Interest on Farmers Loan Manna C M Siddaramaiah Statement :- ಪ್ರಿಯ ಮಿತ್ರರೇ ಸರ್ಕಾರವು ರೈತರಿಗೆ ಮತ್ತೊಂದು ಸಿಹಿ ಸುದ್ದಿ ಹೊರಡಿಸಿದೆ. ರೈತರಿಗೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು ರೈತರ ಏಳಿಗೆಯ ದೃಷ್ಟಿಯಿಂದ ರೈತರಿಗೆ ಆರ್ಥಿಕ ಸ್ಥಿತಿ ನೆರವು ನೀಡಲು ಸರ್ಕಾರ ನಿರ್ಧರಿಸಿದೆ. ಕಿರು ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ರಾಜ್ಯದ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿರುವಂತ ಸಾಲದ ಅಸಲು ಕಟ್ಟಿದರೆ ಅದರ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಬಿಜೆಪಿಯವರು ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” ಎಂದು ಹೇಳಿದ್ದರು. ಆದರೆ ಬಿಜೆಪಿಯವರು ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ ಎಂದು ಅವಾಗ ಯಡಿಯೂರಪ್ಪ ಹೇಳಿದ್ದರು ಎಂದು ಸಿಎಂ ಕಿಡಿಕಾರಿದರು.

ಸದನವೆಂಬುದು ಸಾರ್ವಭೌಮ,ಇಲ್ಲಿ ಒಪ್ಪಿಗೆ ದೊರೆಯಬೇಕು. notional expenditure ಕೂಡ ಬಜೆಟ್ ನಲ್ಲಿ ಸೇರಿ ರೂ.3,452.1 ಕೋಟಿ, outflow 2531 ಕೋಟಿ ರೂ. ಆಗಿರುತ್ತದೆ. ಕೆಲವೊಂದು ವೆಚ್ಚಗಳು ಬಜೆಟ್ ನಲ್ಲಿ ನಮೂದಾಗಿರುವುದಿಲ್ಲ. ಆದರೆ ಪ್ರಕೃತಿ ವಿಕೋಪ, ಬರ ಪರಿಸ್ಥಿತಿ ನಿರ್ವಹಿಸಲು ಇಂತಹ ಸಂದರ್ಭಗಳಲ್ಲಿ ಹೆಚ್ಚುವರಿ ದುಡ್ಡು ಖರ್ಚಾಗುತ್ತದೆ. ರೈತರಿಗೆ 2,000 ರೂ. ನೀಡುತ್ತಿರುವುದು ತಾತ್ಕಾಲಿಕ ಮೊದಲನೇ ಕಂತು. ನಂತರ ಕೇಂದ್ರದ ದುಡ್ಡು ಬಂದ ಮೇಲೆ ಪೂರ್ಣ input subsidy ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳೆಸಾಲ ಎಂದರೇನು?

ಬೆಳೆಸಾಲ ಎಂದರೆ ರೈತರಿಗೆ ಸರ್ಕಾರದಿಂದ ಕೃಷಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಸರ್ಕಾರವು ಹಣವನ್ನು ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗುತ್ತದೆ. ಹಾಗೂ ಬೆಳೆಸಾಲವನ್ನು ಸರ್ಕಾರವು ಮೂರು ರೀತಿಯಲ್ಲಿ ನೀಡುತ್ತದೆ. ಅಲ್ಪಾವಧಿ ಸಾಲ, ದೀರ್ಘಾವಧಿ ಸಾಲ, ಹಾಗೂ ಮಧ್ಯಮಾವಧಿ ಸಾಲ, ಹೀಗೆ ಜಮೀನಿನ ಆಧಾರದ ಮೇಲೆ ಸರ್ಕಾರವು ಸಾಲವನ್ನು ನೀಡುತ್ತಿದೆ.

ಏನಿದು ಬೆಳೆಸಾಲ ಮನ್ನಾ?

ಬೆಳೆಸಾಲ ಎನ್ನುವುದು ರೈತರಿಗೆ ಕೃಷಿಯಲ್ಲಿ ಉತ್ಪನ್ನಗಳನ್ನು ತೆಗೆಯಲು ಚಟುವಟಿಕೆಗಳಿಗೆ ಸರ್ಕಾರವು ಸಾಲದ ರೂಪದಲ್ಲಿ ಹಣವನ್ನು ರೈತರಿಗೆ ನಿಡುತ್ತದೆ. ಅದೇ ರೀತಿ ರೈತರು ಆ ಸಾಲವನ್ನು ಕಡಿಮೆ ಬಡ್ಡಿ ದರದಲ್ಲಿ ಸಾಲ ಪಾವತಿ ಮಾಡುವ ನಿಯಮ ಇರುತ್ತದೆ. ಹಾಗಾಗಿ ರೈತರಿಗೆ ಕೃಷಿಯಲ್ಲಿ ಆರ್ಥಿಕ ಉತ್ತೇಜನ ನೀಡಲು ಸರ್ಕಾರವು ಮೂರು ವಿಧಗಳಲ್ಲಿ ಸಾಲವನ್ನು ನೀಡುತ್ತಿದೆ. ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ಹೀಗೆ ನೀಡುತ್ತಿದೆ.

ಬೆಳೆಸಾಲ ಮನ್ನಾ ಸ್ಟೇಟಸ ಹೇಗೆ ಚೆಕ್ ಮಾಡಬೇಕು?

ಬನ್ನಿ ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಮಾಡುವ ವಿಧಾನ ತಿಳಿಯೋಣ. ನಿಮ್ಮ ಬೆಳೆ ಮೇಲೆ ಇರುವ ಸಾಲವನ್ನು ಸರ್ಕಾರವು ಮನ್ನಾ ಮಾಡಿದೆಯೋ ಅಥವಾ ಇಲ್ಲವೇ ಎಂಬುದನ್ನು ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ತಿಳಿಯಬಹುದು‌.

• ಮೊದಲಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡಬೇಕು👇🏻 https://clws.karnataka.gov.in/clws/pacs/citizenreport/

• ನಂತರ ಅಲ್ಲಿ service for citizens (ನಾಗರಿಕ ಸೇವೆಗಳು) ಎಂದು ತೋರಿಸುತ್ತದೆ.

• ನಂತರ ಅಲ್ಲಿ CLWS (ನಾಗರಿಕರ ವರದಿ) ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.

• ನಂತರ ಅಲ್ಲಿ ಬೆಳೆಸಾಲ ಮನ್ನಾ ವರದಿ ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ತಿಳಿಯಬೇಕು.

• ನಂತರ ಅಲ್ಲಿ ಆಧಾರ್ ಕಾರ್ಡ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆಸಾಲ.ಮನ್ನಾ ಬಗ್ಗೆ ಮಾಹಿತಿ ಪಡೆಯುವುದು.

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ರೈತರ ಸಾಲ ಮೇಲಿನ ಬಡ್ಡಿ ಮನ್ನಾ ಕುರಿತು :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ರೈತರ ಸಾಲ ಮೇಲಿನ ಬಡ್ಡಿ ಮನ್ನಾ ಆಗುತ್ತದೆಯೇ ಇಲ್ಲವೋ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *