Yuva nidhi yojana big update :- ಸಾರ್ವತ್ರಿಕ ಚುನಾವಣೆ 2023 ರ ಅವಧಿಯಲ್ಲಿ ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿತ್ತು.

ಅದಕ್ಕೆ ತಕ್ಕಂತೆ ಈಗಾಗಲೇ ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಗಳು ಆರಂಭವಾಗಿವೆ. ಇದರ ಪ್ರಯೋಜನಗಳು ಕೂಡ ಜನರಿಗೆ ಲಭ್ಯವಾಗಿದೆ. ಹೌದು ಆದರೆ ಇದುವರೆಗೂ ಆದರೂ ಐದನೇ ಗ್ಯಾರಂಟಿ ಯೋಜನೆಯ ಬಗ್ಗೆ ಮಾಹಿತಿಯು ಸಿಕ್ಕಿದ್ದಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯನವರು 5ನೇ ಗ್ಯಾರಂಟಿ ಯೋಜನೆಗೆ ಚಾಲನೆಗೆ ಸಿದ್ಧತೆ ಆರಂಭವಾಗಿದೆ.

ಇನ್ನು ಕೊನೆಯದಾಗಿ ಯುವಕರಿಗೆ ಸಹಾಯಕವಾಗುವಂತಹ ಯುವನಿಧಿ ಯೋಜನೆ ಮಾತ್ರ ಜಾರಿಗೆ ಬರುವುದು ಬಾಕಿ ಇದೆ. ಸದ್ಯದಲ್ಲೇ ಈ ಯುವನಿಧಿ ಯೋಜನೆ ಜಾರಿಗೆ ಬರುತ್ತದೆ ಎಂದು ಹೇಳಿದ ಸಿದ್ದರಾಮಯ್ಯ.

ಇವನಿಗೆ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಸರಿಯಾಗಿರಬೇಕು?

ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವರು ಮುಖ್ಯವಾಗಿ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು..

ಹಾಗೂ ಅರ್ಜಿದಾರರು ಪದವೀಧರರಾಗಿರಬೇಕು ಅಥವಾ ಡಿಪ್ಲೊಮಾ ಹೊಂದಿರಬೇಕು.

ಅರ್ಜಿದಾರರು 2022-2023 ರಲ್ಲಿ ಅವನ / ಅವಳ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿದಾರರು ಪದವಿ ಅಥವಾ ಡಿಪ್ಲೊಮಾ ತೇರ್ಗಡೆಯಾದ ದಿನಾಂಕದ ನಂತರ ಕನಿಷ್ಠ 180 ದಿನಗಳವರೆಗೆ ನಿರುದ್ಯೋಗಿಯಾಗಿರಬೇಕು.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇವರಿಗೆ ಬರೋಲ್ಲ??

ಹೌದು ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾದ ನಂತರ ಉನ್ನತ ಶಿಕ್ಷಣವನ್ನು ಮುಂದುವರಿಸುವ ಯುವಕರು.

ಅಪ್ರೆಂಟಿಸ್‌ ವೇತನದ ಫಲಾನುಭವಿ.

ಸ್ವಯಂ ಉದ್ಯೋಗ ಮಾಡಿಕೊಂಡಿರುವ ಯುವಕರು/ ಯುವತಿಯರು.

ಸರ್ಕಾರದ ಇತರೆ ಯೋಜನೆಯಲ್ಲಿ ಆರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳು.

ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ನೀಡಲು ಸರ್ಕಾರ ನಿರ್ಧರಿಸಿದೆ.

ಯುವನಿಧಿ ಯೋಜನೆಯಡಿ ಇಷ್ಟು ಹಣ ನಿಮಗೆ ಸಿಗುತ್ತದೆ.?

ಯುವನಿಧಿ ಯೋಜನೆಯ ಅಡಿಯಲ್ಲಿ 2022 ನೇ ಸಾಲಿನಲ್ಲಿ ಪದವಿ ತರಗತಿ ಮುಗಿಸಿ ಕೆಲಸ ಸಿಗದೇ ನಿರುದ್ಯೋಗಿಗಳಾಗಿ ಇರುವ ಯುವಕರಿಗೆ ಪ್ರತಿ ತಿಂಗಳು ಎರಡು ವರ್ಷಗಳ ಅವಧಿಗೆ 3,000 ರೂ. ಗಳನ್ನು ಸರ್ಕಾರ ನೀಡುತ್ತದೆ.

ಡಿಪ್ಲೋಮಾ ಕೋರ್ಸ್ ಮುಗಿಸಿದವರಿಗೆ ರೂ.1500 ಗಳನ್ನು ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪಡೆದುಕೊಳ್ಳಬಹುದು. https://sevasindhugs.karnataka.gov.in/index.html

ಈ ನಿರುದ್ಯೋಗ ಭತ್ಯೆ ಯೋಜನೆ ಎರಡು ವರ್ಷಗಳ ಅವಧಿಗೆ ಮಾತ್ರ ಸೀಮಿತವಾಗಿದ್ದು ಅಷ್ಟರಲ್ಲಿ ಯುವಕ ಯುವತಿಯರು ಕೆಲಸ ಹುಡುಕಿಕೊಳ್ಳಬೇಕು ಎನ್ನುವುದು ಸರ್ಕಾರದ ಉದ್ದೇಶ.

ಯುವನಿಧಿ ಯೋಜನೆಯನ್ನು ಜಾರಿಗೆ ತರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ನಾವು ಕೇವಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದರಲ್ಲಿ ಮಾತ್ರ ಸೀಮಿತವಾಗಿಲ್ಲ ಇತರ 147 ಘೋಷಣೆಯಾಗಿರುವ ಯೋಜನೆಯ ಅಡಿ 83 ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ. ಅದೇ ರೀತಿ ನಾಲ್ಕು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ನಡೆಯುತ್ತಿವೆ. ರಾಜ್ಯ ಸರ್ಕಾರ ಅಭಿವೃದ್ಧಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿ ಯುವನಿಧಿ ಯೋಜನೆಯ ಬಗ್ಗೆಯೂ ಕೂಡ ತಿಳಿಸಿರುವ ಮಾನ್ಯ ಮುಖ್ಯಮಂತ್ರಿಗಳು, ಸದ್ಯದಲ್ಲಿಯೇ ಯೋಜನೆಗೆ ಚಾಲನೆ ನೀಡುವ ಭರವಸೆ ಕೊಟ್ಟಿದ್ದಾರೆ.

ನಮ್ಮ ಸಾಧನೆಗಳು ಸದನದ ಒಳಗೆ ಮತ್ತು ಹೊರಗೆ ಕೇವಲ ಕಾಗದಪತ್ರಗಳಿಗೆ ಮಾತ್ರ ಸೀಮಿತವಾಗಿರದೆ ಎಲ್ಲ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದರ ಜೊತೆಗೆ ನಿರುದ್ಯೋಗಿ ಯುವಕರಿಗೆ ಆರ್ಥಿಕ ಸಹಾಯ ನೀಡುವಂತಹ ಯುವ ನಿಧಿ ಯೋಜನೆ ಇದೇ ಬರುವ ಜನವರಿ 2024 ರಿಂದ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಬಹುದು. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ನಿರುದ್ಯೋಗಿ ಭತ್ಯೆ ಪಡೆದುಕೊಳ್ಳಲು ಬಯಸುವ ಯುವಕರು ಅಗತ್ಯ ಇರುವ ದಾಖಲೆಗಳನ್ನು ಕೂಡಲೇ ಸಿದ್ಧಪಡಿಸಿಕೊಳ್ಳಿ.

ನಿರುದ್ಯೋಗಿ ಭತ್ಯೆ ಪಡೆದುಕೊಳ್ಳಲು ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ, ಡಿಪ್ಲೋಮಾ ಕೋರ್ಸ್ ಗಳಲ್ಲಿ ತೇರ್ಗಡೆ ಹೊಂದಿರುವ ಬಗ್ಗೆ ಅಂಕಪಟ್ಟಿ, ಬ್ಯಾಂಕ್ ಖಾತೆಯ ವಿವರಗಳು ಇಂತಹ ಕೆಲವು ಬೇಸಿಕ್ ದಾಖಲೆಗಳು ಬೇಕು. ಇದರ ಹೊರತಾಗಿ ಯುವ ನಿಧಿ ಯೋಜನೆಗೆ ಯಾವುದೆಲ್ಲ ಕಂಡಿಶನ್ ಇರಬಹುದು ಎಂಬುದನ್ನು ಸದ್ಯದಲ್ಲಿಯೇ ಸರ್ಕಾರ ಬಹಿರಂಗಪಡಿಸಲಿದೆ.

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ಯುವನಿಧಿ ಯೋಜನೆ ಸಧ್ಯದಲ್ಲಿ ಆರಂಭ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಯುವನಿಧಿ ಯೋಜನೆ ಸಧ್ಯದಲ್ಲಿ ಆರಂಭ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *