Crop loan waiver status check :- ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇಂದಿನ ದಿನ ನಾವು ರೈತರಿಗೆ ಬೆಳೆ ಸಾಲ ಮನ್ನಾದ ಸಂಪೂರ್ಣ ಅಪ್ಡೇಟ್ ಕೊಡಲಿದ್ದೇವೆ. ಹೌದು ಸ್ವಲ್ಪ ಜನ ರೈತರಿಗೆ ಬೆಳೆ ಸಾಲ ಮನ್ನಾ ಆಗಿದೆ ಇನ್ನು ಸ್ವಲ್ಪ ಜನ ರೈತರಿಗೆ ಬೆಳೆ ಸಾಲ ಮನ್ನಾ ಇನ್ನೂ ಆಗಿಲ್ಲ. ದಯವಿಟ್ಟು ಈ ಲೇಖನವನ್ನು ಕೊನೆಯವರೆಗೂ ಓದಿ ನಿಮಗೆ ಯಾಕೆ ಬೆಳೆ ಸಾಲ ಮನ್ನಾ ಆಗಿಲ್ಲ ಎಂಬುದನ್ನು ತಿಳಿದುಕೊಳ್ಳಿ..
ಈ ಕೆಳಗೆ ತೋರಿಸುವ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಬೆಳೆ ಸಾಲ ಮನ್ನಾ ಆಗಿದೆ ಎಂದು ಅರ್ಥ
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಸಂಕಷ್ಟಕ್ಕೊಳಗಾ ಗಿರುವ ರೈತರ ನೆರವಿಗೆ ಸರ್ಕಾರವು ಧಾವಿಸಬೇಕಾದ ಅಗತ್ಯವಿದ್ದು, ಎರಡು ಲಕ್ಷ ರು.ವರೆಗಿನ ಕೃಷಿ ಸಾಲಮನ್ನಾ ಮಾಡುವುದರ ಜತೆಗೆ ತಕ್ಷಣ 10 ಸಾವಿರ ಕೋಟಿ ರು. ಅನುದಾನವನ್ನು ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಗುರುವಾರ ಬರಗಾಲ ವಿಷಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಪ್ರಚಾರದ ಮೇಲೆ ಇರುವ ಆಸಕ್ತಿ ರೈತರ ಬಗ್ಗೆ ಇಲ್ಲ.
ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಅಸಡ್ಡೆತನ ಆಶ್ಚರ್ಯವನ್ನುಂಟು ಮಾಡಿದೆ. ಕಳೆದ ಆರು ತಿಂಗಳಿನಿಂದ ಕೇವಲ ಗ್ಯಾರಂಟಿಗಳ ಬಗ್ಗೆಯೇ ಕೆಲಸ ಮಾಡುತ್ತಿರುವ ಈ ಸರ್ಕಾರ, ಆರ್ಥಿಕ ಹೊರೆಯನ್ನು ತನ್ನ ಮೇಲೆ ಎಳೆದುಕೊಂಡು ರೈತರಿಗೆ ಪ್ರತಿಯೊಂದಕ್ಕೂ ಬರೆ ಎಳೆಯುತ್ತಿದೆ. ಬೆಳೆ ನಾಶದಿಂದ ಅತೀವ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಸಾಲಮನ್ನಾ ಮೂಲಕ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
ನಿಮಗೆ ತಿಳಿದ ಹಾಗೆ 2018 ರಲ್ಲಿ 1 ಲಕ್ಷ ರೂಪಾಯಿಯವರೆಗೆ ರೈತರಿಗೆ ಬೆಳೆ ಸಾಲ ಮನ್ನಾ ಘೋಷಣೆ ಮಾಡಲಾಗಿತ್ತು. ಆಗ ತಾಂತ್ರಿಕ ಸಮಸ್ಯೆ ಯಿಂದ ಕೆಲವು ರೈತರಿಗೆ ಸಾಲಮನ್ನಾ ಭಾಗ್ಯ ಸಿಕ್ಕಿರಲಿಲ್ಲ. ನಂತರ ಕೆಲವು ರೈತರ ದಾಖಲೆಗಳು ಸರಿಪಡಿಸಿದ್ದರಿಂದ ಅವರಿಗೆ ಸಾಲಮನ್ನಾ ಆಗಿತ್ತು. ಆದರೆ ಇನ್ನೂ ಕೆಲವು ರೈತರಿಗೆ ಸಾಲ ಮನ್ನಾ ಆಗಿಲ್ಲ.
ನಿಮಗೆ ಇನ್ನೂ ಆದರೂ ಬೆಳೆ ಸಾಲ ಮನ್ನಾ ಆಗಿಲ್ಲವೇ? ಏಕೆ ಬೆಳೆ ಸಾಲ ಮನ್ನಾ ಆಗಿಲ್ಲ?? ತಪ್ಪದೆ ತಿಳಿಯಿರಿ
ಬಹಳಷ್ಟು ರೈತರು ನಮ್ಮ ಬೆಳೆ ಸಾಲ ಮನ್ನಾ ಆಗಿಲ್ಲ ಎಂದು ಹೇಳುತ್ತಾರೆ. ಆದರೆ ಸಾಲ ಮನ್ನಾ ಮಾಡಲು ಕೆಲವು ದಾಖಲೆ ಮತ್ತು ಅರ್ಹತೆಗಳು ಮುಖ್ಯ,
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸಾಲ ಮನ್ನಾ ಆಗಲು ಬೇಕಾದ ಅರ್ಹತೆ ಹಾಗೂ ದಾಖಲಾತಿಗಳನ್ನು ನೋಡಬಹುದು. 👇🏻
https://mahitikanaja.karnataka.gov.in/department
ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..
ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ
ನಂತರ clws ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿನಂತರ ಮುಂದಿನ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ, ಮತ್ತು ಬ್ಯಾಂಕ್ ಸೆಲೆಕ್ಟ್ ಮಾಡಿ, ಸಲ್ಲಿಸು ಮೇಲೆ ಕ್ಲಿಕ್ ಮಾಡಿ.ನಂತರ ಈ ಕೆಳಗೆ ಸೂಚಿಸಿರುವ ಸಾಲ ಮನ್ನಾ ಅರ್ಹತೆ ಹಾಗೂ ದಾಖಲೆಗಳನ್ನು ನೀವು ನೋಡಬಹುದು.ಹಾಗೂ ಸಾಲ ಮನ್ನಾ ಸ್ಥಿತಿ ಗತಿ ಯನ್ನು ಅಲ್ಲಿ ಕಾಣುತ್ತಿರಿ..
ಯಾವ ಯಾವ ರೈತರು ಸಾಲಮನ್ನಾ ಪಟ್ಟಿಯಲ್ಲಿದ್ದಾರೆ ಎಂಬುದನ್ನು ಈ ಕೆಳಗಿನಂತೆ ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ 👇🏻
ವಾಣಿಜ್ಯ ಬ್ಯಾಂಕ್ ಸಾಲ ಪಡೆದ ರೈತರ ಪಟ್ಟಿ ಯನ್ನು ಇಲ್ಲಿ ನೋಡಿ?? ನಿಮ್ಮ ಹೆಸರಿದೆಯೆ ಇಲ್ಲಿ ಚೆಕ್ ಮಾಡಿಕೊಳ್ಳಿ..👇🏻
ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..
➡️ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ನಿಮ್ಮ ಸಾಲ ಮನ್ನಾ ಎಷ್ಟು ಆಗಿದೆ ಎಂದು ಇಲ್ಲಿ ಚೆಕ್ ಮಾಡಿಕೊಳ್ಳಿ..
ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ
ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..
2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಬೆಳೆ ಸಾಲಮನ್ನಾ ಘೋಷಣೆ ಮಾಡಿದ್ದರು. ಆ ಬೆಳೆ ಸಾಲಮನ್ನಾ ವರದಿಯನ್ನು ಚೆಕ್ ಮಾಡಬಹುದು. ಅದಾದ ನಂತರ ಬಿಜೆಪಿ ಸರ್ಕಾರವಾಗಲಿ ಅಥವಾ ಕಾಂಗ್ರೆಸ್ ಸರ್ಕಾರವಾಗಲಿ ರೈತರ ಬೆಳೆ ಸಾಲಮನ್ನಾ ಘೋಷಣೆ ಮಾಡಿಲ್ಲ. ಅದ ಕಾರಣ ಈಗ ರೈತರಿಗೆ ಯಾವುದೇ ತರಹದ ಬೆಳೆ ಸಾಲಮನ್ನಾಆಗಿಲ್ಲ.
2018 ಕ್ಕಿಂತ ಹಿಂದೆ ಯಾರು ಯಾರು ಬೆಳೆ ಸಾಲ ಪಡೆದಿದ್ದರೋ ಅವರಲ್ಲಿ ಕೆಲವು ರೈತರಿಗೆ ಮಾತ್ರ ಬೆಳೆ ಸಾಲಮನ್ನಾ ಆಗಿದೆ. ಅದರಲ್ಲಿ ಇನ್ನೂ ಹಲವಾರು ರೈತರು ಆಧಾರ್ ಕಾರ್ಡ್, ರೇಶನ್ ಕಾರ್ಡ್, ಜಮೀನಿನ ದಾಖಲೆ ಹಾಗೂ ಬ್ಯಾಂಕ್ ಖಾತೆ ನಿಷ್ಕ್ರಿಯ ಹೀಗೆ ಕೆಲವು ತಾಂತ್ರಿಕ ಕಾರಣಗಳಿಂದ ಸಾಲಮನ್ನಾ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಕೆಲವು ರೈತರು ಸಾಲಮನ್ನಾ ಷರತ್ತಿಗೊಳಪಡದೆ ಇನ್ನೂ ವಂಚಿತರಾಗಿದ್ದಾರೆ..
➡️ ಕೊನೆಯದಾಗಿ ನಿಮ್ಮ ಆಧಾರ್ ನಂಬರ್ ಅನ್ನು ನಮೂದಿಸಿ ನಿಮ್ಮ ಬೆಳೆ ಸಾಲ ಎಷ್ಟು ಮನ್ನಾ ಆಗಿದೆ ಇಲ್ಲಿ ತಿಳಿದುಕೊಳ್ಳಿ 👇🏻
https://clws.karnataka.gov.in/clws/pacs/citizenreport/
ಮೊದಲಿಗೆ ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ CLWS (ನಾಗರಿಕರ ವರದಿ) ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ ಬೆಳೆಸಾಲ ಮನ್ನಾ ವರದಿ ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ತಿಳಿಯಬೇಕು.
• ನಂತರ ಅಲ್ಲಿ ಆಧಾರ್ ಕಾರ್ಡ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆಸಾಲ ಮನ್ನಾ ಬಗ್ಗೆ ಮಾಹಿತಿ ಪಡೆಯುವುದು.
ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/BV4GiFXeLXJKfXFJFZSiGj
ಸಾಲ ಮನ್ನಾ ಸ್ಟೇಟಸ್ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಸಾಲ ಮನ್ನಾ ಸ್ಟೇಟಸ್ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.