Farmers loan waiver up to Rs 2 lakh :- ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಸಂಕಷ್ಟಕ್ಕೊಳಗಾ ಗಿರುವ ರೈತರ ನೆರವಿಗೆ ಸರ್ಕಾರವು ಧಾವಿಸಬೇಕಾದ ಅಗತ್ಯವಿದ್ದು, ಎರಡು ಲಕ್ಷ ರು.ವರೆಗಿನ ಕೃಷಿ ಸಾಲಮನ್ನಾ ಮಾಡುವುದರ ಜತೆಗೆ ತಕ್ಷಣ 10 ಸಾವಿರ ಕೋಟಿ ರು. ಅನುದಾನವನ್ನು ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಗುರುವಾರ ಬರಗಾಲ ವಿಷಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಪ್ರಚಾರದ ಮೇಲೆ ಇರುವ ಆಸಕ್ತಿ ರೈತರ ಬಗ್ಗೆ ಇಲ್ಲ.
ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಅಸಡ್ಡೆತನ ಆಶ್ಚರ್ಯವನ್ನುಂಟು ಮಾಡಿದೆ. ಕಳೆದ ಆರು ತಿಂಗಳಿನಿಂದ ಕೇವಲ ಗ್ಯಾರಂಟಿಗಳ ಬಗ್ಗೆಯೇ ಕೆಲಸ ಮಾಡುತ್ತಿರುವ ಈ ಸರ್ಕಾರ, ಆರ್ಥಿಕ ಹೊರೆಯನ್ನು ತನ್ನ ಮೇಲೆ ಎಳೆದುಕೊಂಡು ರೈತರಿಗೆ ಪ್ರತಿಯೊಂದಕ್ಕೂ ಬರೆ ಎಳೆಯುತ್ತಿದೆ. ಬೆಳೆ ನಾಶದಿಂದ ಅತೀವ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಸಾಲಮನ್ನಾ ಮೂಲಕ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
👇🏻 ಈ ಕೆಳಗೆ ತೋರಿಸುವ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಬೆಳೆ ಸಾಲ ಮನ್ನಾ ಆಗಿದೆ ಎಂದು ಅರ್ಥ
ನಿಮಗೆ ತಿಳಿದ ಹಾಗೆ 2018 ರಲ್ಲಿ 1 ಲಕ್ಷ ರೂಪಾಯಿಯವರೆಗೆ ರೈತರಿಗೆ ಬೆಳೆ ಸಾಲ ಮನ್ನಾ ಘೋಷಣೆ ಮಾಡಲಾಗಿತ್ತು. ಆಗ ತಾಂತ್ರಿಕ ಸಮಸ್ಯೆ ಯಿಂದ ಕೆಲವು ರೈತರಿಗೆ ಸಾಲಮನ್ನಾ ಭಾಗ್ಯ ಸಿಕ್ಕಿರಲಿಲ್ಲ. ನಂತರ ಕೆಲವು ರೈತರ ದಾಖಲೆಗಳು ಸರಿಪಡಿಸಿದ್ದರಿಂದ ಅವರಿಗೆ ಸಾಲಮನ್ನಾ ಆಗಿತ್ತು. ಆದರೆ ಇನ್ನೂ ಕೆಲವು ರೈತರಿಗೆ ಸಾಲ ಮನ್ನಾ ಆಗಿಲ್ಲ. ಯಾವ ಯಾವ ರೈತರು ಸಾಲಮನ್ನಾ ಪಟ್ಟಿಯಲ್ಲಿದ್ದಾರೆ ಎಂಬುದನ್ನು ಈ ಕೆಳಗಿನಂತೆ ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ 👇🏻
ವಾಣಿಜ್ಯ ಬ್ಯಾಂಕ್ ಸಾಲ ಪಡೆದ ರೈತರ ಪಟ್ಟಿ ಯನ್ನು ಇಲ್ಲಿ ನೋಡಿ?? ನಿಮ್ಮ ಹೆಸರಿದೆಯೆ ಇಲ್ಲಿ ಚೆಕ್ ಮಾಡಿಕೊಳ್ಳಿ..
ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ
ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..
* ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ನಿಮ್ಮ ಸಾಲ ಮನ್ನಾ ಎಷ್ಟು ಆಗಿದೆ ಎಂದು ಇಲ್ಲಿ ಚೆಕ್ ಮಾಡಿಕೊಳ್ಳಿ..
ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ
ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..
2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಬೆಳೆ ಸಾಲಮನ್ನಾ ಘೋಷಣೆ ಮಾಡಿದ್ದರು. ಆ ಬೆಳೆ ಸಾಲಮನ್ನಾ ವರದಿಯನ್ನು ಚೆಕ್ ಮಾಡಬಹುದು. ಅದಾದ ನಂತರ ಬಿಜೆಪಿ ಸರ್ಕಾರವಾಗಲಿ ಅಥವಾ ಕಾಂಗ್ರೆಸ್ ಸರ್ಕಾರವಾಗಲಿ ರೈತರ ಬೆಳೆ ಸಾಲಮನ್ನಾ ಘೋಷಣೆ ಮಾಡಿಲ್ಲ. ಅದ ಕಾರಣ ಈಗ ರೈತರಿಗೆ ಯಾವುದೇ ತರಹದ ಬೆಳೆ ಸಾಲಮನ್ನಾಆಗಿಲ್ಲ.
➡️ ನಿಮಗೆ ಇನ್ನೂ ಆದರೂ ಬೆಳೆ ಸಾಲ ಮನ್ನಾ ಆಗಿಲ್ಲವೇ? ಏಕೆ ಬೆಳೆ ಸಾಲ ಮನ್ನಾ ಆಗಿಲ್ಲ?? ತಪ್ಪದೆ ತಿಳಿಯಿರಿ
ಬಹಳಷ್ಟು ರೈತರು ನಮ್ಮ ಬೆಳೆ ಸಾಲ ಮನ್ನಾ ಆಗಿಲ್ಲ ಎಂದು ಹೇಳುತ್ತಾರೆ. ಆದರೆ ಸಾಲ ಮನ್ನಾ ಮಾಡಲು ಕೆಲವು ದಾಖಲೆ ಮತ್ತು ಅರ್ಹತೆಗಳು ಮುಖ್ಯ,
ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಸಾಲ ಮನ್ನಾ ಆಗಲು ಬೇಕಾದ ದಾಖಲಾತಿಗಳು ಹಾಗೂ ಅರ್ಹತೆಗಳನ್ನು ಇಲ್ಲಿ ನೋಡಿ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸಾಲ ಮನ್ನಾ ಆಗಲು ಬೇಕಾದ ಅರ್ಹತೆ ಹಾಗೂ ದಾಖಲಾತಿಗಳನ್ನು ನೋಡಬಹುದು. 👇🏻
https://mahitikanaja.karnataka.gov.in/department
ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..
ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ
ನಂತರ clws ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ಮುಂದಿನ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ, ಮತ್ತು ಬ್ಯಾಂಕ್ ಸೆಲೆಕ್ಟ್ ಮಾಡಿ, ಸಲ್ಲಿಸು ಮೇಲೆ ಕ್ಲಿಕ್ ಮಾಡಿ.
ನಂತರ ಈ ಕೆಳಗೆ ಸೂಚಿಸಿರುವ ಸಾಲ ಮನ್ನಾ ಅರ್ಹತೆ ಹಾಗೂ ದಾಖಲೆಗಳನ್ನು ನೀವು ನೋಡಬಹುದು.ಹಾಗೂ ಸಾಲ ಮನ್ನಾ ಸ್ಥಿತಿ ಗತಿ ಯನ್ನು ಅಲ್ಲಿ ಕಾಣುತ್ತಿರಿ.
2018 ಕ್ಕಿಂತ ಹಿಂದೆ ಯಾರು ಯಾರು ಬೆಳೆ ಸಾಲ ಪಡೆದಿದ್ದರೋ ಅವರಲ್ಲಿ ಕೆಲವು ರೈತರಿಗೆ ಮಾತ್ರ ಬೆಳೆ ಸಾಲಮನ್ನಾ ಆಗಿದೆ. ಅದರಲ್ಲಿ ಇನ್ನೂ ಹಲವಾರು ರೈತರು ಆಧಾರ್ ಕಾರ್ಡ್, ರೇಶನ್ ಕಾರ್ಡ್, ಜಮೀನಿನ ದಾಖಲೆ ಹಾಗೂ ಬ್ಯಾಂಕ್ ಖಾತೆ ನಿಷ್ಕ್ರಿಯ ಹೀಗೆ ಕೆಲವು ತಾಂತ್ರಿಕ ಕಾರಣಗಳಿಂದ ಸಾಲಮನ್ನಾ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಕೆಲವು ರೈತರು ಸಾಲಮನ್ನಾ ಷರತ್ತಿಗೊಳಪಡದೆ ಇನ್ನೂ ವಂಚಿತರಾಗಿದ್ದಾರೆ.
ಕೊನೆಯದಾಗಿ ನಿಮ್ಮ ಆಧಾರ್ ನಂಬರ್ ಅನ್ನು ನಮೂದಿಸಿ ನಿಮ್ಮ ಬೆಳೆ ಸಾಲ ಎಷ್ಟು ಮನ್ನಾ ಆಗಿದೆ ಇಲ್ಲಿ ತಿಳಿದುಕೊಳ್ಳಿ 👇🏻
https://clws.karnataka.gov.in/clws/pacs/citizenreport/
ಮೊದಲಿಗೆ ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ CLWS (ನಾಗರಿಕರ ವರದಿ) ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ ಬೆಳೆಸಾಲ ಮನ್ನಾ ವರದಿ ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ತಿಳಿಯಬೇಕು.
• ನಂತರ ಅಲ್ಲಿ ಆಧಾರ್ ಕಾರ್ಡ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆಸಾಲ ಮನ್ನಾ ಬಗ್ಗೆ ಮಾಹಿತಿ ಪಡೆಯುವುದು.
ಗ್ಯಾರಂಟಿಗಳ ಅನುಷ್ಠಾನಗೊಳಿಸುವ ಭರದಲ್ಲಿಉಳಿದ ಕಾರ್ಯಗಳ ಕಡೆಗಣನೆ ಮಾಡಲಾಗಿದೆ. ಗ್ಯಾರಂಟಿ ಜಾರಿಗೆ ಹೆಚ್ಚು ಸಮಯ ಕೊಟ್ಟು ಆರ್ಥಿಕ ಹೊರೆ ಅವರೇ ತಂದು ಕೊಂಡಿದ್ದಾರೆ. ಜಿಲ್ಲಾಧಿಕಾರಿಗಳಪಿಡಿಓಖಾತೆಯಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 800 ಕೋಟಿ ರು. ಮೀಸಲಿಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಬರಪೀಡಿತ 216 ತಾಲೂಕುಗಳ ನಷ್ಟದ ಬಗ್ಗೆ ಮಾಹಿತಿ ನೀಡಿದೆ. ರಾಜ್ಯ ಸರ್ಕಾರ ನೀಡಿರುವ ಅಂದಾಜಿನ ಪ್ರಕಾರ ರೈತರು ಅನುಭವಿಸಿರುವ ಬೆಳೆ ನಷ್ಟದ ಶೇ.10ರಷ್ಟು ಬೆಳೆ ನಷ್ಟಕ್ಕೂ ಪರಿಹಾರ ಕೊಡಲಾಗುವುದಿಲ್ಲ. ಹೀಗಾಗಿ ರೈತರು ಸರ್ಕಾರದಿಂದ ನೆರವು ಬಯಸುತ್ತಿದ್ದಾರೆ ಎಂದರು.
ಕೊಬ್ಬರಿ ಖರೀದಿ ಕೇಂದ್ರ ಪುನಾರಂಭ ಮಾಡಲು ಆಗ್ರಹ: ಕೊಬರಿ ಬೆಳೆಗಾರರ ಸಂಕಷ್ಟವನ್ನು ಸದನದಲ್ಲಿ ವಿವರಿಸಿದ ಕುಮಾರಸ್ವಾಮಿ, ರೈತರಿಗೆ ಅನುಕೂಲವಾಗಲು ತಕ್ಷಣವೇ ಕೊಬರಿ ಖರೀದಿ ಕೇಂದ್ರಗಳನ್ನು ಮರು ಆರಂಭ ಮಾಡಬೇಕು. ಕೊಬ್ಬರಿ ಬೆಲೆ ಈ ಹಿಂದೆ ಕ್ವಿಂಟಾಲ್ ಗೆ 18 ಸಾವಿರ ರು ಇತ್ತು. ಈಗ 7,500 ರುಗೆ ಬಂದಿದೆ. ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ನಾಫೆಡ್ ಗೆ ಎಷ್ಟು ಪತ್ರ ಬರೆದರೂ ಉಪಯೋಗ ಇಲ್ಲದಾಗಿದೆ ಎಂದು ಹೇಳಿದರು.ರಾಜ್ಯದಲ್ಲಿ ಬರ ಘೋಷಣೆಯಾಗಿ ತಿಂಗಳುಗಳೇ ಕಳೆದರೂ ರಾಜ್ಯ ಸರ್ಕಾರವು ಯಾವುದೇ ಪರಿಹಾರ ಕ್ರಮಗಳನ್ನೂ ಕೈಗೊಂಡಿಲ್ಲ. ರೈತರ ಬಗ್ಗೆ ಬದ್ಧತೆಯಿದ್ದರೆ ಕೂಡಲೇ ಎಲ್ಲಾ ರೈತರ 2 ಲಕ್ಷ ರು.ವರೆಗಿನ ಸಾಲ ಮನ್ನಾ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ವಿಧಾನಸಭೆಯಲ್ಲಿ ಬರಗಾಲ ಕುರಿತ ವಿಶೇಷ ಚೆರ್ಚೆ ಮುಂದುವರಿಸಿ ಗುರುವಾರವೂ ಮಾತನಾಡಿದ ಅವರು, ಬರಗಾಲದಿಂದ ಕಂಗಾಲಾಗಿರುವ ರೈತ ಸಮುದಾಯದ ನೆರವಿಗೆ ಸರ್ಕಾರ ಬಂದಿಲ್ಲ. ಅವರ ಪಾಲಿಗೆ ಸತ್ತಂತಿರುವ ಕಟುಕ ಸರ್ಕಾರದಿಂದಾಗಿ ರೈತರು ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ರಾಷ್ಟ್ರೀಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿನ ಎಲ್ಲಾ ರೈತರ ಎರಡು ಲಕ್ಷ ರು. ವರೆಗಿನ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ತಲಾ 5 ಕೋಟಿ ರು. ಅನುದಾನ ನೀಡಿ:ಇನ್ನು ಕುಡಿಯುವ ನೀರು, ಮೇವು ಮತ್ತಿತರ ಸಿದ್ಧತೆಗಳಿಗಾಗಿ ಶಾಸಕರ ಅಧ್ಯಕ್ಷತೆಯ ಟಾಸ್ಕ್ ಫೋರ್ಸ್ ಗಳಿಗೆ ಪರಮಾಧಿಕಾರ ನೀಡಿ ಪ್ರತಿ ತಾಲ್ಲೂಕಿಗೆ ಐದು ಕೋಟಿ ರು. ನೀಡಬೇಕು. ಸ್ಥಗಿತಗೊಳಿಸಿರುವ ವಿದ್ಯಾನಿಧಿ ಯೋಜನೆ ಮತ್ತೆ ಆರಂಭಿಸಬೇಕು. ಪ್ರಧಾನಮಂತ್ರಿ ಕೃಷಿ ಸಮ್ಮಾನ್ ನಿಧಿಗೆ ರಾಜ್ಯದಿಂದ ನೀಡುತ್ತಿದ್ದ ಹೆಚ್ಚುವರಿ4ಸಾವಿರರು.ಗಳನ್ನು ಮುಂದುವರೆಸಬೇಕು. ಹಿಂದಿನ ಅವಧಿಯಲ್ಲಿ ನೆರೆ ಉಂಟಾದಾಗ ನಮ್ಮ ಸರ್ಕಾರ 10 ಕೆ.ಜಿ. ಅಕ್ಕಿ, 1ಕೆ.ಜಿ. ತೊಗರಿ ಬೇಳೆ ಸೇರಿದಂತೆ ಎಲ್ಲಾ ಆಹಾರ ಧಾನ್ಯಗಳುಳ್ಳ ಡ್ರೈ ಕಿಟ್ ವಿತರಿಸಿತ್ತು. ಅದನ್ನು ತಕ್ಷಣ ಮಾಡಬೇಕು ಎಂದು ಆಗ್ರಹಿಸಿದರು.
ಬರಗಾಲದ ವೇಳೆ ಗರ್ಭಿಣಿಯರು, ಬಾಣಂತಿಯರು ಮತ್ತು ನವಜಾತ ಶಿಶುಗಳಿಗೆ ಪೌಷ್ಠಿಕ ಆಹಾರ ಒದಗಿಸಬೇಕು, ಜಾನುವಾರುಗಳಿಗೆ ಬರಗಾಲದಲ್ಲಿ ಬರಬಹುದಾದ ಕಾಯಿಲೆಗಳಿಂದ ರಕ್ಷಿಸಲು ಲಸಿಕೆ ಹಾಕಬೇಕು ಎಂದರು. ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಅಶೋಕ್
ರಾಜ್ಯದಲ್ಲಿನ ಬರದ ಬಗ್ಗೆ ರಾಜ್ಯ ಸರ್ಕಾರವು ರೈತರಿಗೆ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ. ಅಧಿವೇಶನ ಶುರುವಾಗುತ್ತಿದೆ ಎಂಬ ಕಾರಣಕ್ಕೆ 2 ಸಾವಿರ ರು.ವರೆಗೆ ಪರಿಹಾರ ಕಲ್ಪಿಸುವುದಾಗಿ ಹೇಳದಿದ್ದಾರೆ. ಈ ಹಣ ನೀಡಲೂ ಒಂದು ವಾರ ಯಾಕೆ ಬೇಕು? ಇದೆಲ್ಲವನ್ನೂ ನೋಡುತ್ತಿದ್ದರೆ ರಾಜ್ಯ ಸರ್ಕಾರ ದಿವಾಳಿಯಾದಂತಿದ್ದು, ಕೂಡಲೇ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯ ಮಾಡಿದರು. ನಮ್ಮ ಸರ್ಕಾರ ಅಧಿಕಾರಲ್ಲಿದ್ದಾಗ 5 ವರ್ಷದಲ್ಲಿ ನೆರೆ, ಬರ ಪರಿಹಾರಕ್ಕಾಗಿ 6,651 ಕೋಟಿ ರು. ಪರಿಹಾರ ಬಿಡುಗಡೆ ಮಾಡಲಾಗಿತ್ತು. ಮಳೆಯಾಶ್ರಿತ ಬೆಳೆಗೆ ಎನ್ ಡಿಆರ್‌ಎಫ್ ನಿಧಿಯಡಿ 6,500 ರು. ನೀಡಲು ಅವಕಾಶವಿದ್ದರೆ ನಮ್ಮ ಸರ್ಕಾರ 13 | ಸಾವಿರ ರು. ಬಿಡುಗಡೆ ಮಾಡಿತ್ತು. ನಾವೇ ಅಷ್ಟು ಹಣ ಬಿಡುಗಡೆ ಮಾಡಿರುವಾಗ, 14 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರಿಗೆ ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/BV4GiFXeLXJKfXFJFZSiGj
2 ಲಕ್ಷದ ವರೆಗೆ ರೈತರ ಸಾಲ ಮನ್ನಾ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. 2 ಲಕ್ಷದ ವರೆಗೆ ರೈತರ ಸಾಲ ಮನ್ನಾ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
➡️ ರೈತರಿಗೆ ಬೆಳೆವಿಮೆ ಹಣ ಜಮೆಯಾಗಿದೆ 🙏🏻 ಯಾವ ಬೆಳೆಗೆ ಎಷ್ಟು ಜಮೆಯಾಗಿದೆ,! ತಪ್ಪದೇ ನಿಮ್ಮ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ 👇🏻 https://krushivahini.com/2023/12/10/intermediate-crop-insurance-released/