Siddaramaiah’s huge contribution to minority development :-
ಅಲ್ಪಸಂಖ್ಯಾತರಿಗೆ ಸಿದ್ದು ಬಂಪರ್ ಕೊಡುಗೆ..!
ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ತಯಾರಿಸಬೇಕು. ಈ ವೇಳೆ ಅಲ್ಪಸಂಖ್ಯಾತರು ಹೆಚ್ಚಾಗಿನೆಲೆಸಿರುವಹಾಗೂಮೂಲಸೌಕರ್ಯ ಗಳ ಕೊರತೆ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ ಅನುದಾನ ಹಂಚಿಕೆ ಮಾಡಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು(ಡಿ.30): ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿ ಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ತಯಾರಿಸಬೇಕು. ಈ ವೇಳೆ ಅಲ್ಪಸಂಖ್ಯಾತರು ಹೆಚ್ಚಾಗಿನೆಲೆಸಿರುವಹಾಗೂಮೂಲಸೌಕರ್ಯ ಗಳ ಕೊರತೆ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ ಅನುದಾನ ಹಂಚಿಕೆ ಮಾಡಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.
ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಹೆಚ್ಚುವರಿ 40 ಕೋಟಿ ರೂ :-
ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದೆ. ಈ ಹಿನ್ನೆ ಲೆಯಲ್ಲಿ ರಾಜ್ಯ ಸರ್ಕಾರವೇ ಕೇಂದ್ರದ ಪಾಲನ್ನೂ ಭರಿಸಲು ತೀರ್ಮಾನಿಸಿದೆ. ಪ್ರಸ್ತುತ 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದ್ದು, ಬಜೆಟ್ಟಲ್ಲಿ 60 ಕೋಟಿ ರು. ನಿಗದಿಯಾಗಿದೆ. ಕೇಂದ್ರದ ಪಾಲನ್ನೂ ಭರಿಸಬೇಕಿರುವ ಹಿನ್ನೆಲೆಯಲ್ಲಿ ಇಲಾಖಾ ಅನುದಾನದ ಮರು ಹಂಚಿ= ಮೂಲಕ 40 ಕೋಟಿ ರು. ಹೆಚ್ಚುವರಿ ಹಣ ವನ್ನೂ ವಿದ್ಯಾರ್ಥಿವೇತನಕ್ಕೆ ಬಳಕೆ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚಿಸಿದರು.
ಮುಂದಿನ ವರ್ಷ ಅನುದಾನ ಹೆಚ್ಚಳ: ಇನ್ನು ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗುತ್ತಿದೆ ಹೀಗಾಗಿ ಮುಂದಿನ ವರ್ಷ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹೆಚ್ಚಿನ ಅನುದಾನ ಒದಗಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ. ಈ ವೇಳೆ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮದ ಖಾನ್ ಸೇರಿದಂತೆ ಹಲವರು ಹಾಜರಿದರು.
ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/BV4GiFXeLXJKfXFJFZSiGj
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.
ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
ಪಿ ಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್
https://krushivahini.com/2023/12/30/when-will-16th-installment-of-pm-kisan-yojana-be-released-to-farmers/