲ ಹೋರಾಟ ಮಾಡಿದ ರೈತರ ಮೇಲೆ ಹಾಕಿರುವ ಪೊಲೀಸ್ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು. ದೇಶದ ರೈತರನ್ನು ಸಂರಕ್ಷಿಸಲು ವಿಶ್ವ ವ್ಯಾಪಾರದ ಒಪ್ಪಂದದಿಂದ ಭಾರತ ಸರಕಾರ ಹೊರಬರಬೇಕು

ಒತ್ತಾಯಗಳ ಬಗ್ಗೆ ರಾಷ್ಟ್ರೀಯ ರೈತ ಮುಖಂಡರು ಸಮಾವೇಶದಲ್ಲಿ ಭಾಗವಹಿಸಿ ಚರ್ಚೆ ನಡೆಸಿ ರೈತರನ್ನು ಜಾಗೃತಿ ಮಾಡಿ ದೇಶದ ಎಲ್ಲಾ ರೈತರು ರಾಜಕೀಯತರ ಹೋರಾಟಕ್ಕೆ ಬೆಂಗಳೂರಿನಲ್ಲಿ ಡಿ.23 ರಂದು ರೈತರ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ. ರೈತ ಸಂಘಟನೆಗಳ ಮುಖಂಡರು ಭಾಗವಹಿಸಿ ಸಾಲ ಮನ್ನಾ ಆಂದೋಲನ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಡಿ.23ರಂದು ಅಧಿವೇಶನಕ್ಕೆ ಬನ್ನಿ ಎಂದು ಒತ್ತಾಯಿಸಿದರು ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಕಿರಗಸೂರು ಶಂಕರ, ಮೂಕಳ್ಳಿ ಮಹದೇವಸ್ವಾಮಿ ಕಮಲಮ್ಮ, ಪಟೇಲ್ ಶಿವಮೂರ್ತಿ, ಕುರುಬೂರು ಸಿದ್ದೇಶ್, ಹಂಪಾಪುರ ರಾಜೇಶ, ಕಬಿನಿ ಮಾದಪ್ಪ, ವೆಂಕಟೇಶ್ ಪ್ರದೀಪ ಸುನಿಲ್, ಮಾದೇವ, ರಂಗರಾಜು, ಪುಟ್ಟೇಗೌಡನಹುಂಡಿ ಕೆಂಡಗಣ್ಣಸ್ವಾಮಿ, Derobrod, ರಾಜು ಪರಶಿವಮೂರ್ತಿ, ಮಂಜುನಾಥ, ಸುಂದ್ರಪ್ಪ ರೇವಣ್ಣ, ಮಹೇಶ, ಸಾತಗಳ ಬಸವರಾಜು ಉಮೇಶ, ಮಾಲಿಂಗನಾಯಕ ಇದ್ದರು. ಆತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್,..

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ಬರ ಪರಿಹಾರ ಎಕರೆಗೆ 25 ಸಾವಿರ ನೀಡುವುದರ ಬಗ್ಗೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ ಎಕರೆಗೆ 25 ಸಾವಿರ ನೀಡುವುದರ ಬಗ್ಗೆ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ..

➡️ ಹತ್ತಿ ಬೆಳಗಾರರಿಗೆ ಶಾಕಿಂಗ್ ನ್ಯೂಸ್! ಕೇವಲ 6800 ಇಂದ 7300 ವರೆಗೆ ದರ ಕ್ವಿ0ಟಲ್ ಗೆ https://krushivahini.com/2023/12/05/cottan-rate-decreased/

➡️ಈ ಪಟ್ಟಿಯಲ್ಲಿ ಇರುವ ರೈತರಿಗೆ ಬರ ಪರಿಹಾರ ಹಣ ಬರುವುದಿಲ್ಲ! 🛑 ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದೆಯೇ ಚೆಕ್ ಮಾಡಿಕೊಳ್ಳಿ 🙏🏻 https://krushivahini.com/2023/12/04/reason-why-these-farmers-do-not-get-drought-relief/

➡️ ಜಂಟಿ ಖಾತೆ ಇದ್ದರೆ ನಿಮಗೆ ಬರ ಪರಿಹಾರ ಹಣ ಬರುವುದಿಲ್ಲ! ⚫ ಈ ಕೆಲಸ ಮಾಡಿದವರಿಗೆ ಮಾತ್ರ ಬರ ಪರಿಹಾರ ಹಣ ಬರುತ್ತದೆ!!.
🛑 ಈ ಪಟ್ಟಿಯಲ್ಲಿ ಇರುವ ರೈತರಿಗೆ ಪರಿಹಾರ ಹಣ ಬರುತ್ತದೆ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ🙏🏻!! https://krushivahini.com/2023/12/04/how-to-get-drought-relief-if-you-have-joint-account/

Leave a Reply

Your email address will not be published. Required fields are marked *