How to get drought relief If you have joint account :-
ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇಂದಿನ ದಿನ ನಾವು ಈ ಲೇಖನದಲ್ಲಿ ಈಗಾಗಲೇ ನಿಮಗೆ ತಿಳಿದಿರುವ ಹಾಗೆ ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ನಿಮ್ಮ ಹೊಲದ ಎಲ್ಲಾ ಸರ್ವೆ ನಂಬರನ್ನು ದಾಖಲಿಸಿದರೆ ಮಾತ್ರ ನಿಮಗೆ ಬರ ಪರಿಹಾರವನ್ನು ನೀಡುತ್ತಾರೆ. ನಿಮಗೆ ಬರ ಪರಿಹಾರದ ಹಣ ಬೇಕಾಗಿದ್ದರೆ ನಿಮ್ಮ ಹೊಲದ ಪಹಣಿಯ ಜೊತೆ ಫ್ರೂಟ್ಸ್ ಐಡಿ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಈ ಕೆಲಸವನ್ನು ನೀವು ಮಾಡದಿದ್ದರೆ ನಿಮಗೆ ಖಂಡಿತವಾಗಿಯೂ ಬರ ಪರಿಹಾರ ಬರುವುದಿಲ್ಲ ತಿಳಿಯಿರಿ ರೈತರೇ,..
ಜಂಟಿ ಖಾತೆ ಇದ್ದವರಿಗೆ ಪರಿಹಾರ ಹಣ ಬರುತ್ತದೆ ಇಲ್ಲವೋ ಚೆಕ್ ಮಾಡಿಕೊಳ್ಳಿ..??
ಈಗಾಗಲೇ ಬರ ಪರಿಹಾರ ಹಣವನ್ನು ಪಡೆಯಲು ರೈತರಿಗೆ ಸರ್ಕಾರದಿಂದ ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ಎಲ್ಲಾ ಸರ್ವೆ ನಂಬರನ್ನು ದಾಖಲಿಸಲು ಸಮಯವನ್ನು ನಿಗದಿ ಮಾಡಲಾಗಿದೆ. ಅದೇ ರೀತಿಯಾಗಿ ರೈತರು ಗಮನಿಸಬೇಕು ನಿಮ್ಮ ಪಹಣಿಯು ಜಂಟಿ ಖಾತೆಯಲ್ಲಿ ಇದ್ದರೆ ನಿಮಗೆ ಪರಿಹಾರ ಹಣ ಸಿಗುತ್ತದೆಯೋ ಇಲ್ಲವೋ,👇🏻
ನಿಮ್ಮದು ಜಂಟಿ ಖಾತೆ ಇದ್ದರೆ ನಿಮ್ಮ ಜಂಟಿ ಖಾತೆಗೆ ಇನ್ನೊಬ್ಬರು ಹಕ್ಕುದಾರರು ಇದ್ದರೆ ಅವರಲ್ಲಿ ನೀವು ಒಪ್ಪಿಗೆ ಪತ್ರವನ್ನು ತಂದರೆ ತಪ್ಪದೇ ನಿಮಗೆ ಬರ ಪರಿಹಾರ ಹಣ ಬರುತ್ತದೆ. ಒಂದು ವೇಳೆ ನಿಮ್ಮ ಜಂಟಿ ಖಾತೆಯಲ್ಲಿ ಇರುವ ಇನ್ನೊಬ್ಬರು ಹಕ್ಕುದಾರರು ಒಪ್ಪದೇ ಇದ್ದ ಕಾಲದಲ್ಲಿ ನಿಮಗೆ ಯಾವುದೇ ತರಹದ ಬರ ಪರಿಹಾರವಾಗಲಿ ಬರುವುದಿಲ್ಲ.
ಆದರೆ ರೈತರೇ ಬಹುಮುಖ್ಯವಾದ ಮಾಹಿತಿ ನಿಮ್ಮ ಹೊಲದ ಪಹಣಿಯೊಂದಿಗೆ ಫ್ರೂಟ್ಸ್ ಐಡಿ ಜೋಡಣೆಯಾಗುವುದು ಕಡ್ಡಾಯ. ಒಂದು ವೇಳೆ ನಿಮ್ಮ ಹೊಲದ ಪಹಣಿಯ ಜೊತೆ ಫ್ರೂಟ್ಸ್ ಐಡಿ ಜೋಡಣೆಯಾಗದಿದ್ದರೆ ನಿಮಗೆ ಪರಿಹಾರ ಹಣ ಸಿಗುವುದಿಲ್ಲ ತಿಳಿಯಿರಿ ರೈತರೇ
ಎಲ್ಲ ರೈತರು ನೋಡಲೇಬೇಕಾದ ಮಾಹಿತಿ ಇದು
ರೈತ ಬಾಂಧವರೇ ಈ ಕೂಡಲೇ ನಿಮ್ಮ ಹೊಲದ ಪಹಣಿಯೊಂದಿಗೆ ಫ್ರೂಟ್ಸ್ ಐಡಿಯನ್ನು ಹಾಗೂ ಹೊಲದ ಪಹಣಿ ಜೊತೆ ಲಿಂಕ್ ಮಾಡಬೇಕು. ಇಲ್ಲವಾದಲ್ಲಿ ನಿಮಗೆ ಬರ ಪರಿಹಾರದ ಹಣ ಬರುವುದಿಲ್ಲ. ಹಾಗಾಗಿ ತಪ್ಪದೇ ನಿಮ್ಮ ಹೊಲದ ಪಹಣಿಯ ಜೊತೆ ಫ್ರೂಟ್ಸ್ ಐಡಿಯನ್ನು ಲಿಂಕ್ ಮಾಡಿ. ನಿಮ್ಮ ನಿಮ್ಮ ಹೊಲದ ಎಲ್ಲಾ ಸರ್ವೆ ನಂಬರನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿ. ತಪ್ಪದೇ ಬರ ಪರಿಹಾರವನ್ನು ಪಡೆಯಿರಿ.
ಒಂದು ವೇಳೆ ನಿಮ್ಮ ಹೊಲ 8 ಅಥವಾ 10 ಎಕರೆ ಇದ್ದು ನೀವು ಕೇವಲ ಎರಡು ಎಕರೆ ಹೊಲವನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿದರೆ ನಿಮಗೆ ಕೇವಲ ಎರಡು ಎಕರೆಗೆ ಸೀಮಿತವಾದ ಬರ ಪರಿಹಾರದ ಹಣವನ್ನು ಹಾಕುತ್ತಾರೆ. ಆದಕಾರಣ ನಿಮ್ಮ ಸರ್ವೇ ನಂಬರ್ ಗಳನ್ನು ತಪ್ಪದೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿ. ನಿಮ್ಮ ಎಷ್ಟು ಸರ್ವೇ ನಂಬರ್ ಗಳು ಫ್ರೂಟ್ಸ್ ಅಡಿಯಲ್ಲಿ ದಾಖಲಾಗಿವೆ ಇಲ್ಲಿ ಚೆಕ್ ಮಾಡಿಕೊಳ್ಳಿ. ದಯವಿಟ್ಟು ಬರ ಪರಿಹಾರವನ್ನು ಪಡೆಯಿರಿ..
➡️ ಈ ಪಟ್ಟಿಯಲ್ಲಿ ಇರುವ ರೈತರಿಗೆ ಮಾತ್ರ ಎಷ್ಟು ಬರ ಪರಿಹಾರ ಹಣ ಜಮೆಯಾಗಲಿದೆ..
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..
ಯಾವಾಗ ರೈತರ ಖಾತೆಗೆ ಮೊದಲ ಕಂತಿನ ಪರಿಹಾರ ಹಣ ಬರುತ್ತದೆ??
ಅರ್ಹ ರೈತರಿಗೆ ಎರಡು ಸಾವಿರ ರು.ವರೆಗೆ ಪರಿಹಾರ ನೀಡಲು ರಾಜ್ಯ ಸರಕಾರ ನಿರ್ಧಾರ
ಬರ: ಮೊದಲ ಕಂತಿನ ಬೆಳೆಹಾನಿ ಪರಿಹಾರ
ಬೆಂಗಳೂರು: ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರದ ನೆರವಿಗಾಗಿ ಕಾಯುತ್ತಿದ್ದ ರಾಜ್ಯ ಸರಕಾರ, ಈವರೆಗೆ ನೆರವು ಬಾರದೇ ಇರುವುದರಿಂದ ರಾಜ್ಯದ ವತಿಯಿಂದಲೇ 2,000 ರು. ವರೆಗೆ ಬೆಳೆ ಪರಿಹಾರ ವಿತರಿಸಲು ಮುಂದಾಗಿದೆ.
• ಯಾವ ತಾಲೂಕಿಗೆ ಎಷ್ಟು ಬರ ಪರಿಹಾರ ಬರುತ್ತದೆ??
ಮುಂದಿನ ನಾಲೈದು ದಿನದಲ್ಲಿ ಅರ್ಹ ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ಆರಂಭ!
223 ತಾಲೂಕು ಗಳಲ್ಲಿನ ಅರ್ಹ ರೈತರ ಬಗ್ಗೆ ಮಾಹಿತಿ ಪಡೆದು ಪರಿಹಾರ ವಿತರಣೆ ಶುರು
• ರಾಜ್ಯದಲ್ಲಿ ಭೀಕರ ಬರವಿದ್ದರೂ, ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ನಮ್ಮ ರೈತರು ಹಾಗೂ ಜನರನ್ನು ಉಳಿಸುವ ಕೆಲಸವನ್ನು ಸರಕಾರ ಮಾಡಬೇಕಿದೆ. ಆದ್ದರಿಂದ ಕೇಂದ್ರದಿಂದ ಹಣ ಬರುವ ತನಕ ಕಾಯದೆ, ರಾಜ್ಯ ಸರಕಾರ ಮೊದಲ ಕಂತು ಬಿಡುಗಡೆ ಮಾಡಿದೆ.
ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻
https://landrecords.karnataka.gov.in/PariharaPayment/
ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ..
ಬರ ಪರಿಹಾರ ಪಡೆಯಲು ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಪ್ರೋಟ್ಸ್ ತಂತ್ರಾಂಶದಲ್ಲಿ ದಾಖಲಿಸಬೇಕು‘ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಬರ ಪರಿಹಾರ ಬೇಕೇ ಈ ಕೆಲಸ ತಪ್ಪದೇ ಮಾಡಿ?👇🏻
ಇಂದಿನ ಲೇಖನದಲ್ಲಿ ನಾವು ಬರ ಪರಿಹಾರ ರೈತರಿಗೆ ಎಷ್ಟು ಬರುತ್ತದೆ ಹಾಗೂ ಬರ ಪರಿಹಾರ ಬರಬೇಕಾದರೆ ಈ ಕೆಲಸವನ್ನು ರೈತರು ಕಡ್ಡಾಯವಾಗಿ ಮಾಡಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರೈತರಿಗೆ ಎಷ್ಟು ಬರ ಪರಿಹಾರ ಬರುತ್ತದೆ? ನಿಮಗೆ ಬರ ಪರಿಹಾರ ಯಾವ ಆಧಾರದ ಮೇಲೆ ಕೊಡುತ್ತಾರೆ?? ರೈತರಿಗೆ ಎಷ್ಟು ಹಣ ಸಿಗುತ್ತದೆ?? ಇಲ್ಲಿ ನೋಡಿರಿ 👇🏻
ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ರೈತರು ತಮ್ಮ ಹೆಸರು, ಬ್ಯಾಂಕ್ ಖಾತೆ ವಿವರಗಳನ್ನು ಈಗಾಗಲೇ ದಾಖಲು ಮಾಡಿದ್ದಾರೆ. ಆದರೆ, ಒಬ್ಬ ರೈತನ ಬಳಿ ಎಷ್ಟು ಎಕರೆ ಜಮೀನು ಇದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸರ್ಕಾರ ಬರ ಪರಿಹಾರ ಪಾವತಿಸುವಾಗ ರೈತರು ಫ್ರಟ್ಸ್ ತಂತ್ರಾಂಶದಲ್ಲಿ ಎರಡು ಎಕರೆ ನಮೂದಿಸಿದ್ದರೆ ಪರಿಹಾರ ಅಷ್ಟಕ್ಕೆ ಮಾತ್ರ ಸಿಗಲಿದೆ. ಒಬ್ಬ ರೈತನಿಗೆ ಐದು ಎಕರೆ ಜಮೀನು ಇದ್ದು, ಸಂಪೂರ್ಣ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಿದ್ದರೆ ಐದು ಎಕರೆಗೂ ಪರಿಹಾರ ಸಿಗಲಿದೆ. ಆದಕಾರಣ, ಎಲ್ಲ ರೈತರು ಕೃಷಿ ಇಲಾಖೆಗೆ ತೆರಳಿ ತಮ್ಮ ಜಮೀನಿನ ಮಾಹಿತಿಯನ್ನು ನವೆಂಬರ್ ಅಂತ್ಯದ ಒಳಗೆ ನಮೂದಿಸಬೇಕು’ ಎಂದು ತಿಳಿಸಿದರು.
👉🏻ರೈತರು ಈ ಕೆಲಸ ಮಾಡಿದಲ್ಲಿ ಮಾತ್ರ ನಿಮಗೆ ಹಣ ಜಮೆಯಾಗುತ್ತದೆ??
ರೈತರು ತಪ್ಪದೆ ಈ ಮಹತ್ವದ ಮಾಹಿತಿಯನ್ನು ಪಡೆದು ನಿಮ್ಮ ಮೊಬೈಲ್ ನಲ್ಲಿ ಫ್ರೂಟ್ಸ್ ಐಡಿಯನ್ನು ಜನರೇಟ್ ಮಾಡಿ ನಿಮಗೆ ಎಷ್ಟು ಎಕರೆ ಹೊಲ ಇದೆ ಅದನ್ನು ನಿಮ್ಮ ಫ್ರೂಟ್ಸ್ ಐಡಿಯಲ್ಲಿ ಅಳವಡಿಸದಿದ್ದರೆ ನಿಮಗೆ ಪರಿಹಾರ ಹಣ ಬರುವುದಿಲ್ಲ.
ಆಧಾರ್ ನಂಬರ್ ಹಾಕಿ ನಿಮ್ಮ FID ತಿಳಿದುಕೊಳ್ಳಿ
ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ?
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇಸ್ಲಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರಟ್ಸ್ ನಂಬರ್??
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID(ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ಎಲ್ಲಾ ವಿವರವನ್ನು ಒಳಗೊಂಡಿರುವ ಸಾಧಾನವಾಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕರು ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನೋಂದಣಿ ಹೇಗೆ? ಇಲ್ಲಿ ನೋಡಿರಿ
ನಿಮ್ಮ ಹತ್ತಿರದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳಲ್ಲಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟ್ರೀಕೃತ ಬ್ಯಾಂಕ್‌ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ, ಮೊಬೈಲ್ ನಂಬರ್
ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.
ಅದಕ್ಕಾಗಿ ಕೂಡಲೇ ಫೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ.
ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.
ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.
ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ ) ನಿಮಗೆ ಸಿಗಲಿದೆ.
ಹೀಗೆ ಬಂದಿರುವ FID ಯನ್ನು ಕೃಷಿ ಇಲಾಖೆ,ರೇಷ್ಮೆ, ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ನಂತರ FID ಯನ್ನು ಪಿ ಎಂ ಕಿಸಾನ್ ಯೋಜನೆ, ಬೆಳೆಸಾಲ, ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ನೀವು ಈ FID ಅನ್ನು ಬಳಸಬಹುದು.
‘ಜಿಲ್ಲೆಯಲ್ಲಿ 30 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸಲಾಗಿದೆ. ಜನವಸತಿ ಇದ್ದೂ ಕಂದಾಯ ಪಟ್ಟಿಗೆ ಸೇರದ ಮೂರು ಗ್ರಾಮಗಳು ಇನ್ನೂ ಉಳಿದುಕೊಂಡಿವೆ. ಅವುಗಳನ್ನು ಕಂದಾಯ ಗ್ರಾಮಕ್ಕೆ ಸೇರಿಸಲು ಪ್ರಸ್ತಾವ ಕಳಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಕಂದಾಯ ಇಲಾಖೆ ಜನಪರವಾಗಿಯೂ, ವೇಗವಾಗಿಯೂ ಕೆಲಸ ಮಾಡುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದರು.
ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/BV4GiFXeLXJKfXFJFZSiGj
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.
ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
➡️ ಈ ಜಿಲ್ಲೆಯ ರೈತರಿಗೆ ಬೆಳೆವಿಮೆ ಹಣವನ್ನು ಜಮೆ ಮಾಡಲಾಗಿದೆ!! ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದೆ ಚೆಕ್ ಮಾಡಿಕೊಳ್ಳಿ https://krushivahini.com/2023/12/06/crop-insurance-deposited-of-rs-18305/
➡️ ಹತ್ತಿ ಬೆಳಗಾರರಿಗೆ ಶಾಕಿಂಗ್ ನ್ಯೂಸ್! ಕೇವಲ 6800 ಇಂದ 7300 ವರೆಗೆ ದರ ಕ್ವಿ0ಟಲ್ ಗೆ https://krushivahini.com/2023/12/05/cottan-rate-decreased/
➡️ಈ ಪಟ್ಟಿಯಲ್ಲಿ ಇರುವ ರೈತರಿಗೆ ಬರ ಪರಿಹಾರ ಹಣ ಬರುವುದಿಲ್ಲ! 🛑 ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದೆಯೇ ಚೆಕ್ ಮಾಡಿಕೊಳ್ಳಿ 🙏🏻 https://krushivahini.com/2023/12/04/reason-why-these-farmers-do-not-get-drought-relief/
➡️ ಜಂಟಿ ಖಾತೆ ಇದ್ದರೆ ನಿಮಗೆ ಬರ ಪರಿಹಾರ ಹಣ ಬರುವುದಿಲ್ಲ! ⚫ ಈ ಕೆಲಸ ಮಾಡಿದವರಿಗೆ ಮಾತ್ರ ಬರ ಪರಿಹಾರ ಹಣ ಬರುತ್ತದೆ!!.
🛑 ಈ ಪಟ್ಟಿಯಲ್ಲಿ ಇರುವ ರೈತರಿಗೆ ಪರಿಹಾರ ಹಣ ಬರುತ್ತದೆ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ🙏🏻!! https://krushivahini.com/2023/12/04/how-to-get-drought-relief-if-you-have-joint-account/