Proposal to central govt to provide immediate drought relief :-

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರು ತುರ್ತು ಪರಿಹಾರಕ್ಕಾಗಿ 566.78 ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.

ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆ‌ರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಆಧಾರ್ ನಂಬರ್ ಹಾಕಿ ನಿಮ್ಮ FID ಸ್ಟೇಟಸ್ ತಿಳಿದುಕೊಳ್ಳಿ👇🏻 ನಿಮ್ಮ ಎಫ್ ಐ ಡಿ ಜನರೇಟ್ ಆಗಿದೆಯೋ ಇಲ್ಲವೋ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಎಫ್ ಐ ಡಿ ಜನರೇಟ್ ಆಗಿರುವುದು ನಿಮಗೆ ಕಾಣುತ್ತದೆ…

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

2023-24 ನೇ ಸಾಲಿನಲ್ಲಿ ಬರ ಪರಿಹಾರ ಪಡೆಯಲು ಪ್ರತಿ ತಾಲ್ಲೂಕಿನ ರೈತರು ತಮ್ಮ ಎಲ್ಲ ಪಹಣಿಗಳನ್ನು FRUITS ತಂತ್ರಾಂಶಕ್ಕೆ ನೋಂದಾಯಿಸಿ FID (Farmer ID) ಪಡೆಯಬೇಕಾಗಿರುತ್ತದೆ. ಇದಲ್ಲದೆ FID ಯು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ, PMKISAN ಯೋಜನೆಗಳಿಗೂ ಹಾಗೂ ಕೃಷಿ, ತೋಟಗಾರಿಕೆ ಮತ್ತು ಕೃಷಿ ಸಂಬಂಧಿತ ಇಲಾಖೆಗಳಲ್ಲಿ ರೈತರು ಸೌಲಭ್ಯಗಳನ್ನು ಪಡೆಯಲು ಅತ್ಯವಶ್ಯಕವಾಗಿರುತ್ತದೆ.

ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.

ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ) ನಿಮಗೆ ಸಿಗಲಿದೆ.

➡️ 🙏🏻 ನಿಮ್ಮ ಹೊಲದ ಎಷ್ಟು ಸರ್ವೇ ನಂಬರಗಳು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಯಾಗಿವೆ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻👇🏻

➡️ ಅದೇ ರೀತಿಯಾಗಿ ನೀವು ಅಲ್ಲಿ ಕಾಣುವ (registration status) ಮೇಲೆ ಕ್ಲಿಕ್ ಮಾಡಿದರೆ

ನಿಮ್ಮ ಹೊಲದ ಇಷ್ಟು ಸರ್ವೇ ನಂಬರ್ ಗಳು ಅಲ್ಲಿ ನೋಂದಣಿ ಯಾಗಿವೆ ಎಂಬ ಮಾಹಿತಿ ನಿಮಗೆ ಸಿಗುತ್ತದೆ.

ಒಂದು ವೇಳೆ ನಿಮ್ಮ ಹೊಲ 7 ಎಕರೆ ಇದ್ದಲ್ಲಿ ನೀವು ಕೇವಲ ಎರಡು ಎಕರೆ ನೊಂದಣಿ ಮಾಡಿದರೆ ನಿಮಗೆ ಬರ ಪರಿಹಾರವಾಗಿ ಎರಡು ಎಕರೆಗೆ ಸೀಮಿತವಾದ ಹಣ ಅಷ್ಟೇ ಬರುತ್ತದೆ. ಹಾಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ನೀವು ತಪ್ಪದೆ ನಿಮ್ಮ ಹೊಲದ ಸಂಪೂರ್ಣ ಮಾಹಿತಿಯನ್ನು ನೋಂದಣಿ ಮಾಡಬೇಕು.

ಹೀಗೆ ಬಂದಿರುವ FID ಯನ್ನು ಕೃಷಿ ಇಲಾಖೆ,ರೇಷ್ಮೆ, ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ನಂತರ FID ಯನ್ನು ಪಿ ಎಂ ಕಿಸಾನ್ ಯೋಜನೆ, ಬೆಳೆಸಾಲ, ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ನೀವು ಈ FID ಅನ್ನು ಬಳಸಬಹುದು.

➡️ ಈ ಕೆಲಸ ಮಾಡಿದರೆ ಮಾತ್ರ ಬರ ಪರಿಹಾರ ಹಣ ನಿಮಗೆ ಜಮೆ ಆಗುತ್ತದೆ.

ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಬರುತ್ತದೆ??

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿhttps://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ.

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮಗೆ ಪರಿಹಾರ ಹಣ ಬರುತ್ತದೆ.. ಹಾಗೂ ನಿಮಗೆ ಬಂದಿರುವ ಹಣದ ಬಗ್ಗೆ ಸಂಪೂರ್ಣ ಮಾಹಿತಿಯೂ ನಿಮಗೆ ಸಿಗುತ್ತದೆ..

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *