Bara parihara 2023 :-

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಈಗಾಗಲೇ ಬಹಳಷ್ಟು ಜನ ರೈತರು ಬೆಳೆ ವಿಮೆ ಹಣವನ್ನು ಪಾವತಿ ಮಾಡಿದ್ದಾರೆ. ಹಾಗಿದ್ದರೆ ಬೆಳೆ ವಿಮೆಯ ಹಣ ಈಗಾಗಲೇ 22 ಲಕ್ಷ ರೈತರಿಗೆ ಬೆಳೆವಿಮೆ ಹಣ ಬಿಡುಗಡೆಯಾಗಿದೆ ಯಾವ ರೈತರಿಗೆ ಎಷ್ಟು ಬೆಳೆ ವಿಮೆ ಹಾಗೂ ಎಷ್ಟು ಬರ ಪರಿಹಾರ ಹಣ ಜಮೆಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಓದಿರಿ.

ದಯವಿಟ್ಟು ಈ ಲೇಖನವನ್ನು ಕೊನೆಯವರೆಗೆ ಓದಿ ತಪ್ಪದೇ ಶೇರ್ ಮಾಡಿ 🙏🏻🙏🏻..

ಬೆಂಗಳೂರು: ಬರ ಘೋಷಿತ 223 ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ.ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ರೈತರಿಗೆ ಮೊದಲ ಬರ ಪರಿಹಾರ: ಮುಂದಿನ ವಾರದೊಳಗೆ ವಿತರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ರೂ.2,000 ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

➡️ ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಬರುತ್ತದೆ??

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಪರಿಹಾರ ಹಣ ಬರುತ್ತದೆ.. ಹಾಗೂ ನಿಮಗೆ ಬಂದಿರುವ ಹಣದ ಬಗ್ಗೆ ಸಂಪೂರ್ಣ ಮಾಹಿತಿಯೂ ನಿಮಗೆ ಸಿಗುತ್ತದೆ..

ಯಾವಾಗ ರೈತರ ಖಾತೆಗೆ ಮೊದಲ ಕಂತಿನ ಪರಿಹಾರ ಹಣ ಬರುತ್ತದೆ??

ಅರ್ಹ ರೈತರಿಗೆ ಇದೇ ವಾರದ ಒಳಗೆ ಎರಡು ಸಾವಿರ ರು.ವರೆಗೆ ಪರಿಹಾರ ನೀಡಲು ರಾಜ್ಯ ಸರಕಾರ ನಿರ್ಧಾರ

ಬೆಂಗಳೂರು: ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರದ ನೆರವಿಗಾಗಿ ಕಾಯುತ್ತಿದ್ದ ರಾಜ್ಯ ಸರಕಾರ, ಈವರೆಗೆ ನೆರವು ಬಾರದೇ ಇರುವುದರಿಂದ ರಾಜ್ಯದ ವತಿಯಿಂದಲೇ 2,000 ರು. ವರೆಗೆ ಬೆಳೆ ಪರಿಹಾರ ವಿತರಿಸಲು ಮುಂದಾಗಿದೆ.

ಯಾವ ತಾಲೂಕಿಗೆ ಎಷ್ಟು ಬರ ಪರಿಹಾರ ಬರುತ್ತದೆ??

ಮುಂದಿನ ನಾಲೈದು ದಿನದಲ್ಲಿ ಅರ್ಹ ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ಆರಂಭ!

223 ತಾಲೂಕು ಗಳಲ್ಲಿನ ಅರ್ಹ ರೈತರ ಬಗ್ಗೆ ಮಾಹಿತಿ ಪಡೆದು ಪರಿಹಾರ ವಿತರಣೆ ಶುರು

• ರಾಜ್ಯದಲ್ಲಿ ಭೀಕರ ಬರವಿದ್ದರೂ, ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ನಮ್ಮ ರೈತರು ಹಾಗೂ ಜನರನ್ನು ಉಳಿಸುವ ಕೆಲಸವನ್ನು ಸರಕಾರ ಮಾಡಬೇಕಿದೆ. ಆದ್ದರಿಂದ ಕೇಂದ್ರದಿಂದ ಹಣ ಬರುವ ತನಕ ಕಾಯದೆ, ರಾಜ್ಯ ಸರಕಾರ ಮೊದಲ ಕಂತು ಬಿಡುಗಡೆ ಮಾಡಿದೆ.

ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ..

ಈ ಕೆಳಗೆ ತೋರಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನಿಮಗೆ ಮಧ್ಯಂತರ ಬೆಳೆವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂಬ ಮಾಹಿತಿಯನ್ನು ಪಡೆಯಿರಿ 👇🏻👇🏻🙏🏻

➡️ ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ಈ ಮೇಲೆ ಕಾಣುವ ಮುಖಪುಟದಲ್ಲಿ ನಿಮ್ಮ ಪ್ರೊಪೋಸಲ್ ಸಂಖ್ಯೆ ಮೊಬೈಲ್ ನಂಬರ್ ಇಲ್ಲವಾದಲ್ಲಿ ಆಧಾರ್ ಕಾರ್ಡ್ ನಂಬರನ್ನು ನಮೂದಿಸಿ ಸೀಸನ್ ಕ್ಲಿಕ್ ಮಾಡಿರಿ..

Madyantara bele parihara – ಹೊಸಪೇಟೆ (ವಿಜಯನಗರ): ಬರಗಾಲದಿಂದ ತತ್ತರಿಸಿರುವ ವಿಜಯನಗರ ಜಿಲ್ಲೆಯ ರೈತರಿಗೆ ಕೊನೆಗೂ ಒಂದು ಸಂತಸದ ಸುದ್ದಿ ಲಭಿಸಿದ್ದು, ಬೆಳೆ ವಿಮೆ ಮಾಡಿಸಿದ 26,254 ಕೃಷಿಕರಿಗೆ ಮುಂಗಾರು ಹಂಗಾಮಿನ ಮಧ್ಯಂತರ ಬೆಳೆ ಪರಿಹಾರವಾಗಿ 719.27 ಕೋಟಿ ವಿಮಾ ಪರಿಹಾರ ಹಣ ಸಂದಾಯವಾಗಿದೆ.

ಮುಂಗಾರು ಹಂಗಾಮಿನ ಬೆಳೆ ನಷ್ಟದ ಸಮೀಕ್ಷೆಯನ್ನು ಕಳೆದ ತಿಂಗಳು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಗಳು ಹಾಗೂ ವಿಮಾ ಕಂಪನಿಗಳು ಜಂಟಿಯಾಗಿ ನಡೆಸಿದ್ದವು. ಅದರ ವರದಿಯನ್ನು ಆಧರಿಸಿ ಇದೀಗ ಮಧ್ಯಂತರ ವಿಮಾ ಪರಿಹಾರ ದೊರೆತಿದೆ.

ತುಮಕೂರು: ಇಡೀ ಜಿಲ್ಲೆಗೆ ₹13 ಕೋಟಿ ಬೆಳೆ ಪರಿಹಾರ

ಫಸಲ್ ಬಿಮಾ ಯೋಜನೆಯಲ್ಲಿ ಬೆಳೆ ವಿಮೆ ಪರಿಹಾರ ನೀಡಲು ಆರಂಭ

ತುಮಕೂರು: ತೀವ್ರ ಬರದಿಂದಾಗಿ ಮುಂಗಾರು ಹಂಗಾಮಿನಲ್ಲಿ ಬೆಳೆ ಒಣಗಿ ನಷ್ಟವಾಗಿದ್ದು, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಶೇ 25ರಷ್ಟು ಪರಿಹಾರ ನೀಡಲು ಜಿಲ್ಲಾ ಆಡಳಿತ ಮುಂದಾಗಿದೆ.

ಕೊಪ್ಪಳದ ರೈತರಿಗೆ ಬಂತು ಫಸಲ್ ಬಿಮಾ ವಿಮಾ ಯೋಜನೆಯ ಮಧ್ಯಂತರ ಪರಿಹಾರ: ಸಂಕಟದಲ್ಲಿರುವ ಅನ್ನದಾತನಿಗೆ ಆಸರೆ..

ಈ ಜಿಲ್ಲೆಯ 33,375 ರೈತರಿಗೆ ವಿಮಾ ಕಂಪನಿಯಿಂದ 26.17 ಕೋಟಿ ರೂ.ಮಧ್ಯಂತರ ಪರಿಹಾರ ಬಂದಿದೆ..

ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಬೆಳೆ ನಷ್ಟಕ್ಕೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡಬೇಕು ಎಂದು ರೈತರು ಸತತವಾಗಿ ಒತ್ತಾಯಿಸುತ್ತಲೇ ಬಂದಿದ್ದಾರೆ. ಮುಂಗಾರು ಬೆಳೆ ಹಾಳಾಗಿ ಹಲವು ತಿಂಗಳುಗಳೇ ಕಳೆದಿದ್ದರೂ ಈವರೆಗೂ ಪರಿಹಾರ ನೀಡಿಲ್ಲ. ಈಗಲೂ ಪೂರ್ಣ ಪ್ರಮಾಣದಲ್ಲಿ ರೈತರಿಗೆ ಪರಿಹಾರ ನೀಡುತ್ತಿಲ್ಲ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ನೋಂದಾಯಿಸಿಕೊಂಡಿದ್ದ ರೈತರಿಗಷ್ಟೇ ಪರಿಹಾರ ಸಿಗಲಿದೆ.

> ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿದೆ ನಿಮ್ಮ ಖಾತೆಗೆ ಎಷ್ಟು ಹಣ ಬಂದಿದೆ ಚೆಕ್ ಮಾಡಿಕೊಳ್ಳಿ..

ಮೊದಲಿಗೆ ಈ ಕೆಳಕಂಡ ಲಿಂಕ್ ಅನ್ನು ಒತ್ತಿರಿ

https://ahara.kar.nic.in/Home/EServices

ನಂತರ ಮುಖಪುಟದಲ್ಲಿ ಎಡಭಾಗದಲ್ಲಿರುವ ಕಾಣುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿರಿ

ನಂತರ ಕೆಳಗಡೆ ಕಾಣುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿರಿ

ನಂತರ ಕೆಳಗಡೆ ಕಾಣುವ ಡಿಬಿಟಿ ಸ್ಥಿತಿ ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಿ

ನಂತರ ಅಲ್ಲಿ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿಕೊಳ್ಳಿ..

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿರಿ

ನಂತರ ಮುಖಪುಟದಲ್ಲಿ ಕಾಣುವ ಹಾಗೆ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಹೆಸರು, member ID,ಕುಟುಂಬ ಸದಸ್ಯರ ಸಂಖ್ಯೆ,ಹಾಗೂ ನಿಮಗೆ ಸಿಗುವ ಅಕ್ಕಿ ಎಷ್ಟು ಹಾಗೂ ನಿಮ್ಮ ಖಾತೆಗೆ ಎಷ್ಟು ಜಮ ಆದ ಹಣದ ಮಾಹಿತಿ ನಿಮಗೆ ಕಾಣುತ್ತದೆ..

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ಬರ ಪರಿಹಾರ ಇವರಿಗೆ ಬರುತ್ತದೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ ಹಣ ಜಮೆ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *